ಅತಿಥಿ ಉಪನ್ಯಾಸಕರ ಕಾಯಂಗೆ ಆಗ್ರಹ

KannadaprabhaNewsNetwork |  
Published : Dec 20, 2023, 01:15 AM IST
ಸಂಡೂರಿನಲ್ಲಿ ಮಂಗಳವಾರ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅನುಪಸ್ಥಿತಿಯಲ್ಲಿ ಶಿರಸ್ತೇದಾರ ಕೆ.ಎಂ. ಶಿವಕುಮಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು. | Kannada Prabha

ಸಾರಾಂಶ

ಜೀತದಾಳುಗಳಂತೆ ದುಡಿಯುತ್ತಿರುವ ಅತಿಥಿ ಉಪನ್ಯಾಸಕರು ಮುಷ್ಕರ ಪ್ರಾರಂಭಿಸಿ ೨೮ನೇ ದಿನಕ್ಕೆ ಕಾಲಿಟ್ಟಿದೆ. ಅದರೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ.

ಸಂಡೂರು: ಅತಿಥಿ ಉಪನ್ಯಾಸಕರು ಕಳೆದ ೧೫- ೨೦ ವರ್ಷಗಳಿಂದ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕಡಿಮೆ ಸಂಬಳಕ್ಕೆ ಜೀತದಾಳುಗಳ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಯಾವುದೇ ಭದ್ರತೆ ಇಲ್ಲದ ದುಸ್ಥಿತಿ ಉಂಟಾಗಿದ್ದು, ತಕ್ಷಣ ಅವರನ್ನು ಕಾಯಂಗೊಳಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಅತಿಥಿ ಉಪನ್ಯಾಸಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಡಾ. ಹುಲಿಕುಂಟೆಪ್ಪ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿಯ ಮುಂಭಾಗದಲ್ಲಿ ತಾಲೂಕಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಶಿರಸ್ತೇದಾರ್ ಕೆ.ಎಂ. ಶಿವಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

ಜೀತದಾಳುಗಳಂತೆ ದುಡಿಯುತ್ತಿರುವ ಅತಿಥಿ ಉಪನ್ಯಾಸಕರು ಮುಷ್ಕರ ಪ್ರಾರಂಭಿಸಿ ೨೮ನೇ ದಿನಕ್ಕೆ ಕಾಲಿಟ್ಟಿದೆ. ಅದರೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ಇಡೀ ರಾಜ್ಯಾದ್ಯಂತ ಎಲ್ಲ ಸರ್ಕಾರಿ ೪೨೧ ಕಾಲೇಜುಗಳ ಅತಿಥಿ ಉಪನ್ಯಾಸಕರು ರಾಜ್ಯಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ಹೋರಾಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದರು.

ಅತಿಥಿ ಉಪನ್ಯಾಸಕ ಬಸವರಾಜ ಬಣಕಾರ ಮಾತನಾಡಿದರು. ಅತಿಥಿ ಉಪನ್ಯಾಸಕರಾದ ಜಬೀವುಲ್ಲ, ಶರಣೇಶ್, ಡಾ. ವೀರೇಶ್, ಲಕ್ಷ್ಮೀಪತಿ, ಸುರೇಶ್, ಸುಭಾಷಿಣಿ, ಶಿಲ್ಪಾ, ಡಾ. ತಿಪ್ಪೇಸ್ವಾಮಿ, ಅನಂದ ಜಿ., ಸಂದೀಪ್ಎ ಲ್. ಮಂಜುನಾಥ ಕೆ. ಮಹೇಶ್ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!