ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 140ನೇ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಬಾಗಲಕೋಟೆಯ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಆಯೊಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಮಾತನಾಡಿ, 140 ವರ್ಷಗಳ ದೀರ್ಘ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ಸದಾ ಬಡವರು, ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರ ಪರವಾಗಿ ನಿಂತ ಪಕ್ಷವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಮುಂದಿನ ದಿನಗಳಲ್ಲಿ ಪಕ್ಷ ಮತ್ತಷ್ಟು ಬಲಿಷ್ಠಗೊಳಿಸಬೇಕೆಂದು ಕರೆ ನೀಡಿದರು.ಕಾಂಗ್ರೆಸ್ ಪಕ್ಷದ ಸ್ಥಾಪಕರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲಾಯಿತು. ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷರಾದ ಪುಟ್ಟಸ್ವಾಮಿಗೌಡ, ಬಸವೇಶ್ವರ ಬ್ಯಾಂಕಿನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಮುಖಂಡ ಮಲ್ಲಿಕಾರ್ಜುನ ಮೇಟಿ, ರವೀಂದ್ರ ಕಲ್ಬುರ್ಗಿ, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ನಾಗರಾಜ ಷ ಹದ್ಲಿ, ಬ್ಲಾಕ್ ಅಧ್ಯಕ್ಷ ಎಸ್.ಎನ್. ರಾಂಪೂರ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ ಬಳ್ಳಾರಿ, ಹನುಮಂತ ರಾಕುಂಪಿ, ವಕ್ತಾರ ಚಂದ್ರಶೇಖರ ರಾಠೋಡ, ಪರಶುರಾಮ, ಜಿಪಂ ಮಾಜಿ ಅಧ್ಯಕ್ಷೆ ಗಂಗೂಬಾಯಿ(ಬಾಯಕ್ಕ) ಮೇಟಿ, ಕುತುಬುದ್ದಿನ್ ಖಾಜಿ, ರಾಜು ಮನ್ನಿಕೇರಿ, ಸೇವಾದಳದ ವಿಲಾಸ ಮೆಣಸಗಿ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಅಭಿಷೇಕ ತಳ್ಳಿಕೇರಿ, ಕೆಪಸಿಸಿ ಕಾರ್ಮಿಕ ಘಟಕದ ಉಪಾಧ್ಯಕ್ಷ ಹನುಮಂತ ಭಜಂತ್ರಿ, ರಾಜಶೇಖರ ಯಡಹಳ್ಳಿ, ರೇಣುಕಾ ನ್ಯಾಮಗೌಡ, ರೇಣುಕಾ ನಾರಾಯಣಕರ, ಕಲಾವತಿ ಕಮತ, ಮಾಧವಿ ರಾಠೋಡ, ಹನುಮಂತ ನೀಲನಾಯಕ, ತಿಪ್ಪಣ್ಣ ನೀಲನಾಯಕ, ವೀರಣ್ಣ ಹುಂಡೆಕಾರ, ಜಯಶ್ರೀ ಗುಳಬಾಳ, ಶ್ರವಣ ಖಾತೆದಾರ, ಸುಧಾ ಪಾಟೀಲ, ಸಿದ್ದಣ್ಣ ಗೋಡಿ, ಹುಸೇನ ಹಳ್ಳೂರ, ಶಬ್ಬಿರ ನದಾಫ್, ಖ್ವಾಜಾಸಾಬ ಬಾಗಲಕೋಟೆ, ವಿಜಯ ಮುಳ್ಳೂರ, ವಾಯ ವಾಯ ತಿಮ್ಮಾಪುರ, ಪ್ರಭು ರುದ್ರಾಕ್ಷಿ ಮುಂತಾದವರು ಪಾಲ್ಗೊಂಡಿದ್ದರು.
ಪಕ್ಷದ ಹಿರಿಯ ಮುಖಂಡರು, ಮಾಜಿ ಜನಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.------ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಮಹಾನ್ ನಾಯಕರ ತ್ಯಾಗ, ಬಲಿದಾನ ಮತ್ತು ಆದರ್ಶಗಳ ಮೇಲೆ ಕಾಂಗ್ರೆಸ್ ಪಕ್ಷ ಕಟ್ಟಲ್ಪಟ್ಟಿದ್ದು, ಇಂದಿಗೂ ಸಂವಿಧಾನ, ಪ್ರಜಾಸತ್ತಾತ್ಮಕ ವ್ಯವಸ್ಥೆ, ಧರ್ಮ ನಿರಪೇಕ್ಷತೆ ಹಾಗೂ ಸಾಮಾಜಿಕ ನ್ಯಾಯದ ರಕ್ಷಣೆಗೆ ಪಕ್ಷ ಬದ್ಧ. ಇಂದಿನ ಸಂದರ್ಭದಲ್ಲಿಯೂ ಕಾಂಗ್ರೆಸ್ ಪಕ್ಷ ದೇಶದ ಏಕತೆ, ಅಖಂಡತೆ ಹಾಗೂ ಜನಸಾಮಾನ್ಯರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸುತ್ತಿದೆ.
- ಎಸ್.ಆರ್. ಪಾಟೀಲ ಮಾಜಿ ಸಚಿವ