ಕೂಡ್ಲಿಗಿ: ದೇಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟವು ೪೦೦ಕ್ಕೂ ಹೆಚ್ಚಿನ ಸ್ಥಾನಗಳನ್ನು ಈ ಬಾರಿ ಗೆಲ್ಲಲಿದೆ. ಕಾಂಗ್ರೆಸ್ ೫೦ ಸೀಟುಗಳನ್ನೂ ದಾಟುವುದಿಲ್ಲ ಎಂಬುದು ಈಗಲೇ ಹೇಳುವಂಥ ವಾತಾವರಣವಿದೆ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಉಸ್ತುವಾರಿ ಹಾಗೂ ಬಿಜೆಪಿ ಎಂಎಲ್‌ಸಿ ರವಿಕುಮಾರ್ ಭವಿಷ್ಯ ನುಡಿದರು.ಅವರು ಪಟ್ಟಣದ ಹಿರೇಮಠ ಕಲ್ಯಾಣ ಮಂಟಪದ ಆವರಣದಲ್ಲಿ ಕೂಡ್ಲಿಗಿ ಮಂಡಲದ ಬಿಜೆಪಿ ಆಯೋಜಿಸಿದ್ದ ಬೂತ್ ವಿಜಯ ಅಭಿಯಾನ ಸಭೆ ಉದ್ಘಾಟಿಸಿ ಮಾತನಾಡಿದರು.ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ವಿಶ್ವ ಮೆಚ್ಚಿದ ನಾಯಕ. ಅವರು ೧೦ ವರ್ಷಗಳ ಆಡಳಿತಾವಧಿಯಲ್ಲಿ ದೇಶದ ಜನರಿಗೆ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ರಾಜ್ಯದಲ್ಲಿ ೨೮ ಕ್ಷೇತ್ರಗಳನ್ನು ಗೆಲ್ಲಬೇಕಿದೆ. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ನಿಮ್ಮ ಮುಂದೆ ಬಂದಿದ್ದು, ನೀವು ಆಶೀರ್ವದಿಸಿದ್ದಲ್ಲಿ ಕೂಡ್ಲಿಗಿ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುವ ಜತೆಗೆ ಮುಂಬರುವ ವಿಧಾನಸಭಾ ಕ್ಷೇತ್ರಕ್ಕೆ ಸ್ಥಳೀಯರಿಗೆ ಟಿಕೆಟ್ ಕೊಡಿಸಲಾಗುವುದು ಎಂದು ತಿಳಿಸಿದರು.ವಿಜಯನಗರ ಜಿಲ್ಲಾಧ್ಯಕ್ಷ ಪಿ. ಚನ್ನಬಸವನಗೌಡ ಪಾಟೀಲ್ ಮಾತನಾಡಿ, ದೇಶವನ್ನು ವಿಶ್ವಗುರು ಮಾಡಲು ಹೊರಟಿರುವ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂಬ ಬಯಕೆ ದೇಶದಲ್ಲಿದೆ. ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಕಾಂಗ್ರೆಸ್ ಸರ್ಕಾರ ಯಾವುದೇ ನೆರವು ನೀಡದೇ ನಿರ್ಲಕ್ಷ್ಯ ವಹಿಸಿದೆ ಎಂದರು.ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಯುವಮೋರ್ಚಾ ರಾಜ್ಯ ಕೋಶಾಧ್ಯಕ್ಷ ಹೊಸಪೇಟೆ ಸಿದ್ಧಾರ್ಥ ಸಿಂಗ್, ರೈತಮೋರ್ಚಾ ಜಿಲ್ಲಾಧ್ಯಕ್ಷ ಎಚ್. ರೇವಣ್ಣ, ಬಿ. ಭೀಮೇಶ್, ಎಸ್. ದುರುಗೇಶ್ ಮಾತನಾಡಿದರು. ಬಿಜೆಪಿ ಕೂಡ್ಲಿಗಿ ಮಂಡಲ ಅಧ್ಯಕ್ಷ ಬಣವಿಕಲ್ಲು ಕಾಮಶೆಟ್ಟಿ ರಾಜು ಪ್ರಾಸ್ತಾವಿಕ ನುಡಿದರು.ಈ ಸಂದರ್ಭದಲ್ಲಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಉಸ್ತುವಾರಿ ರಾಮದುರ್ಗ ಸೂರ್ಯಪಾಪಣ್ಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಗುಂಡುಮುಣುಗು ಎಸ್.ಪಿ. ಪ್ರಕಾಶ್, ರೇಖಾ ಮಲ್ಲಿಕಾರ್ಜುನ, ಹೊಸಪೇಟೆ ಮಂಡಲ ಅಧ್ಯಕ್ಷ ಶಂಕರ್ ಮೇಟಿ, ಮುಖಂಡರಾದ ಮೊರಬ ಶಿವಣ್ಣ, ಶಂಕರ್ ನವಲಿ, ಓದೋ ಗಂಗಪ್ಪ, ನಿಂಬಳಗೆರೆ ರಾಜೇಂದ್ರ ಗೌಡ, ಎಂ.ಬಿ. ಅಯ್ಯನಹಳ್ಳಿ ನಾಗಭೂಷಣ, ಬೆಳ್ಳಕಟ್ಟೆ ಕಲ್ಲೇಶ್ ಗೌಡ, ಸಣ್ಣ ಬಾಲಪ್ಪ, ಕೆ. ಚನ್ನಪ್ಪ, ಸಾಣೆಹಳ್ಳಿ ಹನುಮಂತಪ್ಪ, ಕೆ.ಎಚ್.ಎಂ. ಸಚಿನ್ ಕುಮಾರ್, ಸೂಲದಹಳ್ಳಿ ಮಾರೇಶ್, ಹುಲಿಕೆರೆ ಗೀತಾ, ಪಿ. ಮಂಜುನಾಥ ನಾಯಕ ಸೇರಿ ಇತರರಿದ್ದರು.ಹೊರಗಿನವರಿಗೆ ಟಿಕೆಟ್ ಕೊಟ್ಟಿದ್ದೇ ಬಿಜೆಪಿಗೆ ಸೋಲಾಯ್ತು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ಗಾಗಿ ಸ್ಥಳೀಯರು ೪-೫ ಆಕಾಂಕ್ಷಿಗಳಿದ್ದರೂ, ಯಾವುದನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದೇ ಹೊರಗಿನವರು ಹಾಗೂ ಕಾಂಗ್ರೆಸ್‌ನಿಂದ ಬಂದಿದ್ದ ಲೋಕೇಶ್ ನಾಯ್ಡು ಅವರಿಗೆ ಟಿಕೆಟ್ ಕೊಟ್ಟಿದ್ದೇ ಕೂಡ್ಲಿಗಿಯಲ್ಲಿ ಸೋಲಾಗಲು ಕಾರಣವಾಯಿತು ಎಂದು ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಹೇಳಿದರು.