ಕನ್ನಡಪ್ರಭ ವಾರ್ತೆ ಮಂಡ್ಯ
ಮಳವಳ್ಳಿಯ ಶ್ರೀಲಕ್ಷ್ಮೀನರಸಿಂಹ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕನಾಗಿರುವ ನಾನು ಫೆಬ್ರವರಿ 10 ರಂದು ನಡೆಯುವ ಪಿಎಲ್‌ಡಿ ಬ್ಯಾಂಕ್ ಚುನಾವಣೆಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೆ, ಫೆ.3 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಷ್ಟರೊಳಗೆ ರಾಜಕೀಯ ಪ್ರಭಾವ ಬಳಸಿ ನನ್ನನ್ನು ಶ್ರೀಲಕ್ಷ್ಮೀನರಸಿಂಹ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಿ ಪಿಎಲ್‌ಡಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸದಂತೆ ಸಂಚು ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಘದ ಅಧ್ಯಕ್ಷನಾಗಿದ್ದ ನಾನು ಕಳೆದ ಮೂರು ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಅಂದಿನಿಂದ ಇಂದಿನವರೆಗೂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸದೇ ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿಯೇ ಎಲ್ಲ ಕಾರ್ಯಚಟುವಟಿಕೆಗಳನ್ನು ನಡೆಸುತ್ತಾ ಬಂದಿದ್ದಾರೆ. ನನಗೆ ಯಾವುದೇ ನೋಟಿಸ್ ನೀಡದೇ ಸಂಘದ ಮೂರು ತುರ್ತು ಸಭೆಗಳನ್ನು ಒಂದೇ ವಾರದಲ್ಲಿ ನಡೆಸಿ ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದರು.ಇದರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದೇನೆ. ಜೊತೆಗೆ ನ್ಯಾಯಾಲಯ ಕೂಡ 30 ದಿನಗಳವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಆದೇಶ ಮಾಡಿದ್ದರೂ ರಾಜಕೀಯ ಒತ್ತಡಕ್ಕೆ ಮಣಿದು ಸಂಘದ ಮೂರು ತುರ್ತು ಸಭೆಗಳಿಗೆ ಹಾಜರಾಗಲಿಲ್ಲವೆಂಬ ಕಾರಣವನ್ನು ಮುಂದಿಟ್ಟುಕೊಂಡು ನಿರ್ದೇಶಕ ಸ್ಥಾನದಿಂದ ಸಹಾಯಕ ಸಂಘಗಳ ಸಹಕಾರ ನಿಬಂಧಕರು ನನ್ನನ್ನು ನಿಯಮಬಾಹೀರವಾಗಿ ಅಮಾನತುಗೊಳಿಸಿದ್ದಾರೆ ಎಂದು ದೂರಿದರು.
ಪೊಲೀಸರ ಸರ್ಪಗಾವಲು: