ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅದ್ಧೂರಿ ಆಚರಣೆ

KannadaprabhaNewsNetwork |  
Published : Apr 15, 2026, 02:00 AM IST
 14ಕೆಎಂಎನ್ ಡಿ40 | Kannada Prabha

ಸಾರಾಂಶ

ಅಂಬೇಡ್ಕರ್ ಅವರ ಕೊಡುಗೆ ವಿಶ್ವಕ್ಕೆ ಅನನ್ಯವಾಗಿದ್ದು ಸಂವಿಧಾನವನ್ನು ರಚಿಸುವ ಮೂಲಕ ದೇಶಕ್ಕೆ ಕೊಡುಗೆ ನೀಡಿರುವ ಇಂತಹ ಮಹಾನ್ ನಾಯಕನ ಜಯಂತಿಯನ್ನು ದಿನನಿತ್ಯವೂ ಆಚರಿಸುವಂತಹ ಕೆಲಸವಾಗಬೇಕು. ಕೆಲವರು ಸ್ವಾರ್ಥಕ್ಕಾಗಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ.

ಕನ್ನಡಪ್ರಭ ವಾರ್ತೆ ಮದ್ದೂರು

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ 135ನೇ ವರ್ಷದ ಜನ್ಮ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ ಸೇರಿದಂತೆ ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಶಾಸಕ ಕೆ.ಎಂ.ಉದಯ್ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ಭಾರತೀಯ ಸಂವಿಧಾನ ನಿರ್ಮಾತೃ ಡಾ.ಬಿ.ಆರ್.ಅಂಬೇಡ್ಕರ್ ಧಮನಿತರ ದನಿಯಾಗಿ ಸಮಾನತೆಗೆ ಶ್ರಮಿಸಿದ ಮಹಾನ್ ವ್ಯಕ್ತಿ. 20ನೇ ಶತಮಾನದ ಭಾರತ ಸೃಜಿಸಿದ ಮಹಾನ್ ದಾರ್ಶನಿಕರು. ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕೆಂದರು.

ಅಂಬೇಡ್ಕರ್ ಅವರ ಕೊಡುಗೆ ವಿಶ್ವಕ್ಕೆ ಅನನ್ಯವಾಗಿದ್ದು ಸಂವಿಧಾನವನ್ನು ರಚಿಸುವ ಮೂಲಕ ದೇಶಕ್ಕೆ ಕೊಡುಗೆ ನೀಡಿರುವ ಇಂತಹ ಮಹಾನ್ ನಾಯಕನ ಜಯಂತಿಯನ್ನು ದಿನನಿತ್ಯವೂ ಆಚರಿಸುವಂತಹ ಕೆಲಸವಾಗಬೇಕು. ಕೆಲವರು ಸ್ವಾರ್ಥಕ್ಕಾಗಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ ವಿಷಾದಿಸಿದರು.

ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಭೂಗೋಳಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಸಹಾಯಕ ಪ್ರಾಧ್ಯಾಪಕ ಡಾ.ಎನ್.ಎಸ್.ಸತೀಶ್‌ಕುಮಾರ್ ವಿಶೇಷ ಉಪನ್ಯಾಸ ನೀಡಿದರು. ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಮಾತನಾಡಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಲವು ಮಂದಿ ಸಾಧಕರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಶ್ರೀಉಗ್ರನರಸಿಂಹಸ್ವಾಮಿ ದೇವಾಲಯದ ಆವರಣದಿಂದ ಸಾಂಸ್ಕೃತಿಕ ಕಲಾ ತಂಡಗಳೊಟ್ಟಿಗೆ ಬೆಳ್ಳಿ ವಾಹನದ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಮೆರವಣಿಗೆ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಕರೆತರಲಾಯಿತು.

ಈ ವೇಳೆ ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ತಾಪಂ ಇಒ ರಾಮಲಿಂಗಯ್ಯ, ಬಿಇಒ ಎಸ್.ಬಿ.ಧನಂಜಯ, ಆರಕ್ಷಕ ನಿರೀಕ್ಷಕ ಎಚ್.ಎಸ್.ನವೀನ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಲ್.ನಾಗರಾಜು, ಮುಖಂಡರಾದ ಚಿದಂಬರ್‌ಮೂರ್ತಿ, ಅರವನಹಳ್ಳಿ ಸಿದ್ಧರಾಜು, ರಾಜೇಂದ್ರ, ಬೋರಯ್ಯ, ಮಹದೇವು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೋಷಿತರ ಏಳ್ಗೆಗೆ ಶ್ರಮಿಸಿದ ಅಂಬೇಡ್ಕರ್-ಶಾಸಕ ಬಣಕಾರ
ಅಂಬೇಡ್ಕರ್‌ ಹೆಸರಿನಲ್ಲಿ ಸುಸಜ್ಜಿತ ಗ್ರಂಥಾಲಯ ಸ್ಥಾಪನೆ: ನಾರಾ ಭರತ್ ರೆಡ್ಡಿ