ಮತಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಬದ್ಧ

KannadaprabhaNewsNetwork |  
Published : Jun 19, 2024, 01:12 AM IST
ಸಿಂದಗಿ | Kannada Prabha

ಸಾರಾಂಶ

ಮಾತು ಸಾಧನೆಯಾಗಬಾರದು ಸಾಧನೆ ಮಾತಾಗಬೇಕು ಎಂಬ ನಿಟ್ಟಿನಲ್ಲಿ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ನಾನು ಪ್ರಾಮಾಣಿಕವಾಗಿ ಮಾಡುತ್ತೇನೆ. ಹಳ್ಳಿಗಳು ಅಭಿವೃದ್ಧಿಯಾದರೆ ಮಾತ್ರ ಈ ದೇಶ ಅಭಿವೃದ್ಧಿಯಾಗುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಸಿಂದಗಿ

ಮಾತು ಸಾಧನೆಯಾಗಬಾರದು ಸಾಧನೆ ಮಾತಾಗಬೇಕು ಎಂಬ ನಿಟ್ಟಿನಲ್ಲಿ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ನಾನು ಪ್ರಾಮಾಣಿಕವಾಗಿ ಮಾಡುತ್ತೇನೆ. ಹಳ್ಳಿಗಳು ಅಭಿವೃದ್ಧಿಯಾದರೆ ಮಾತ್ರ ಈ ದೇಶ ಅಭಿವೃದ್ಧಿಯಾಗುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಅವರು ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಇಲಾಖೆ ವಿಜಯಪುರ, ಅನುಷ್ಠಾನ ಕೆ.ಆರ್.ಐ.ಡಿ.ಎಲ್. ವಿಜಯಪುರ, ೨೦೨೨-೨೩ನೇ ಸಾಲಿನ ಸಿಂದಗಿ ತಾಲೂಕಿನ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ₹೫೦ ಲಕ್ಷಗಳ ಅನುದಾನದಲ್ಲಿ ಸಿಸಿ ರಸ್ತೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸಿಂದಗಿ ಮತಕ್ಷೇತ್ರದಲ್ಲಿ ಅನೇಕ ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಉತ್ತಮ ಸಿಸಿ ರಸ್ತೆ ನಿರ್ಮಾಣ, ವಿದ್ಯುತ್‌ ಮತ್ತು ಶಿಕ್ಷಣ ಹಾಗೂ ಆರೋಗ್ಯದ ಕಡೆಗೆ ಹೆಚ್ಚು ಗಮನ ಸೆಳೆಯಲಾಗುತ್ತಿದೆ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದ್ದು, ಆ ನಿಟ್ಟಿನಲ್ಲಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಸಿಸಿ ರಸ್ತೆಯ ನಿರ್ಮಾಣದ ಕಾಮಗಾರಿ ಕಾರ್ಯ ಸದ್ಯ ಪ್ರಾರಂಭವಾಗುತ್ತದೆ. ಮುಂದಿನ ದಿನಮಾನಗಳಲ್ಲಿ ತಾಲೂಕಿನ ಎಲ್ಲ ಗ್ರಾಮಗಳ ಪರಿಶಿಷ್ಟ ಜಾತಿ ಕಾಲೋನಿಗಳನ್ನು ನಾನು ಪ್ರಾಮಾಣಿಕವಾಗಿ ಅಭಿವೃದ್ಧಿ ಪಡಿಸುವ ಕನಸನ್ನು ಹೊತ್ತುಕೊಂಡಿದ್ದೇನೆ. ಸಿಂದಗಿ ನಗರದಲ್ಲಿ ೨೪X೭ ಕುಡಿಯುವ ನೀರಿನ ವ್ಯವಸ್ಥೆ, ಹೊಸ ವಿದ್ಯುತ್‌ ಕಂಬಗಳ ಜೋಡಣೆ ಸೇರಿದಂತೆ ಹತ್ತು ಹಲವಾರು ಕಾಮಗಾರಿಯ ಭೂಮಿ ಪೂಜೆಯು ಇನ್ನು ಕೇಲವೆ ದಿನಗಳಲ್ಲಿ ಆರಂಭಗೊಳ್ಳಲಿವೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ತಾಲೂಕಾಧ್ಯಕ್ಷ ಸುರೇಶ ಪೂಜಾರಿ, ಶಿವಣ್ಣ ಕೋಟರಗಸ್ತಿ, ಚೇತನಗೌಡ ಪಾಟೀಲ ಯಂಕಂಚಿ, ಚಿಕ್ಕಸಿಂದಗಿ ಗ್ರಾಮದ ರವಿಸ್ವಾಮಿ ಹತ್ತರಕಿಹಾಳಮಠ, ಚಂದ್ರಕಾಂತ ಬೂದಿಹಾಳ, ಶ್ರೀನಿವಾಸ ಓಲೇಕಾರ, ಮಲ್ಲಿಕಾರ್ಜುನ ಅವಟಿ, ಸಂಜೀವ ಬಮ್ಮನಹಳ್ಳಿ, ಪರುಶುರಾಮ ಬಗಲಿ, ಅಜೀಜ ಅವಟಿ, ಬಂದೇನಮಾಜ ಅವಟಿ, ಷಣ್ಮುಖ ಓಲೇಕಾರ, ನಾನಾಗೌಡ ನಾಗಾವಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!