ಮೇ 30ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಿದಂಬರಮೂರ್ತಿ

KannadaprabhaNewsNetwork |  
Published : May 27, 2025, 11:53 PM IST
27ಕೆಎಂಎನ್ ಡಿ13 | Kannada Prabha

ಸಾರಾಂಶ

ಮೇ 30ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಭಾರತಿನಗರ ಬ್ಲಾಕ್ ಪರಿಶಿಷ್ಟ ಜಾತಿ ವಿಭಾಗದ ನಿಯೋಜಿತ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ ಅವರು ಅಧಿಕಾರ ಸ್ವೀಕಾರ, ಕಾರ್ಯಕಾರಿ ಸಮಿತಿ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ, ಪ್ರತಿಭಾ ಪುರಸ್ಕಾರ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಸಿರಿ ಕನ್ವೇಷನ್ ಹಾಲ್‌ಲ್ಲಿ ಭಾರತೀನಗರ ಬ್ಲಾಕ್ ಕಾಂಗ್ರೆಸ್ ಸಮಿತಿ (ಪರಿಶಿಷ್ಟ ಜಾತಿ ವಿಭಾಗ) ವತಿಯಿಂದ ಮೇ 30 ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಸದಸ್ಯ ಚಿದಂಬರ ಮೂರ್ತಿ ತಿಳಿಸಿದರು.

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 30ರಂದು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಅಂಗವಾಗಿ ಭಾರತಿನಗರ ಬ್ಲಾಕ್ ಪರಿಶಿಷ್ಟ ಜಾತಿ ವಿಭಾಗದ ನಿಯೋಜಿತ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ ಅವರು ಅಧಿಕಾರ ಸ್ವೀಕಾರ ಜತೆಗೆ ಪದಗ್ರಹಣ ಸಮಾರಂಭದಲ್ಲಿ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಮನ್ಮುಲ್ ನಿರ್ದೇಶಕ ಹರೀಶ್‌ಬಾಬು ಅವರಿಗೆ ಅಭಿನಂದನೆ ಜತೆಗೆ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ 134 ಜಯಂತ್ಯುತ್ಸವ ಪ್ರಯುಕ್ತ ಭಾರತೀನಗರದ- ಮಂಡ್ಯ ರಸ್ತೆಯಿಂದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು ಎಂದರು.

ಕಾರ್ಯಕ್ರಮವನ್ನು ಶಾಸಕ ಕೆ.ಎಂ.ಉದಯ್ ಉದ್ಘಾಟಿಸುವರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ ಗಂಗಾಧರ್ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳೀಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಸ್ಟಾರ್ ಚಂದ್ರು, ಪರಿಶಿಷ್ಟ ಕಾಂಗ್ರೆಸ್ ವಿಭಾಗ ಜಿಲ್ಲಾಧ್ಯಕ್ಷ ಶ್ರೀಧರ್ ಆಗಮಿಸಲಿದ್ದಾರೆ ಎಂದರು.

ಜಿಪಂ ಮಾಜಿ ಅಧ್ಯಕ್ಷರಾದ ಬಿ.ಬಸವರಾಜು, ಸುರೇಶ್ ಕಂಠಿ, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್ ಅವರು ಉಪಸ್ಥಿತರಿರಲಿದ್ದು, ಭಾರತಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಬೋರೇಗೌಡ ಡಾ.ಬಿ.ಆರ್. ಅಂಬೇಡ್ಕರ್ ಕುರಿತು ವಿಚಾರ ಮಂಡಿಸಲಿದ್ದಾರೆ ಎಂದರು.

ಈ ವೇಳೆ ಭಾರತಿನಗರ ಬ್ಲಾಕ್ ಎಸ್ಸಿ ವಿಭಾಗದ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ, ಮಾಜಿ ಅಧ್ಯಕ್ಷ ಮುಡಿನಹಳ್ಳಿ ತಿಮ್ಮಯ್ಯ, ಗ್ರಾಪಂ ಸದಸ್ಯ ಈ.ರುದ್ರಯ್ಯ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಗುಡಿಗೆರೆ ಪ್ರಸಾದ್, ಅಣ್ಣೂರು ಚಿನ್ನಸ್ವಾಮಿ, ನಿರಂಜನ್, ರಾಮಣ್ಣ, ಕೆಂಪರಾಜು ಕ್ಯಾತಘಟ್ಟ ಸುನೀಲ್, ಅಲಭುಜನಹಳ್ಳಿ ಓಂಪ್ರಕಾಶ್, ಮಹೇಶ್ ಸೇರಿದಂತೆ ಮತ್ತಿತರಿದ್ದರು.

PREV

Recommended Stories

ಯೂರಿಯಾ: ರೈತ ಬಾಂಧವರಲ್ಲಿ ಅತಂಕ ಬೇಡ
ಪಂಚಪೀಠ ನಿರ್ಣಯ ಒಪ್ಪಲ್ಲ, ರಂಭಾಪುರಿ ಶ್ರೀಗಳ ಮನಸ್ಥಿತಿ ಕಲುಷಿತ: ವಚನಾನಂದ ಶ್ರೀ