ಗ್ಯಾರಂಟಿಗಳಿಂದ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಗೆಲವು

KannadaprabhaNewsNetwork |  
Published : Apr 28, 2024, 01:25 AM IST
ಚಿತ್ರದುರ್ಗ ಎರಡನೇ ಪುಟದ ಮಿಡ್ಲ್ 111  | Kannada Prabha

ಸಾರಾಂಶ

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿದಿದ್ದು, ಗೆಲವು ತಮ್ಮದೆಂದು ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಹೇಳಿದರು.

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿದಿದ್ದು, ಗೆಲವು ತಮ್ಮದೆಂದು ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಹೇಳಿದರು.

ಪಕ್ಷದ ಜಿಲ್ಲಾ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು ಶುಕ್ರವಾರ ನಡೆದ ಚುನಾವಣೆಯಲ್ಲಿ ನನ್ನ ಭವಿಷ್ಯ ನಿರ್ಣಯಿಸುತ್ತಾರೆ. ತೀರ್ಪು ಆಶಾದಾಯಕವಾಗಿರುತ್ತೆ ಎನ್ನುವ ಅಚಲವಾದ ನಂಬಿಕೆಯಿದೆ ಎಂದರು.

ಪಕ್ಷದ ಸಾಮಾನ್ಯ ಕಾರ್ಯಕರ್ತನಿಂದ ಹಿಡಿದು ಮುಖಂಡರು ಸೇರಿ ಚುನಾವಣೆಯನ್ನು ಪ್ರಾಮಾಣಿಕವಾಗಿ ಎದುರಿಸಿದ್ದಾರೆ. ರಾಜ್ಯ, ರಾಷ್ಟ್ರ ನಾಯಕರುಗಳು ಇಲ್ಲಿಗೆ ಬಂದು ನನ್ನ ಪರ ಮತಯಾಚನೆ ಮಾಡಿ ಹೋಗಿದ್ದಾರೆ. ಎಲ್ಲಿಯೂ ಅಹಿತಕರ ಘಟನೆಗಳಿಗೆ ಆಸ್ಪದವಿಲ್ಲದಂತೆ ಮತದಾನ ಶಾಂತಿಯುತವಾಗಿ ನಡೆದಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಐದು ಗ್ಯಾರಂಟಿಗಳು ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ವರದಾನವಾಗಿದೆ ಎನ್ನುವುದು ನಿನ್ನೆ ನಡೆದ ಚುನಾವಣೆಯಲ್ಲಿ ಮಹಿಳೆಯರ ಮುಖದಲ್ಲಿನ ಭಾವನೆಗಳಲ್ಲಿ ಕಂಡು ಬರುತ್ತಿತ್ತು. ಒಟ್ಟಾರೆ ಚುನಾವಣೆ ಸುಸೂತ್ರವಾಗಿ ನಡೆದಿದೆ. ಫಲಿತಾಂಶ ಬರುವತನಕ ಸಮಾಧಾನದಿಂದ ಎಲ್ಲರೂ ಕಾಯಬೇಕು. ಅವಸರ ಮಾಡಿದರೆ ಅಪಘಾತವಾಗುತ್ತದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಕುಮಾರ್‌ಗೌಡ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ದ್ರಾಕ್ಷಾ ರಸ ಮಂಡಳಿ ಚೇರ್ಮನ್ ಬಿ.ಯೋಗೇಶ್‍ ಬಾಬು, ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಣ್ಣ, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಜಿ.ವಿ.ಮಧುಗೌಡ, ಬಾಲಕೃಷ್ಣಸ್ವಾಮಿ, ಗ್ಯಾರೆಂಟಿ ಅನುಷ್ಠಾನಗಳ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಪ್ರೊಫೆಷನಲ್ ವಿಭಾಗದ ಅಧ್ಯಕ್ಷ ಮಹಡಿ ಶಿವಮೂರ್ತಿ, ನೇತಾಜಿ ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ