ಐಗೂರು ಗ್ರಾಮಕ್ಕೆ ಸಂವಿಧಾನ ಜಾಗೃತಿ ರಥ

KannadaprabhaNewsNetwork |  
Published : Feb 07, 2024, 01:46 AM IST
ಐಗೂರು ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ಸರಕಾರಿ ಪದವಿಪೂರ್ವ ಕಾಲೇಜು,ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆ ಎದುರು ಸ್ವಾಗತ | Kannada Prabha

ಸಾರಾಂಶ

ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮದಲ್ಲಿ ಸಂವಿಧಾನ ಜಾಗೃತಿ ರಥದೊಂದಿಗೆ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಜರಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಸಂವಿಧಾನ ಘೋಷವಾಕ್ಯದೊಂದಿಗೆ ಶೋಭಾಯಾತ್ರೆ ನಡೆಸಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ತಾಲೂಕಿನ ಐಗೂರು ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆ ಎದುರು ಸ್ವಾಗತಿಸಲಾಯಿತು.ಸಂವಿಧಾನ ಜಾಗೃತಿ ರಥದೊಂದಿಗೆ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಸಂವಿಧಾನ ಘೋಷವಾಕ್ಯದೊಂದಿಗೆ ಶೋಭಾಯಾತ್ರೆ ನಡೆಸಿದರು.

ನಂತರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನು ಮಾತನಾಡಿ, ಭಾರತದಲ್ಲಿ ಲಿಖಿತ ಸಂವಿಧಾನ ಇದ್ದು ಜನರು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಕರೆ ನೀಡಿದರು. ಐಗೂರು ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಹೆಚ್.ಕೆ.ಉಮೇಶ್ ಮಾತನಾಡಿ, ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ಸಮಬಾಳು ನೀತಿ ಇದೆ. ಸಹಬಾಳ್ವೆಯ ಮೂಲಕ ಜೀವನ ನಡೆಸಿದರೆ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸುವುದರೊಂದಿಗೆ ಸಂವಿಧಾನದ ಆಶಯಗಳಿಗೆ ನಾವುಗಳು ಗೌರವ ನೀಡಿದಂತಾಗುತ್ತದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯರು, ಮುಖ್ಯ ಶಿಕ್ಷಕ ಯಶ್ವಂತ್ ಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು ಇದ್ದರು.

ವಾರ್ಷಿಕ ಮಹೋತ್ಸವ ಪೂರ್ವಭಾವಿ ಸಭೆಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯದ ಸಮಿತಿ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್ ಅಧ್ಯಕ್ಷತೆಯಲ್ಲಿ ದೇವಾಲಯದ ಸಭಾಂಗಣದಲ್ಲಿ ಗ್ರಾಮದೇವತೆ ಬನದಲ್ಲಿ ವಾರ್ಷಿಕಪೂಜಾ ಮಹೋತ್ಸವದ ಆಚರಣೆಯ ಕುರಿತು ಪೂರ್ವಭಾವಿ ಸಭೆ ಶುಕ್ರವಾರ ನಡೆಯಿತು.

ಗ್ರಾಮದೇವತೆ ಬನದಲ್ಲಿ 5ನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವದ ಅಂಗವಾಗಿ ಈ ಗ್ರಾಮಕ್ಕೆ ಸಂಬಂಧಿಸಿದ ಎಲ್ಲ ದೇವಾಲಯ ಸಮಿತಿ ಪದಾಧಿಕಾರಿಗಳು ಮತ್ತು ಗ್ರಾಮಸ್ಥರ ನೇತೃತ್ವದಲ್ಲಿ ನಡೆಸಲಾದ ಸಭೆಯಲ್ಲಿ ಸಮಿತಿಗಳನ್ನು ರಚನೆ ಮಾಡಿ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಯಿತು.

ಚಾಮುಂಡೇಶ್ವರಿ ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ್ ಉಡುಪ ನೇತೃತ್ವದಲ್ಲಿ ಗ್ರಾಮ ದೇವರ ಪೂಜಾ ಕೈಂಕರ್ಯಗಳು ನಡೆಯಲಿದೆ.ಫೆ.27ರಂದು ಸ್ಥಳ ಶುದ್ಧಿ ಪೂಜೆ, ಮಹಾಮಂಗಳಾರತಿ, ಹರಕೆ ಸಮರ್ಪಣೆ ನಂತರ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಲಿದೆ.

ಸಭೆಯಲ್ಲಿ ಮುಖಂಡರಾದ ಎ.ಲೋಕೇಶ್ ಕುಮಾರ್, ಪಟ್ಟೆಮನೆ ಉದಯಕುಮಾರ್, ವೈ.ಯಂ.ಕರುಂಬಯ್ಯ, ದೇವಾಲಯ ಸಮಿತಿ ಕಾರ್ಯದರ್ಶಿ ಪಿ.ಸಿ.ಮೋಹನ್, ಖಜಾಂಜಿ ರಮೇಶ್‌ ಪಿಳ್ಳೆ, ಎ.ಶ್ರೀಧರ್ ಕುಮಾರ್, ಪಿ.ಆರ್.ಸುಕುಮಾರ್, ದಿನು ದೇವಯ್ಯ, ಪಿ.ಸಿ.ಮೋಹನ್, ಬಿ.ಕೆ.ಮೋಹನ್, ವಾಸುದೇವ, ಬಿ.ಕೆ.ಪ್ರಶಾಂತ್, ಧನು ಕಾವೇರಪ್ಪ, ಸುರೇಶ್‌ ಗೋಪಿ, ಸದಾಶಿವ ರೈ, ಸುನಿಲ್‌ ಕುಮಾರ್, ಅಶೋಕ್ ಶೇಟ್, ಎಂ.ಮಂಜುನಾಥ್, ರಾಜು ರೈ, ಶಶಿಕುಮಾರ್ ರೈ, ಎಂ.ಎಸ್.ಸುನಿಲ್, ಸುರೇಶ್‌ ಕುಮಾರ್ ಸೇರಿದಂತೆ ವಿವಿಧ ದೇವಾಲಯಗಳ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

PREV

Recommended Stories

ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​