ಕನ್ನಡಪ್ರಭ ವಾರ್ತೆ ಮಡಿಕೇರಿ
9ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. 17ರಂದು ನಾಮಪತ್ರಗಳ ಪರಿಶೀಲನೆ, 20 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜೂ.3 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂ.6 ರಂದು ಮತ ಎಣಿಕೆ ನಡೆಯಲಿದೆ.
ನಿಬಂಧನೆಗಳು:ಈ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು 30 ವರ್ಷಗಳಿಗೆ ಕಡಿಮೆ ಇರಕೂಡದು. ಮತ್ತು ಅವರು ಕರ್ನಾಟಕದ ಯಾವುದಾದರು ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು ಮತ್ತು ಅವರು ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು. ಚಾಲ್ತಿಯಲ್ಲಿರುವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವ ಬಗ್ಗೆ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿ/ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಂದ ಪಡೆದ ಮತದಾರರ ಪಟ್ಟಿಯ ದೃಢೀಕೃತ ನಕುು ಹಾಜರುಪಡಿಸಬೇಕು.
ಈ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳು ಹಾಗೂ ಕ್ಷೇತ್ರ ವ್ಯಾಪ್ತಿಯು ಇಂತಿದೆ: ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು (ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳು ಮತ್ತು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಚನ್ನಗಿರಿ ತಾಲೂಕು ಕ್ಷೇತ್ರ ವ್ಯಾಪ್ತಿಗೆ).
ಚುನಾವಣೆಗೆ ಸ್ಪರ್ಧಿಸಲಿಚ್ಛಿಸುವ ಅಭ್ಯರ್ಥಿಗಳು ಮೇ 9 ರಿಂದ ಮೇ 16 ರವರೆಗೆ (ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ) ಮೈಸೂರು, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಮೇ 10 ರಿಂದ ಮೇ 12 ರ ವರೆಗೆ ನೆಗೋಷಿಯೇಬಲ್ ಇನ್ಸ್ಟ್ಟುಮೆಂಟ್ ಆಕ್ಟ್ ಮೇರೆಗೆ ಸಾರ್ವತ್ರಿಕ ರಜಾ ದಿನವಾಗಿರುವುದರಿಂದ ಆ ದಿನಗಳಂದು ನಾಮಪತ್ರ ಸ್ವೀಕರಿಸಲಾಗುವುದಿಲ್ಲ.
ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಕ್ಷೇತ್ರದ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜಿಲ್ಲಾಧಿಕಾರಿಗಳು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ.
ನಾಮಾಂಕನ ಪತ್ರಗಳನ್ನು ಚುನಾವಣಾಧಿಕಾರಿಗಳಾದ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ರವರಿಗೆ ಮಾತ್ರ ಸಲ್ಲಿಸಬೇಕು. ಅಭ್ಯರ್ಥಿಗಳು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿರುವ ನಮೂನೆಯಲ್ಲಿ ನಾಮಪತ್ರ ಮತ್ತು ನಿಗದಿಪಡಿಸಿದ ನಮೂನೆಗಳಲ್ಲಿ ನೋಟರಿಯವರಿಂದ ಪ್ರಮಾಣೀಕರಿಸಿದ ಪ್ರಮಾಣ ಪತ್ರವನ್ನು ನಾಮಪತ್ರದೊಂದಿಗೆ ಲಗತ್ತಿಸಿ ಸಲ್ಲಿಸಬೇಕು.
ನಾಮಪತ್ರಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಚುನಾವಣಾಧಿಕಾರಿಗಳ ಕಚೇರಿಗೆ ಅಭ್ಯರ್ಥಿ ಹಾಗೂ ಇತರೆ 4 ಜನ, ಅಂದರೆ ಅವರ ಸೂಚಕರು ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಹೆಚ್ಚಿನ ವಿವರಗಳಿಗೆ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ತಿಳಿಸಿದ್ದಾರೆ.