ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಬದಲಾವಣೆಗೆ ಕಾಂಗ್ರೆಸ್‌ನ ಕುಮಾರಸ್ವಾಮಿ ಆಗ್ರಹ

KannadaprabhaNewsNetwork |  
Published : Feb 03, 2024, 01:45 AM IST
2ಎಚ್ಎಸ್ಎನ್9 : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ. | Kannada Prabha

ಸಾರಾಂಶ

ಮಾಜಿ ಸಚಿವ ಬಿ.ಶಿವರಾಂ ಬಗ್ಗೆ ಸಾರ್ವಜನಿಕವಾಗಿ ಏಕವಚನದಲ್ಲಿ ಮಾತನಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಈ ವಿಚಾರದ ಬಗ್ಗೆ ಹೈಕಮಾಂಡ್‌ಗೆ ದೂರು ನೀಡಲಾಗುವುದು. ಕೂಡಲೇ ಸಚಿವರ ಬದಲಾವಣೆ ಮಾಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಕುಮಾರಸ್ವಾಮಿ ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಒತ್ತಾಯ । ಕ್ಷಮೆ ಕೇಳದಿದ್ದರೆ ಹೈಕಮಾಂಡ್‌ಗೆ ದೂರಿನ ಎಚ್ಚರಿಕೆಕನ್ನಡಪ್ರಭ ವಾರ್ತೆ ಹಾಸನ

ಮಾಜಿ ಸಚಿವ ಬಿ.ಶಿವರಾಂ ಬಗ್ಗೆ ಸಾರ್ವಜನಿಕವಾಗಿ ಏಕವಚನದಲ್ಲಿ ಮಾತನಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಈ ವಿಚಾರದ ಬಗ್ಗೆ ಹೈಕಮಾಂಡ್‌ಗೆ ದೂರು ನೀಡಲಾಗುವುದು. ಕೂಡಲೇ ಸಚಿವರ ಬದಲಾವಣೆ ಮಾಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಕುಮಾರಸ್ವಾಮಿ ಆಗ್ರಹಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ‘೨೦೨೪ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಬೆರಳೆಣಿಕೆಯ ದಿನಗಳಷ್ಟಿದ್ದು, ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡದೆ ಯಾವ ಕ್ಷೇತ್ರದಲ್ಲೂ ಪಕ್ಷದ ಸಂಘಟನೆ ವಿಚಾರವಾಗಿ ಸಭೆ, ಸಮಾರಂಭಗಳನ್ನು ಮಾಡದೆ ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಕಿರಿಯ ಕಾರ್ಯಕರ್ತರ ಅಭಿಪ್ರಾಯಗಳನ್ನು ಪಡೆಯದೆ ಉಡಾಫೆ ತೋರುತ್ತಿದ್ದಾರೆ. ಇವರಿಗೆ ಅಧಿಕಾರದಾಹವಿದೆ. ಪಕ್ಷದ ಏಳಿಗೆ ಇವರಿಗೆ ಬೇಕಾಗಿಲ್ಲ. ಸಂಘಟನೆ ಮಾಡುವುದಿಲ್ಲ’ ಎಂದು ಟೀಕಿಸಿದರು.

‘ನನಗೆ ಯಾವ ಹೈಕಮಾಂಡ್ ಲೆಕ್ಕಕ್ಕಿಲ್ಲ ಎಂಬ ಉದ್ಧಟತನದ ಮಾತುಗಳು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಜಿಲ್ಲಾ ಪಂಚಾಯಿತಿಗೆ ಬಂದ ಅನುದಾನದಲ್ಲಿ ಸುಮಾರು ಎರಡು ಕೋಟಿ ರುಪಾಯಿ ಹಣವನ್ನು ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದ ಕಾರ್ಯಕರ್ತರಾದ ಎಸ್.ಟಿ. ಸಮುದಾಯದವರಿಗೆ ನೀಡಿರುವುದು ಬೇಸರವಾಗಿದೆ. ಅನುದಾನವನ್ನು ನಿಷ್ಠಾವಂತ ಕಾಂಗ್ರೆಸ್ ಎಸ್.ಟಿ. ಸಮುದಾಯದವರಿಗೆ ನೀಡಿದ್ದರೂ ಸಮಾಧಾನವಾಗುತ್ತಿತ್ತು. ಅದೇ ರೀತಿ ಎಸ್.ಸಿ. ಸಮುದಾಯದ ಹಾಗೂ ಇತರೆ ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ. ಇದು ಇವರ ಪಕ್ಷದ ಬದ್ಧತೆಯೇ? ಸಂಘಟನೆಯ ಬಲವರ್ಧನೆಯೇ?’ ಎಂದು ಪ್ರಶ್ನೆ ಮಾಡಿದರು.

‘ಜಿಲ್ಲೆಯ ಹಿರಿಯ ಕಾಂಗ್ರೆಸ್ ಕಟ್ಟಾಳು ಮಾಜಿ ಸಚಿವ ಬಿ. ಶಿವರಾಂರನ್ನು ಸಾರ್ವಜನಿಕವಾಗಿ ಏಕವಚನದಲ್ಲಿ ಮಾತನಾಡಿರುವುದು ಜಿಲ್ಲೆಯ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರನ್ನು ಕೆರಳಿಸಿದೆ. ಶಿವರಾಂ ರವರು ಎಂದೂ ಕಾರ್ಯಕರ್ತರ, ಪಕ್ಷದ ಸಂಘಟನೆಯಲ್ಲಿ ಹಿಂದೆ ಸರಿದವರಲ್ಲ. ಇಂತಹ ನಿಷ್ಠಾವಂತ ಕಾಂಗ್ರೆಸ್ ನಾಯಕರು ಇರುವುದರಿಂದಲೇ ಕಾಂಗ್ರೆಸ್ ಈ ಜಿಲ್ಲೆಯಲ್ಲಿ ಉಳಿದಿರುವುದು. ಆದ್ದರಿಂದ ಸಚಿವರು ಕೂಡಲೇ ಬಿ.ಶಿವರಾಂರವರನ್ನು ಕ್ಷಮೆ ಕೋರಬೇಕು’ ಎಂದು ಒತ್ತಾಯಿಸಿದರು.

ಈ ರೀತಿ ಬೆಳವಣಿಗೆ ಮುಂದುವರಿದರೆ ಇದರ ಬಗ್ಗೆಯೂ ಹೈಕಮಾಂಡ್‌ಗೆ ದೂರು ನೀಡಿ ಮನವರಿಕೆ ಮಾಡಿಕೊಡಲಾಗುವುದು. ಜಿಲ್ಲೆಯ ದಲಿತ, ಹಿಂದುಳಿದ, ಅಲ್ಪ ಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ರಾಜ್ಯ ಹಾಗೂ ಜಿಲ್ಲೆಯ ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.

ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಎಚ್.ಬಿ. ಅಮೀರ್ ಜಾನ್, ವೃತ್ತಿಪರ ಘಟಕದ ಜಿಲ್ಲಾಧ್ಯಕ್ಷ ಅಡಗೂರು ವೆಂಕಟೇಶ್, ಮೀನುಗಾರ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಎಸ್. ಸತೀಶ್, ಕಾಂಗ್ರೆಸ್ ಪರಿಶಿಷ್ಟ ಪಂಗಡದ ರಾಜ್ಯ ಕಾರ್ಯದರ್ಶಿ ಶೇಖರ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ರವಿ ಇತರರು ಉಪಸ್ಥಿತರಿದ್ದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಕುಮಾರಸ್ವಾಮಿ. ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಎಚ್.ಬಿ. ಅಮೀರ್ ಜಾನ್, ವೃತ್ತಿಪರ ಘಟಕದ ಜಿಲ್ಲಾಧ್ಯಕ್ಷ ಅಡಗೂರು ವೆಂಕಟೇಶ್ ಮತ್ತಿತರರು ಇದ್ದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌