ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ: ಹೊನ್ನಾಳಿಯಲ್ಲಿ ಸಂಭ್ರಮ

KannadaprabhaNewsNetwork |  
Published : May 05, 2026, 01:30 AM IST
4ಎಚ್.ಎಲ್.ಐ1.ಉಪಚುನಾವಣೆಯಲ್ಲಿ ಬಾಗಲಕೋಟೆ ಸೇರಿದಂತೆ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಕಾಂಗ್ರೇಸ್  ಅಭ್ಯರ್ಥಿಗಳು ಗೆಲವು ಸಾಧಿಸಿದ್ದರ ಹಿನ್ನಲೆಯಲ್ಲಿ ಹೊನ್ನಾಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ  ಸೋಮವಾರ ನೂರಾರು ಕಾಂಗ್ರೇಸ್ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ , ಸಿಹಿ ವಿತರಿಸಿ ಸಂಭ್ರಮಾಚರಣೆ ನಡೆಸಿದರು.  | Kannada Prabha

ಸಾರಾಂಶ

ವಿಧಾನಸಭೆ ಉಪ ಚುನಾವಣೆ ರಾಜ್ಯದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಏಪ್ರಿಲ್ 9ರಂದು ಮತದಾನ ನಡೆದಿದ್ದು, ಮೇ 4ರಂದು ಮತ ಎಣಿಕೆ ನಡೆಯಿತು. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಎರಡೂ ಕ್ಷೇತ್ರಗಳಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ಜನಾದೇಶ ನೀಡುವ ಮೂಲಕ ಭರ್ಜರಿ ಜಯ ಗಳಿಸುವಂತೆ ಮಾಡಿದ್ದಾರೆ ಎಂದು ಪುರಸಭೆ ಮಾಜಿ ಸದಸ್ಯ ಎಚ್.ಬಿ.ಅಣ್ಣಪ್ಪ ಹೇಳಿದ್ದಾರೆ.

- ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಣೆ

- - -

ಹೊನ್ನಾಳಿ: ವಿಧಾನಸಭೆ ಉಪ ಚುನಾವಣೆ ರಾಜ್ಯದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಏಪ್ರಿಲ್ 9ರಂದು ಮತದಾನ ನಡೆದಿದ್ದು, ಮೇ 4ರಂದು ಮತ ಎಣಿಕೆ ನಡೆಯಿತು. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಎರಡೂ ಕ್ಷೇತ್ರಗಳಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ಜನಾದೇಶ ನೀಡುವ ಮೂಲಕ ಭರ್ಜರಿ ಜಯ ಗಳಿಸುವಂತೆ ಮಾಡಿದ್ದಾರೆ ಎಂದು ಪುರಸಭೆ ಮಾಜಿ ಸದಸ್ಯ ಎಚ್.ಬಿ.ಅಣ್ಣಪ್ಪ ಹೇಳಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ಕುಡಿ ಸಮರ್ಥ ಶಾಮನೂರು ಸೋಮವಾರ ಮತ ಎಣಿಕೆಯಲ್ಲಿ ಜಯ ಗಳಿಸಿದ ಹಿನ್ನೆಲೆ ನೂರಾರು ಜನ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಾಚರಣೆ ನಡೆಸಿದ ಸಂದರ್ಭ ಅವರು ಮಾತನಾಡಿದರು.

ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮನುವಾಲಜ್ಜಿ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮರ್ಥ ಹಾಗೂ ಪಾರದರ್ಶಕ ಅಡಳಿತದ ಪ್ರಭಾವ, ಕಾಂಗ್ರೆಸ್ ಎಂದಿಗೂ ಬಡವರ ಪರವಾದ ಅಡಳಿತ ನೀಡುತ್ತ ಬರುತ್ತಿರುವುದರ ಪರಿಣಾಮ ಜನತೆ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಗಳಿಸುವಂತೆ ಆಶೀರ್ವಾದ ಮಾಡಿದ್ದಾರೆ ಎಂದು ಹೇ‍ಳಿದರು.

ಈ ಸಂದರ್ಭ ಕಾಂಗ್ರೆಸ್ ಹಿರಿಯ ಮುಖಂಡ ಆರ್.ನಾಗಪ್ಪ, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ರಾಘವೇಂದ್ರ, ಎಚ್.ಬಿ. ಅಣ್ಣಪ್ಪ, ವಿಜೇಂದ್ರಪ್ಪ, ಕಾಂಗ್ರೆಸ್ ಒಬಿಸಿ ಕಾರ್ಯದರ್ಶಿ ಪ್ರಶಾಂತ್ ಬಣ್ಣಜ್ಜಿ, ಎಸ್.ಎಂ.ಜಿ. ಗಾಳೇಶ್, ಆನಂದ್, ತೇಜಸ್, ಚಂದ್ರಶೇಖರ ಹೊಸಕೇರಿ, ಗೋಪಗೊಂಡನಹಳ್ಳಿ ಧರ್ಮಪ್ಪ ಸೇರಿದಂತೆ ಹಲವಾರು ಯುವ ಮುಖಂಡರು ಇದ್ದರು.

- - -

-4ಎಚ್.ಎಲ್.ಐ1:

ಉಪ ಚುನಾವಣೆಯಲ್ಲಿ ಬಾಗಲಕೋಟೆ ಸೇರಿದಂತೆ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸಿದ ಹಿನ್ನೆಲೆ ಹೊನ್ನಾಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೋಮವಾರ ನೂರಾರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ವಿತರಿಸಿ ಸಂಭ್ರಮಾಚರಣೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಪ ಚುನಾವಣೆಯಲ್ಲಿ ಗೆಲುವು: ಕಾಂಗ್ರೆಸ್ಸಿಗರ ಸಂಭ್ರಮ ಆಚರಣೆ
ಪಶ್ಚಿಮ ಬಂಗಾಳಕ್ಕೆ ಬಿಜೆಪಿಯಿಂದ ಹೊಸ ಬೆಳಕು: ಡಾ.ನಿಂಗರಾಜ್‌ಗೌಡ