ಕನ್ನಡಪ್ರಭ ವಾರ್ತೆ ಮೈಸೂರು
ನಗರದ ನ್ಯಾಯಾಲಯದ ಮುಂಭಾಗ ಟಯರ್ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆತ್ಲೋಟ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಅವರು, ರಾಜ್ಯಪಾಲರು ಜೆಡಿಎಸ್- ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಅವರನ್ನು ಕೂಡಲೇ ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಎಸ್. ಶಿವರಾಮು ಮಾತನಾಡಿ, ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತನಿಖಾ ರಚಿಸಿರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬುದನ್ನು ವಿಪಕ್ಷಗಳು ಅರಿಯಬೇಕು. ಬಡವರು, ಕಾರ್ಮಿಕರು, ಮಹಿಳೆಯರು ಸೇರಿ ಶೋಷಿತ ವರ್ಗದ ಜನರು ಸರ್ಕಾರದ ಪರ ನಿಂತಿದ್ದಾರೆ. ಆದರೆ, ಆ ಜನರ ದಾರಿ ತಪ್ಪಿಸುವ ಕೆಲಸ ವಿಪಕ್ಷಗಳು ಮಾಡುತ್ತಿವೆ ಎಂದು ಆರೋಪಿಸಿದರು.ರಾಜ್ಯಪಾಲರು ತಮ್ಮ ನಿರ್ಧಾರ ಹಿಂಪಡೆಯಬೇಕು. ಅದು ಸಾಧ್ಯವಾಗದೇ ಹೋದರೆ ಅವರ ರಾಜೀನಾಮೆಗೆ ಒತ್ತಾಯಿಸಿ ರಾಜಭವನ ಚಲೋ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ. ಸ್ಥಳೀಯವಾಗಿ ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಅವರು ಎಚ್ಚರಿಸಿದರು.
ವಿವಿಧ ಸಂಘಟನೆಗಳ ಮುಖಂಡರಾದ ಎಚ್.ಎಸ್. ಪ್ರಕಾಶ್, ರಾಜೇಶ್, ಬಸವಣ್ಣ, ರವಿನಂದನ್, ಯೋಗೀಶ್ ಉಪ್ಪಾರ, ಮೊಗಣ್ಣಚಾರ್, ಲೋಕೇಶ್, ಮಹೇಂದ್ರ, ಬಸವರಾಜು, ಮಂಜುಳಾ ಮಂಜುನಾಥ್, ಲಕ್ಷ್ಮೀ, ಹಿನಕಲ್ ಉದಯ್, ಕಾಂತರಾಜು, ತಿಮ್ಮಯ್ಯ, ದಿನೇಶ್, ಕೇಶವ್ ಮೊದಲಾದವರು ಇದ್ದರು.