ಜನರ ಸೇವೆಯೊಂದಿಗೆ ಹುಟ್ಟಿದ ಮಣ್ಣಿನ ಋಣ ತೀರಿಸಲು ನಿರಂತರ ಶ್ರಮ: ಬಿ.ಶಿವಣ್ಣ

KannadaprabhaNewsNetwork |  
Published : Nov 30, 2026, 02:30 AM IST
29ಕೆಎಂಎನ್ ಡಿ14 | Kannada Prabha

ಸಾರಾಂಶ

ಹಿಂದುಳಿದವರಿಗೆ ಅಧಿಕಾರ ಸಿಗಲು ಡಾ.ಬಿ.ಆರ್ ಅಂಬೇಡ್ಕರ್ ಕಾರಣರಾಗಿದ್ದಾರೆ. ದಲಿತರು, ಹಿಂದುಳಿದವರು, ಶೋಷಿತರಿಗೆ ಅಧಿಕಾರ, ಶಿಕ್ಷಣ, ಉದ್ಯೋಗ ಸಿಗಬೇಕು ಎಂದು ಹೋರಾಡಿದ ದೇವರಾಜ ಅರಸು ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಜನರ ಸೇವೆಗಾಗಿ ಅಧಿಕಾರವನ್ನು ಸಮರ್ಪಣೆಗೊಳಿಸಿ ಹುಟ್ಟಿದ ಮಣ್ಣಿನ ಋಣ ತೀರಿಸಲು ನಿರಂತರವಾಗಿ ಶ್ರಮಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಬಿ.ಶಿವಣ್ಣ ತಿಳಿಸಿದರು.ಪಟ್ಟಣದ ಎನ್‌ಇಎಸ್ ಬಡಾವಣೆಯ ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ನಿವೇಶನದಲ್ಲಿ ಆವರಣದಲ್ಲಿ ನಡೆದ ಅಭಿನಂದನೆ ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ನಿವೃತ್ತ ನೌಕರರು ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾಮಾಜಿಕ ಸೇವೆಯನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಗಿದೆ. ಸರ್ಕಾರದಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಲ್ಯಾಪ್‌ಟಾಪ್ ವಿತರಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಹಿಂದುಳಿದವರಿಗೆ ಅಧಿಕಾರ ಸಿಗಲು ಡಾ.ಬಿ.ಆರ್ ಅಂಬೇಡ್ಕರ್ ಕಾರಣರಾಗಿದ್ದಾರೆ. ದಲಿತರು, ಹಿಂದುಳಿದವರು, ಶೋಷಿತರಿಗೆ ಅಧಿಕಾರ, ಶಿಕ್ಷಣ, ಉದ್ಯೋಗ ಸಿಗಬೇಕು ಎಂದು ಹೋರಾಡಿದ ದೇವರಾಜ ಅರಸು ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದರು.

ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಬರುತ್ತಿವೆ. ನಾವೆಲ್ಲ ಒಗ್ಗಟ್ಟಿನಿಂದ ಸಿದ್ದರಾಮಯ್ಯ ನಾಯಕತ್ವದಲ್ಲಿ ಅಚಲವಾದ ನಿಷ್ಠೆ ವ್ಯಕ್ತಪಡಿಸಿ, ಅವರ ಕೈಗಳನ್ನು ಬಲಪಡಿಸಬೇಕು ಎಂದು ಕರೆ ನೀಡಿದರು.

ಅಧಿಕಾರ ಇದ್ದಾಗ ಜೈಕಾರ ಹಾಕುವುದು ಮುಖ್ಯ ಅಲ್ಲ. ಅಧಿಕಾರ ಇಲ್ಲದಾಗ ಅವರ ನಾಯಕತ್ವಕ್ಕೆ ನಾವು ಹೆಚ್ಚು ಶಕ್ತಿ ಕೊಟ್ಟಾಗ ಕರ್ನಾಟಕದಲ್ಲಿ ಇಂತಹ ಜನ ಇದ್ದಾರೆ ಎಂಬ ಸಂದೇಶ ರಾಷ್ಟ್ರಕ್ಕೆ ಹೋಗುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ಮತ್ತು ಸಿದ್ದರಾಮಯ್ಯ ಅವರ ಸಿದ್ಧಾಂತ ನಮಗೆ ಪ್ರೇರಣೆ ಆಗಬೇಕು ಎಂದರು.

ಕಾರ್ಯಕ್ರಮದಲ್ಲಿ ಸಮುದಾಯದ ಮುಖಂಡರು ಹಾಜರಿದ್ದರು.

ಇಂದು ವೈದ್ಯನಾಥೇಶ್ವರ ದೇಗುಲದಲ್ಲಿ ವಿಶೇಷ ಪೂಜೆ

ಮದ್ದೂರು: ತಾಲೂಕಿನ ವೈದ್ಯನಾಥಪುರದ ಪುರಾಣ ಪ್ರಸಿದ್ಧ ಶ್ರೀವೈದ್ಯನಾಥೇಶ್ವರ ದೇವಾಲಯದಲ್ಲಿ ಮೂರನೇ ಕಾರ್ತಿಕ ಸೋಮವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂಜಾನೆ ಶ್ರೀವೈದ್ಯನಾಥೇಶ್ವರ ಮೂಲ ವಿಗ್ರಹಕ್ಕೆ ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಬಿಲ್ವಾಚನೆ ಯೊಂದಿಗೆ ಪುಷ್ಪಾಲಂಕಾರ ಸೇವೆ ನಡೆಸಲಾಗುವುದು. ಮಂಡ್ಯ ತಾಲೂಕಿನ ಚೆಲ್ಲನಾಯಕನಹಳ್ಳಿ ಗ್ರಾಮಸ್ಥರು ಮತ್ತು ಯುವಕರಿಂದ ಶ್ರೀ ವೈದ್ಯನಾಥೇಶ್ವರ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯದೊಂದಿಗೆ ತೀರ್ಥ ಪ್ರಸಾದ ಹಾಗೂ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಶ್ರೀ ಪ್ರಸನ್ನ ಪಾರ್ವತಾಂಬ ವೈದ್ಯನಾಥೇಶ್ವರ ಟ್ರಸ್ಟ್ ಅಧ್ಯಕ್ಷ ವಿ.ಟಿ.ಶಿವರಾಜು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನರ ಸಮಸ್ಯೆಗೆ ಅಧಿಕಾರಿಗಳೇ ಮೂಲ ಕಾರಣಕರ್ತರು
ಉತ್ತಮ ಸಮಾಜ ನಿರ್ಮಾಣದ ಹೊಣೆ ನಮ್ಮೆಲ್ಲರ ಮೇಲಿದೆ