ಅಧಿಕಾರಿಗಳ ನಿಸ್ವಾರ್ಥ ಆಡಳಿತದಿಂದ ಕ್ಷೇತ್ರಾಭಿವೃದ್ಧಿ ಸಾಧ್ಯ: ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್‌

KannadaprabhaNewsNetwork |  
Published : Dec 08, 2024, 01:17 AM IST
ಚಿತ್ರ 7ಬಿಡಿಆರ್62 | Kannada Prabha

ಸಾರಾಂಶ

ಹುಮನಾಬಾದ್ ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಶಾಸಕ ಡಾ.ಸಿದ್ದು ಪಾಟೀಲ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಸಭೆ ಶನಿವಾರ ಜರುಗಿತು.

ಕನ್ನಡಪ್ರಭ ವಾರ್ತೆ, ಹುಮನಾಬಾದ್ಅಧಿಕಾರಿಗಳು ಕ್ಷೇತ್ರದ ಜನಸಾಮಾನ್ಯರಿಗಾಗಿ ನಿಸ್ವಾರ್ಥ ಆಡಳಿತ ನೀಡಿದಾಗ ಮಾತ್ರ ಕ್ಷೇತ್ರ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್ ಹೇಳಿದರು.ಪಟ್ಟಣದ ತಾ.ಪಂ ಸಭಾಂಗಣದಲ್ಲಿ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಡಿಪಿ ಸಭೆ ಯಾವ ಉದ್ದೇಶಕ್ಕಾಗಿ ಆಯೋಜನೆ ಮಾಡುತ್ತಾರೆ ಎನ್ನುವ ವಿಚಾರ ಅಧಿಕಾರಿಗಳು ಅರಿತುಕೊಂಡು ಸಭೆಗೆ ಆಗಮಿಸಬೇಕೆಂದು ಎಚ್ಚರಿಸಿದರು.ಕ್ಷೇತ್ರ ವ್ಯಾಪ್ತಿಯಲ್ಲಿ ಜನಸಾಮಾನ್ಯರಿಗೆ, ರೈತರಿಗೆ ಎದುರಾಗಿರುವ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸುಕ್ಷಮವಾಗಿ ಪರಿಗಣನೆಗೆ ತೆಗೆದುಕೊಂಡು ಶೀಘ್ರವೇ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡಬೇಕು. ಗ್ರಾಮೀಣ ಭಾಗದ ಜನರ ಕಡೆಯಿಂದ ನಮ್ಮವರೆಗೆ ಯಾವುದೇ ದೂರುಗಳು ಬಾರದಂತೆ ಎಚ್ಚರ ವಹಿಸಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕಾದ ವೈದ್ಯರು ನಿರ್ಲಕ್ಷ್ಯ ವಹಿಸುವಹಿಸಿದರೆ ಎಂದಿಗೂ ಸಹಿಸುವುದಿಲ್ಲ ಎಂದು ಖಡಕ್ಕಾಗಿ ಎಚ್ಚರಿಸಿದರು.

ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ್ ಮಾತನಾಡಿ, ಅತಿವೃಷ್ಟಿ, ಅನಾವೃಷ್ಟಿಯಿಂದ ಸೇರಿದಂತೆ ಸಂಕಷ್ಟಕ್ಕೊಳಗಾಗುವ ರೈತರಿಗೆ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ವಿವಿಧ ಯೋಜನೆಗಳ ಮೂಲಕ ರೈತರಿಗೆ ನೇರವು ನೀಡುತ್ತಿದೆ. ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಇಲಾಖೆಯಿಂದ ಮಾಡಿ. ಹೊರತಾಗಿ ಸಭೆಯಲ್ಲಿ ಸುಳ್ಳು ಮಾಹಿತಿ ನೀಡಬೇಡಿ ಎಂದು ಸಹಾಯಕ ಕೃಷಿ ನಿರ್ದೇಶಕರಿಗೆ ತರಾಟೆಗೆ ತೆಗೆದುಕೊಡರು. ಇತ್ತಿಚಿಗೆ ದುಬಲಗುಂಡಿ ಹಾಗೂ ಘಾಟಬೋರಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಗರ್ಭಿಣಿಯರ ಸಾವು - ನೋವು ಸಂಭವಿಸಿದೆ ಈ ಕುರಿತು ಇಂತಹ ಘಟನೆಗಳು ಮರುಕಳುಹಿಸದಂತೆ ಎಚ್ಚರಿಕೆ ವಹಿಸಬೇಕೆಂದರು.ವಿಧಾನ ಪರಿಷತ್ ಸದಸ್ಯರಾದ ಭೀಮರಾವ್‌ ಪಾಟೀಲ್, ತಹಸೀಲ್ದಾರ್ ಅಂಜುಮ್ ತಬಸುಮ್, ತಹಸೀಲ್ದಾರ್ ಮಂಜುನಾಥ ಪಂಚಾಳ, ತಾಪಂ. ಇಒ ದೀಪಿಕಾ ನಾಯ್ಕರ್, ಸಿಪಿಐ ಗುರುಪಾಟೀಲ್, ಟಿಎಚ್‌ಒ ಡಾ.ಶಿವಕುಮಾರ ಸಿದ್ಧೇಶ್ವರ, ಡಾ. ಗೋವಿಂದ, ಡಾ. ನಾಗನಾಥ ಹುಲಸೂರೆ, ವೆಂಕಟೇಶ ಗೂಡಾಳ, ನಿಂಗರಾಜ ಅರಸ, ಡಾ. ಅಶೋಕ ಮೈಲಾರಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

PREV

Recommended Stories

ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ