ಕಾಂಗ್ರೆಸ್ ಕಾರ್ಯಕರ್ತರೇ ಗುಂಪುಗಾರಿಕೆಗೆ ಅವಕಾಶ ನೀಡದಿರಿ: ಶಾಸಕ ಕೆ.ಎಂ.ಉದಯ್

KannadaprabhaNewsNetwork |  
Published : Jun 01, 2025, 02:20 AM IST
30ಕೆಎಂಎನ್ ಡಿ23 | Kannada Prabha

ಸಾರಾಂಶ

ಮದ್ದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಮುಂಬರುವ ತಾಪಂ, ಜಿಪಂ ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ಚುನಾವಣೆಯಲ್ಲಿ ಯಾವುದೇ ಗುಂಪುಗಾರಿಕೆಗೆ ಅವಕಾಶ ನೀಡದೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಪ್ರತಿ ಗ್ರಾಮದಲ್ಲೂ ಸಂಘಟನೆಯಲ್ಲಿ ತೊಡಗಿ ಪಕ್ಷದ ಬಲವರ್ಧನೆಗೆ ಕಾರ್ಯತಂತ್ರ ರೂಪಿಸಿ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಯಾವುದೇ ಗುಂಪುಗಾರಿಕೆಗಳಿಗೆ ಅವಕಾಶ ನೀಡದೆ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಇಲ್ಲಿನ ಸಿರಿ ಕನ್ವೇನ್ಷೆನ್ ಹಾಲ್ ನಲ್ಲಿ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶ, ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತ್ಯುತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮದ್ದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಮುಂಬರುವ ತಾಪಂ, ಜಿಪಂ ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ಚುನಾವಣೆಯಲ್ಲಿ ಯಾವುದೇ ಗುಂಪುಗಾರಿಕೆಗೆ ಅವಕಾಶ ನೀಡದೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಪ್ರತಿ ಗ್ರಾಮದಲ್ಲೂ ಸಂಘಟನೆಯಲ್ಲಿ ತೊಡಗಿ ಪಕ್ಷದ ಬಲವರ್ಧನೆಗೆ ಕಾರ್ಯತಂತ್ರ ರೂಪಿಸುವಂತೆ ಎಂದು ಕಿವಿಮಾತು ಹೇಳಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ಪರಿಶಿಷ್ಟರ ಕಲ್ಯಾಣಕ್ಕಾಗಿ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದು ಡಾ.ಬಿ.ಆರ್. ಅಂಬೇಡ್ಕರ್ ರವರ ಆಶಯದಂತೆ ಪರಿಶಿಷ್ಟರ ಹಾಗೂ ಹಿಂದುಳಿದ ಸಮುದಾಯಗಳ ಹಿತವನ್ನು ಕಾಯುತ್ತಿದೆ ಎಂದು ತಿಳಿಸಿದರು.

ತಾಲೂಕಿನಲ್ಲಿ ಬಹಳ ವರ್ಷಗಳ ನಂತರ ಪರಿಶಿಷ್ಟ ಸಮುದಾಯದ ಒಗ್ಗಟ್ಟಾಗಿ ಸೇರುತ್ತಿರುವುದು ಬಹಳ ಸಂತಸದ ವಿಚಾರ. ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಸಮರ್ಥ ನಾಯಕತ್ವ ಇಲ್ಲದೆ ಕಾಂಗ್ರೆಸ್ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಹಿನ್ನಡೆಯಾಗಿತ್ತು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಶಾಸಕರಾಗಿ ಆಯ್ಕೆಯಾದ ನಂತರ ಕಾಂಗ್ರೆಸ್ ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸುತ್ತಿದ್ದೇನೆ ಎಂದರು.

ಭಾರತೀ ನಗರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಅಮೀನ್ ಶಿವಲಿಂಗಯ್ಯ ಹಾಗೂ ಪದಾಧಿಕಾರಿಗಳಿಗೆ ಪಕ್ಷದ ಸಂಘಟನೆ ಹಾಗೂ ಸರ್ಕಾರಿ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವಂತೆ ತಿಳಿಸಿದರು.

ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಮಾತನಾಡಿ, ಪರಿಶಿಷ್ಟ ಸಮುದಾಯವು ಈ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲು ಹೆಚ್ಚಿನ ಶಕ್ತಿ ತುಂಬಿದ್ದಾರೆ. ಕ್ಷೇತ್ರದಲ್ಲಿ ಶಾಸಕ ಕೆ.ಎಂ.ಉದಯ್ ಸಮುದಾಯಕ್ಕೆ ಹೆಚ್ಚಿನ ಅನುದಾನಗಳನ್ನು ತಂದು ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಮನ್ಮುಲ್‌ ನೂತನ ನಿರ್ದೇಶಕ ಹರೀಶ್‌ಬಾಬು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಂತರ ಭಾರತೀ ನಗರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ವಿಭಾಗದ ಕಾರ್ಯಕಾರಣಿ ಸಮಿತಿಯ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಲಾಯಿತು.

ಈ ವೇಳೆ ಭಾರತಿ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಬಿ.ಎಸ್. ಬೋರೆಗೌಡರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ವಿಚಾರಧಾರೆಗಳನ್ನು ಮಂಡಿಸಿದರು. ಕೆಪಿಸಿಸಿ ಸದಸ್ಯ ಎಸ್.ಚಿದಂಬರಮೂರ್ತಿ, ಜಿಲ್ಲಾ ಪರಿಶಿಷ್ಟ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಮಾತನಾಡಿದರು.

ಕಾರ್ಯಕ್ರಮಕ್ಕೂ ಮೊದಲು ಕೆ.ಎಂ.ದೊಡ್ಡಿ ಮುಖ್ಯರಸ್ತೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ತಮಟೆ, ಪೂಜೆಕುಣಿತ ಹಾಗೂ ಜಾನಪದ ಕಲಾತಂಡಗಳ ಮೂಲಕ ಮೆರವಣಿಗೆ ನಡೆಸಿದರು.

ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಿ.ಬಸವರಾಜು, ಭಾರತೀ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್. ರಾಜೀವ್, ಪರಿಶಿಷ್ಟ ಜಾತಿ ವಿಭಾಗದ ಬ್ಲಾಕ್ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಜಾಪ್ರಿಯ ವೆಂಕಟೇಶ್, ಕಾಡುಕೊತ್ತನಹಳ್ಳಿ ಮಾದೇಗೌಡ, ಕರಡಕೆರೆ ಮನು, ಈ ರುದ್ರಯ್ಯ, ಗುಡಿಗೆರೆ ಪ್ರಸಾದ್, ಮುಡಿನಹಳ್ಳಿ ತಿಮ್ಮಯ್ಯ, ಯಲಾದಹಳ್ಳಿ ಸಿದ್ದರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ