ಕಾಂಗ್ರೆಸ್‌ನಿಂದ ಸಂವಿಧಾನ, ಡಾ.ಅಂಬೇಡ್ಕರ್‌ಗೆ ಅಪಮಾನ

KannadaprabhaNewsNetwork |  
Published : Nov 27, 2024, 01:03 AM IST
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ಸಮ್ಮಾನ್ ದಿನಾಚರಣೆ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ಸಮ್ಮಾನ್ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಮತ್ತು ಸಂವಿಧಾನ ಕತೃ ಭಾರತ ರತ್ನ ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮಹತ್ವದ ಸ್ಥಾನವಿದೆ. ಆದರೆ, ಕಾಂಗ್ರೆಸ್‌ನಿಂದ ಸಂವಿಧಾನ ಮತ್ತು ಡಾ.ಅಂಬೇಡ್ಕರ್ ಅವರಿಗೆ ಎಲ್ಲಾ ರೀತಿಯಲ್ಲೂ ದೊಡ್ಡ ಅಪಮಾನ ಮಾಡಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಆರೋಪ ಮಾಡಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ಸಮ್ಮಾನ್ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಂವಿಧಾನ ರಚನಾ ಸಮಿತಿ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಕಾಂಗ್ರೆಸ್ ಡಾ.ಅಂಬೇಡ್ಕರ್ ಅವರನ್ನು ಎಲ್ಲಾ ಹಂತದಲ್ಲೂ ಅವಮಾನಿಸಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ನೆಹರು ತನ್ನ ಆಪ್ತ ಸಹಾಯಕನನ್ನು ಅಭ್ಯರ್ಥಿಯನ್ನಾಗಿಸಿ ಬಾಬಾಸಾಹೇಬರನ್ನು ಸೋಲಿಸುವ ಮೂಲಕ ದೊಡ್ಡ ಅವಮಾನ ಮಾಡಿದ್ದಾರೆ ಎಂದರು.

ದೇಶದಲ್ಲಿ ಸಂವಿಧಾನ ದಿನವನ್ನು ಸಮ್ಮಾನ್ ದಿನವನ್ನಾಗಿ ಆಚರಿಸಲು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಅವರ ಸರ್ಕಾರ ಅಧಿಕಾರಕ್ಕೆ ಬರಬೇಕಾಯಿತು. 6 ದಶಕಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಎಂದೂ ಸಂವಿಧಾನ ಮತ್ತು ಬಾಬಾಸಾಹೇಬ ಡಾ.ಅಂಬೇಡ್ಕರ್ ಆಶಯಗಳನ್ನು ಅನುಷ್ಠಾನಗೊಳಿಸಲು ಚಿಂತನೆ ನಡೆಸಲೇ ಇಲ್ಲ. ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾದ ನಂತರ 2015 ರಿಂದ ಪ್ರತಿ ವರ್ಷ ನವಂಬರ್ 26ನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.ಕಾಂಗ್ರೆಸ್ ದೇಶದಲ್ಲಿ ಓಲೈಕೆ ರಾಜಕಾರಣದಲ್ಲಿ ತೊಡಗಿದೆ. ದೇಶದಲ್ಲಿ ನಡೆಸುತ್ತಿರುವ ಕುತಂತ್ರಗಳ ಬಗ್ಗೆ ನಾವು ಈಗಲೇ ಎಚ್ಚರಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದೇಶ ಗಂಡಾಂತರ ಎದುರಿಸಬೇಕಾಗುತ್ತದೆ ಎಂದರು.ಬಿಜೆಪಿ ಚಿಕ್ಕಮಗಳೂರು ನಗರ ಮಂಡಲ ಅಧ್ಯಕ್ಷ ಕೆ.ಎಸ್.ಪುಷ್ಪರಾಜ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ, ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಬಿ.ರಾಜಪ್ಪ, ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯದರ್ಶಿ ಸೀತಾರಾಮಭರಣ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ, ಕೋಟೆ ರಂಗನಾಥ್, ಕನಕರಾಜ ಅರಸ್, ಎಚ್.ಎಸ್.ಪುಟ್ಟೇಗೌಡ, ಸವಿತಾ ರಮೇಶ್, ಎಚ್.ಎಸ್.ಕವೀಶ್, ಜಿಲ್ಲಾ ಬಿಜೆಪಿ ವಕ್ತಾರ ಬಿ.ಜಿ.ಸೋಮಶೇಖರ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಜಸಂತ ಅನಿಲ್ ಕುಮಾರ್, ನಗರಸಭೆ ಸದಸ್ಯರಾದ ರೂಪ ಕುಮಾರ್, ಮಣಿಕಂಠ, ಕುಮಾರ್, ಕಡೂರು ಮಂಡಲ ಅಧ್ಯಕ್ಷ ದೇವಾನಂದ್ ಉಪಸ್ಥಿತರಿದ್ದರು. ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಬಸವರಾಜ್ ಸ್ವಾಗತಿಸಿ, ನಿರೂಪಿಸಿದರು. ಮಾಧ್ಯಮ ಸಹ ಪ್ರಮುಖ್ ಹಿರೇಮಗಳೂರು ಕೇಶವಮೂರ್ತಿ ಪೀಠಿಕೆ ವಾಚಿಸಿದರು.

PREV

Recommended Stories

ಶ್ರೀ ಶ್ರೀ ರವಿಶಂಕರ್‌ಗೆ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ
ಹಾಡಹಗಲೇ ಮನೆಗೆ ನುಗ್ಗಿ ಚಹಾ ವ್ಯಾಪಾರಿಯ ಕತ್ತು ಕೊಯ್ದು ಹತ್ಯೆ