ಕನ್ನಡಪ್ರಭ ವಾರ್ತೆ ಮಾಗಡಿ
ಇದು ಸರ್ಕಾರಕ್ಕೆ ತಲುಪವ ಕೆಲಸವಾಗಲಿ ಈ ಪೂರ್ವಭಾವಿ ಸಭೆಗೆ ಯಾವ ಅಧಿಕಾರಿಗಳು ಸರಿಯಾಗಿ ಬಂದಿಲ್ಲ. ಅವರ ವಿರುದ್ಧ ಯಾವುದೇ ಕ್ರಮ ಆಗುವುದಿಲ್ಲ. ಈ ರೀತಿ ತಹಸೀಲ್ದಾರ್ ಅವರು ಮಾಡುತ್ತಿರುವುದು ಸರಿಯಲ್ಲ. ಈ ಕಾರ್ಯಕ್ರಮ ಬಹಿಷ್ಕರಿಸುತ್ತೇವೆ ಎಂದು ದಲಿತ ಮುಖಂಡ, ತಾಪಂ ಮಾಜಿ ಅಧ್ಯಕ್ಷ ಚಂದುರಾಯನಹಳ್ಳಿ ಕೃಷ್ಣ ಹಾಗೂ ಮಾಡಬಾಳ್ ಜಯರಾಂ ಆಕ್ರೋಶ ವ್ಯಕ್ತಪಡಿಸಿದರು.
ಸಭೆಗೆ ಬಾರದ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳಿಗೆ ಸಸ್ಪೆಂಡ್ ಮಾಡುವಂತೆ ಪತ್ರ ಬರೆಯಲಾಗುತ್ತದೆ ನಮಗೂ ಕೂಡ ಆದೇಶ ತಡವಾಗಿ ಬಂದಿರುವುದರಿಂದ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಆಚರಿಸೋಣ ಎಂದು ತಹಸೀಲ್ದಾರ್ ಹಾಗೂ ದಲಿತ ಮುಖಂಡರಾದ ಮಂಜೇಶ್ ಕಲ್ಕೆರೆ ಶಿವಣ್ಣ ನರಸಿಂಹಮೂರ್ತಿ ಮನವಿ ಹಿನ್ನೆಲೆಯಲ್ಲಿ ಸಂವಿಧಾನ ದಿನಾಚರಣೆ ಆಚರಿಸಲು ತೀರ್ಮಾನ ಮಾಡಲಾಯಿತು.ತಹಸೀಲ್ದಾರ್ ಶರತ್ ಕುಮಾರ್ ಮಾತನಾಡಿ, ನ. 26ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಕಲ್ಯಾಗೇಟ್ ವೃತ್ತದಿಂದ ಪುರಸಭೆ ಅಂಬೇಡ್ಕರ್ ಪ್ರತಿಮೆ ವರೆಗೂ ಜಾಥಾ ಮೆರವಣಿಗೆ ಮಾಡಿಸಿ ನಂತರ ಡಾ.ಶಿವಕುಮಾರ ಸ್ವಾಮೀಜಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಗುತ್ತದೆ. ಪ್ರಬಂಧ ಸ್ಪರ್ಧೆ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಹಾಗೂ ಗಣ್ಯರಿಂದ ಸಂವಿಧಾನ ಬಗ್ಗೆ ಸಂದೇಶ ಕೊಡುವ ಕೆಲಸ ಮಾಡಲಾಗುತ್ತದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಕಲ್ಕೆರೆ ಶಿವಣ್ಣ, ದಲಿತ ಮುಖಂಡರಾದ ನರಸಿಂಹಮೂರ್ತಿ, ಕುದೂರು ಮಂಜೇಶ್, ಮಾಡಬಾಳ್ ಜಯರಾಂ, ಕೃಷ್ಣ, ಜೀವಿಕ ಗಂಗಹನುಮಯ್ಯ, ತಾ.ಪಂ. ಇಒ ಜೈಪಾಲ್ ಸೇರಿದಂತೆ ಇತರರು ಭಾಗವಹಿಸಿದರು.