ಕ್ಷೇತ್ರದ ರಾಜ್ಯದ ಜನತೆಯು ಮಳೆ ಬೆಳೆ ಬರಲಿ. ಎಲ್ಲರಿಗೂ ಒಳಿತಾಗಲಿ ಎಂದು ಉಮ್ರಾ ಯಾತ್ರೆ ವೇಳೆ ದೇವರಲ್ಲಿ ಬೇಡಿಕೊಂಡಿದ್ದಾಗಿ ಶಾಸಕ ಯಾಸೀರಖಾನ್ ಪಠಾಣ ತಿಳಿಸಿದರು.
ಶಿಗ್ಗಾಂವಿ: ವಿಧಾನಸಭೆ ಮತಕ್ಷೇತ್ರದ ಎರಡು ತಾಲೂಕಿನ ಪಕ್ಷದ ಸಭೆ ಕರೆಯಬೇಕಿದೆ. ಕಳೆದ ನಾಲ್ಕು ತಿಂಗಳಲ್ಲಿ ಕಾರ್ಯಕರ್ತರನ್ನು ಕಡೆಗಣಿಸಿಲ್ಲ. ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ದೆಹಲಿ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇದು ಕಾರ್ಯಕರ್ತರ ಗೆಲುವು. ಕಾರ್ಯಕರ್ತರು ಹಾಗೂ ಕ್ಷೇತ್ರದ ಜನರ ಒಳಿತಿಗಾಗಿ ನಾನು ಉಮ್ರಾ ಯಾತ್ರೆ ಕೈಗೊಂಡಿದ್ದೆ ಎಂದು ಶಾಸಕ ಯಾಸೀರಖಾನ್ ಪಠಾಣ ತಿಳಿಸಿದರು.ತಾಲೂಕಿನ ಶ್ಯಾಡಂಬಿ ಗ್ರಾಮದ ಕಿರಣ್ ಎಂ. ಪಾಟೀಲ ಅವರ ಫಾರ್ಮಹೌಸ್‌ನಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ತಾಲೂಕಿನ ಜನರ ಆಶೀರ್ವಾದದಿಂದ ಗೆದ್ದಿದ್ದೇನೆ. ಅವರ ಋಣ ತೀರಿಸುವ ನಿಟ್ಟಿನಲ್ಲಿ ಅವರ ಒಳಿತಿಗಾಗಿ ಈ ಯಾತ್ರೆ ಮಹತ್ವವನ್ನು ಪಡೆದಿದ್ದು, ಕ್ಷೇತ್ರದ ರಾಜ್ಯದ ಜನತೆಯು ಮಳೆ ಬೆಳೆ ಶಾಂತಿಯಿಂದ ಬರಲಿ. ಎಲ್ಲರಿಗೂ ಒಳಿತಾಗಲಿ ಎಂದು ದೇವರಲ್ಲಿ ಬೇಡಿಕೊಂಡಿದ್ದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಕಿರಣ್ ಎಂ. ಪಾಟೀಲ, ಚಂದ್ರಣ್ಣ ನಡುವಿನಮನಿ, ಮುನಾಫ್ ಪಠಾಣ್, ಬಸನಗೌಡ ಪಾಟೀಲ, ಬಾಬರ್ ಬಾವೋಜೀ, ಅಣ್ಣಪ್ಪ ಲಮಾಣಿ, ಸುಧೀರ ಲಮಾಣಿ, ಎಸ್.ಎಫ್. ಮಣಕಟ್ಟಿ, ಗುಡ್ಡಪ್ಪ ಜಲದಿ, ಚಿಮ್ಮು ಹಿರೇಮಠ, ಶಂಕರಗೌಡ(ಮುತ್ತು) ಪಾಟೀಲ, ಡಿ.ಆರ್. ಬೊಮ್ಮನಹಳ್ಳಿ, ಪಿ.ಡಿ. ಕಾಳಿ, ವಸಂತಾ ಬಾಗೂರ, ಸುಮಂತಗೌಡ ಪಾಟೀಲ ಇತರರು ಇದ್ದರು. ದ್ಯಾಮಣ್ಣ ಪಿ. ಕಾಳಿ ನಿರೂಪಿಸಿದರು.15ರಂದು ಕಬಡ್ಡಿ ತರಬೇತಿ ಶಿಬಿರದ ಉದ್ಘಾಟನೆ
ಬ್ಯಾಡಗಿ: ಕಬಡ್ಡಿ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಹಾಗೂ ತಮಿಳುನಾಡಿನ ರಾಮೇಶ್ವರಂನಲ್ಲಿ ಜರುಗಿದ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮಗಳು ಪಟ್ಟಣದ ಬಿಇಎಸ್ ಪದವಿ ಕಾಲೇಜು ಆವರಣದಲ್ಲಿ ಏ. 15ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಸಿ.ಜಿ. ಚಕ್ರಸಾಲಿ ಅಧ್ಯಕ್ಷತೆ ವಹಿಸುವರು. ಶಾಸಕ ಬಸವರಾಜ ಶಿವಣ್ಣನವರ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಮಾಜಿ ಶಾಸಕ ಸುರೇಶಗೌಡ ಪಾಟೀಲ, ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಪುರಸಭೆ ಅಧ್ಯಕ್ಷ ಬಾಲಚಂದ್ರ ಪಾಟೀಲ, ಉಪಾಧ್ಯಕ್ಷ ಸುಭಾಸ್ ಮಾಳಗಿ, ಸದಸ್ಯ ಬಸವರಾಜ ಛತ್ರದ, ಬಿಇಎಸ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಎಸ್.ಎನ್. ನಿಡಗುಂದಿ, ಪ್ರಾಚಾರ್ಯ ಡಾ. ಎಸ್.ಜಿ. ವೈದ್ಯ, ಕಬಡ್ಡಿ ಅಸೋಸಿಯೇಶನ್ ಗೌರವಾಧ್ಯಕ್ಷ ಗಂಗಣ್ಣ ಎಲಿ, ಉಪಾಧ್ಯಕ್ಷರಾದ ಪ್ರಕಾಶ ಹಾವೇರಿ, ಮಲ್ಲಿಕಾರ್ಜುನ ಬಳ್ಳಾರಿ, ಮಲ್ಲಿಕಾರ್ಜುನ ಅಂಗಡಿ ಇತರರು ಪಾಲ್ಗೊಳ್ಳುವರು ಎಂದು ಕಬಡ್ಡಿ ಅಸೋಸಿಯಶನ್ ಗೌರವ ಕಾರ್ಯದರ್ಶಿ ಶಿವಾನಂದ ಮಲ್ಲನಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.