ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲವು: ವಿಜಯೋತ್ಸವ

KannadaprabhaNewsNetwork |  
Published : May 05, 2026, 02:15 AM IST
ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ ಹಿನ್ನೆಲೆ ಹುಬ್ಬಳ್ಳಿಯ ಗೋಕುಲ್ ರಸ್ತೆಯ ಖಾಸಗಿ ಹೋಟೆಲ್ ಎದುರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೋಮವಾರ ವಿಜಯೋತ್ಸವ ಆಚರಿಸಿದರು. | Kannada Prabha

ಸಾರಾಂಶ

ಹು. ಧಾ. ಮಹಾನಗರ ಜಿಲ್ಲಾ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ಸಂಜೆ ವಿಜಯೋತ್ಸವ ಆಚರಿಸಲಾಯಿತು.

ಹುಬ್ಬಳ್ಳಿ: ರಾಜ್ಯದಲ್ಲಿ ನಡೆದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಹು- ಧಾ ಮಹಾನಗರ ಜಿಲ್ಲಾ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ಸಂಜೆ ವಿಜಯೋತ್ಸವ ಆಚರಿಸಲಾಯಿತು. ಇಲ್ಲಿನ ಗೋಕುಲ್ ರಸ್ತೆಯ ಖಾಸಗಿ ಹೋಟೆಲ್ ಎದುರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು, ಪರಸ್ಪರ ಸಿಹಿ ತಿನಿಸಿ ಸಂಭ್ರಮಿಸಿದರು. ಈ ವೇಳೆ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ ಹಳ್ಳೂರ, ಗ್ರಾಮೀಣ ಅಧ್ಯಕ್ಷ ಅನಿಲಕುಮಾರ ಪಾಟೀಲ, ಪಾಲಿಕೆ ವಿರೋಧ ಪಕ್ಷದ ನಾಯಕ ಇಮ್ರಾನ್ ಯಲಿಗಾರ, ಮುಖಂಡರಾದ ಮೋಹನ ಹಿರೇಮನಿ, ಮುತ್ತಣ್ಣ ಶಿವಳ್ಳಿ, ಚಂದ್ರಶೇಖರ ಜುಟ್ಟಲ, ಪ್ರೇಮನಾಥ ಚಿಕ್ಕತುಂಬಳ, ಅರ್ಜುನ ಪಾಟೀಲ, ಮಹೇಶ ದಾಬಡೆ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರದ ಯೋಜನೆಗಳು ಸದ್ಬಳಕೆಯಾಗಲಿ: ಸಚಿವ ಡಾ. ಎಚ್.ಕೆ. ಪಾಟೀಲ
ಉಪಚುನಾವಣೆಯಲ್ಲಿ ಗೆಲುವು, ಕೈ ಕಾರ್ಯಕರ್ತರಿಂದ ವಿಜಯೋತ್ಸವ