ಕನ್ನಡಪ್ರಭ ವಾರ್ತೆ ಗೋಕಾಕ
ತಾಲೂಕಿನ ಖನಗಾಂವ ಗ್ರಾಮದಲ್ಲಿ ಸೋಮವಾರ ನಡೆದ ಲೋಕಸಭಾ ಚುನಾವಣೆ ಪ್ರಚಾರಾರ್ಥ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವ ಕಂಡು ಕಂಗಾಲಾಗಿರುವ ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಮೋದಿಯವರಂತಹ ನಾಯಕತ್ವ ದೇಶಕ್ಕೆ ಬೇಕಿದೆ. ಕಳೆದ 10 ವರ್ಷಗಳಲ್ಲಿ ಮಾಡಿರುವ ಸಾಧನೆಗಳು ನಮ್ಮ ಕಣ್ಮುಂದಿದೆ ಎಂದರು.
ಕಾಂಗ್ರೆಸ್ ಮೋದಿಯರನ್ನು ಟೀಕೆ ಮಾಡುವುದು ಬಿಟ್ಟು ಬೇರೆ ಯಾವುದೇ ಕೆಲಸ ಇಲ್ಲ. ಮೋದಿಯವರು ಪ್ರಧಾನಿಯಾಗುವ ಮುಂಚೆ ಭಾರತ ದೇಶ ಆರ್ಥಿಕ ಪ್ರಗತಿಯಲ್ಲಿ 14ನೇ ಸ್ಥಾನದಲ್ಲಿತ್ತು. ಸದ್ಯ 5ನೇ ಸ್ಥಾನಕ್ಕೆ ಬಂದಿದ್ದು, ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ 3ನೇ ಸ್ಥಾನ ತಲುಪಲಿದೆ. ಮುಂದಿನ ದಿನಗಳಲ್ಲಿ ದೇಶದ ಆರ್ಥಿಕತೆ 1ನೇ ಸ್ಥಾನಕ್ಕೆ ಬರಲಿದೆ ವಿಶ್ವಾಸ ವ್ಯಕ್ತಪಡಿಸಿದರು.ಜಗತ್ತಿನ ಜನಪ್ರಿಯ ವ್ಯಕ್ತಿ ಮೋದಿ. ಮೋದಿಯವರನ್ನು ಅಲುಗಾಡಿಸಲು ಕಾಂಗ್ರೆಸ್‌ನಿಂದ ಸಾಧ್ಯವಿಲ್ಲ. ಜನರ ದುಡಿದ ಆಸ್ತಿಯನ್ನು ಕಬಳಿಸಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ದೇಶದ ಅಭಿವೃದ್ಧಿಗೆ ಬಿಜೆಪಿ ಸರ್ಕಾರದ ಪಾತ್ರ ಮಹತ್ವದ್ದಾಗಿದೆ. ಸುರೇಶ ಅಂಗಡಿ ಬೆಳಗಾವಿ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ, ರೈಲುಗಳ ವ್ಯವಸ್ಥೆ, ಬ್ರೀಡ್ಜ್‌ಗಳ ನಿರ್ಮಾಣ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಉಳಿದ ಯೋಜನೆಗಳನ್ನು ಅನುಷ್ಠಾನಗೊಳಿಸುವುದರೊಂದಿಗೆ ಅವರ ಕನಸನ್ನು ನನಸು ಮಾಡುವ ಮೂಲಕ ಬೆಳಗಾವಿ ಜಿಲ್ಲೆಯನ್ನು ದೇಶದಲ್ಲೇ ಮಾದರಿಯಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಶಾಸಕ ರಮೇಶ ಜಾರಕಿಹೊಳಿ ಮಾತನಾಡಿ, ಕಾಂಗ್ರೆಸ್ ಸುಳ್ಳು ಹೇಳಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಕಳೆದ ಐದಾರು ತಿಂಗಳಿನಿಂದ ಗೃಹಲಕ್ಷ್ಮಿ ₹2 ಸಾವಿರ ಜಮಾ ಆಗಿರಲಿಲ್ಲ. ಈಗ ಚುನಾವಣೆ ಹಿನ್ನೆಲೆಯಲ್ಲಿ ಜಮಾ ಮಾಡಿದ್ದಾರೆ. ಚುನಾವಣೆ ನಂತರ ಅದನ್ನು ಬಂದ್ ಮಾಡ್ತಾರೆ. ಇಂತಹ ಕ್ಷಣಿಕ ಗ್ಯಾರಂಟಿಗಳಿಗೆ ಮರುಳಾಗದೇ ಮಹಿಳೆಯರು ಮೋದಿಯವರ ಶಾಶ್ವತ ಗ್ಯಾರಂಟಿಗಳನ್ನು ನೋಡಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಕೋರಿದರು.
ಈ ಮೊದಲು ಭಾರತ ದೇಶದ ಪ್ರಧಾನ ಮಂತ್ರಿಯವರನ್ನು ಬೇರೆ ದೇಶಗಳ ನೋಡುವ ದೃಷ್ಟಿಕೋನ ಬೇರೆಯಾಗಿತ್ತು. ಇಂದು ದೇಶಕ್ಕೆ ಜಾಗತಿಕ ಮನ್ನಣೆ ಸೀಗುವುದರೊಂದಿಗೆ ಮೋದಿಯವರು ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ. ಮುಂದೆ ಭಾರತ ವಿಶ್ವಗುರುವಾಗುವತ್ತ ಸಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದಾಗಿಂದ ಬಾಂಬ್ ಸಂಸ್ಕೃತಿ, ಕೋಮುವಾದ ಪ್ರಾರಂಭವಾಗಿದೆ ಎಂದು ದೂರಿದರು.
ಸಮಾರಂಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಮಾಜಿ ಶಾಸಕ ಎಂ.ಎಲ್.ಮುತ್ತೆನ್ನವರ, ಕೆಎಲ್‌ಇ ನಿರ್ದೇಶಕ ಜಯಾನಂದ ಮುನವಳ್ಳಿ, ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಇದ್ದರು.ನಮ್ಮೆಲ್ಲರ ಕನಸಾಗಿದ್ದ ಅಯೋಧ್ಯೆಯ ರಾಮಮಂದಿರ ಕನಸು ನನಸು ಮಾಡಿದ್ದಾರೆ. ಅರುಣಾಚಲ ಪ್ರದೇಶದಲ್ಲಿ ಆಕ್ರಮಿಸಲು ಪ್ರಯತ್ನಿಸಿದ ಚೈನಾಗೆ ತಕ್ಕ ಪಾಠ ನೀಡಿದ ಮೋದಿಯವರನ್ನು 3ನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಲು ಅವರ ಪ್ರತಿನಿಧಿಯಾಗಿರುವ ನನಗೆ ಕ್ರಮ ಸಂಖ್ಯೆ 2ಕ್ಕೆ ಮತ ನೀಡಿ.
-ರಮೇಶ ಜಾರಕಿಹೊಳಿ,