ಆಲಮಟ್ಟಿಯಲ್ಲಿ ರೋಪ್ ವೇ ನಿರ್ಮಾಣಕ್ಕೆ ಚಿಂತನೆ

KannadaprabhaNewsNetwork |  
Published : Jan 20, 2026, 03:15 AM IST
19 ಆಲಮಟ್ಟಿ 1 | Kannada Prabha

ಸಾರಾಂಶ

ಆಲಮಟ್ಟಿ ಗುಡ್ಡ ಹಾಗೂ ಸೀತಮ್ಮನ ಗುಡ್ಡದ ನಡುವೆ ಜಲಾಶಯ ಎದುರು ರೋಪ್ ವೇ ನಿರ್ಮಾಣದ ಬಗ್ಗೆ ಪ್ರವಾಸೋದ್ಯಮ ಇಲಾಖೆಯಿಂದ ಜಾರಿಗೊಳಿಸಲು ಚಿಂತನೆ ನಡೆದಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ಆಲಮಟ್ಟಿ

ಆಲಮಟ್ಟಿ ಗುಡ್ಡ ಹಾಗೂ ಸೀತಮ್ಮನ ಗುಡ್ಡದ ನಡುವೆ ಜಲಾಶಯ ಎದುರು ರೋಪ್ ವೇ ನಿರ್ಮಾಣದ ಬಗ್ಗೆ ಪ್ರವಾಸೋದ್ಯಮ ಇಲಾಖೆಯಿಂದ ಜಾರಿಗೊಳಿಸಲು ಚಿಂತನೆ ನಡೆದಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಆಲಮಟ್ಟಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಈಗಾಗಲೇ ಕೆಬಿಜೆಎನ್ಎಲ್ ಮುಖ್ಯ ಇಂಜಿನಿಯರ್ ಡಿ.ಬಸವರಾಜರೊಂದಿಗೆ ಚರ್ಚಿಸಿದ್ದೇನೆ. ಕೆಬಿಜೆಎನ್ಎಲ್ ಹಾಗೂ ಪ್ರವಾಸೋದ್ಯಮ ಇಲಾಖೆ ಜಂಟಿಯಾಗಿ ಆಯಾ ಇಲಾಖೆ ಅನುದಾನದಲ್ಲಿ ಪ್ರವಾಸಿ ಪೂರಕ ಚಟುವಟಿಕೆಗಳನ್ನು ಹೆಚ್ಚಿಸಬೇಕಿದೆ. ಅದಕ್ಕಾಗಿ ವಿಜಯಪುರ ಜಿಲ್ಲಾಧಿಕಾರಿ, ಪ್ರವಾಸೋದ್ಯಮ ಇಲಾಖೆ ಹಾಗೂ ಕೆಬಿಜೆಎನ್ಎಲ್ ಅಧಿಕಾರಿಗಳು ಜಂಟಿಯಾಗಿ ಸಭೆ ನಡೆಸಿ ಕೈಗೊಳ್ಳಬಹುದಾದ ಯೋಜನೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದೇನೆ. ಈಗಾಗಲೇ ಆಲಮಟ್ಟಿಯಲ್ಲಿ ನಿರ್ಮಾಣಗೊಂಡಿರುವ ವಾಟರ್ ಅಮ್ಯೂಸ್ ಮೆಂಟ್ ಪಾರ್ಕ್‌, ಬೋಟಿಂಗ್ ಶೀಘ್ರವೇ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಯಾತ್ರಿ ನಿವಾಸ:

ಆಲಮಟ್ಟಿಯಲ್ಲಿ ನಿಗಮಕ್ಕೆ 10 ಎಕರೆ ಜಾಗ 30 ವರ್ಷ ಲೀಸ್‌ಗೆ ನೀಡಿದರೇ, ನಿಗಮದ ವತಿಯಿಂದ ಪ್ರವಾಸಿಗರಿಗೆ ಅನುಕೂಲವಾಗಲು ಯಾತ್ರಿ ನಿವಾಸ, ಡಾರ್ಮೇಟರಿ, ಶೌಚಾಲಯ, ಸ್ನಾನಗೃಹ ಕಟ್ಟಡ ಕಟ್ಟಲಾಗುವುದು ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜೆ. ನಂಜಯ್ಯನಮಠ ತಿಳಿಸಿದರು. ಈಗಾಗಲೇ ಕೆಬಿಜೆಎನ್ಎಲ್ ಎಂಡಿಗೆ ಪತ್ರ ಬರೆದು ನಿಗಮಕ್ಕೆ ಜಾಗ ನೀಡುವಂತೆ ಕೋರಲಾಗಿದೆ ಎಂದರು.

ಸನ್ಮಾನ:

ಟಿಇಟಿ ರದ್ದುಗೊಳಿಸಲು ಕ್ರಮ ಕೈಗೊಂಡಿರುವ ಕಾನೂನು ಸಚಿವ ಎಚ್.ಕೆ.ಪಾಟೀಲರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾ ಘಟಕದ ಅಧ್ಯಕ್ಷ ಅರ್ಜುನ ಲಮಾಣಿ ನೇತೃತ್ವದಲ್ಲಿ ಶಿಕ್ಷಕರು ಸನ್ಮಾನಿಸಿದರು.

ಮುಖ್ಯ ಎಂಜಿನಿಯರ್ ಡಿ.ಬಸವರಾಜ, ಪಟ್ಟಣ ಸಹಕಾರಿ ಬ್ಯಾಂಕುಗಳ ಮಹಾಮಂಡಳ ಬೆಂಗಳೂರಿನ ನಿರ್ದೇಶಕ ಆನಂದಗೌಡ ಬಿರಾದಾರ, ಜಿಓಸಿಸಿ ಬ್ಯಾಂಕ್ ನಿರ್ದೇಶಕರಾದ ಅರವಿಂದ ಹೂಗಾರ, ಹನುಮಂತ ಕೊಣದಿ, ಅಲ್ಲಾಭಕ್ಷ ವಾಲೀಕಾರ, ಚನ್ನಬಸು, ಮಲ್ಲು ಟಕ್ಕಳಕಿ, ಎಂ.ಎಂ.ಮುಲ್ಲಾ, ಸಲೀಂ ದಡೆದ, ಆನಂದ ಗೌಡರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌ನಿಂದ ಅರ್ಹರಿಗೆ ಅನ್ಯಾಯ ಆಗಬಾರ್ದು: ಸಿಎಂ
ದಾವೋಸ್‌ ಶೃಂಗಕ್ಕೆ ಡಿಸಿಎಂ ಡಿಕೆಶಿ ಇಂದು ಪ್ರಯಾಣ - ಎಲ್ಲರ ಸಲಹೆ ಮೇರೆಗೆ ಭೇಟಿ