ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

KannadaprabhaNewsNetwork |  
Published : Nov 28, 2024, 12:31 AM IST
ಚಿತ್ರ : 27ಎಂಡಿಕೆ3 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಸಂವಿಧಾನ ದಿನ ಆಚರಿಸಲಾಯಿತು.  | Kannada Prabha

ಸಾರಾಂಶ

ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ ನೆರವೇರಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸ್ವಾತಂತ್ರ್ಯ, ಸಮಾನತೆ, ಸೋದರತ್ವ, ಧರ್ಮ, ಏಕತೆ, ಭ್ರಾತೃತ್ವ, ಶಿಕ್ಷಣ, ಸ್ವತಂತ್ರ ಭಾರತದ ಸಂವಿಧಾನದಲ್ಲಿನ ಪ್ರಮುಖ ಮೌಲ್ಯಗಳು. ಮೂಲಭೂತ ಹಕ್ಕುಗಳೊಂದಿಗೆ ಮೂಲಭೂತ ಕರ್ತವ್ಯಗಳು ಕೂಡ ಬಹುಮುಖ್ಯ ಎಂದು ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ಅಭಿಪ್ರಾಯಪಟ್ಟಿದ್ದಾರೆ.ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಹಾಗೂ ಭಾರತ ಸಂವಿಧಾನದ ಪ್ರಸ್ತಾವನೆಯ ಪ್ರತಿಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಂತರ ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿ ಬೋಧಿಸಿ, ಸಂವಿಧಾನದ ತತ್ವ ಮತ್ತು ಆಶಯಗಳನ್ನು ಸಾಕಾರಗೊಳಿಸುವಲ್ಲಿ ತನ್ನನ್ನು ತಾನು ಪರಮರ್ಶೆ ಮಾಡಿಕೊಳ್ಳಲು ಇದು ಸುದಿನ ಎಂದರು.

ಭಾರತದ ಪ್ರಜೆಗಳನ್ನು ಆಳುವ ಶಾಸಕಾಂಗ, ನ್ಯಾಯ ಒದಗಿಸುವ ನ್ಯಾಯಾಂಗ, ಜನರಿಗಾಗಿ ಕೆಲಸ ಮಾಡುವ ಕಾರ್ಯಾಂಗ ಹೇಗಿರಬೇಕು ಯಾವೆಲ್ಲ ನಿಯಮಗಳನ್ನು ಪಾಲಿಸಬೇಕು ಎಂದೆಲ್ಲ ಸೂಚನೆಗಳನ್ನು ಹಾಕಿ ಕೊಟ್ಟ ಸಮಗ್ರ ಮಾಹಿತಿಗಳ ಆಗರ ನಮ್ಮ ಸಂವಿಧಾನ ಎಂದು ತಿಳಿಸಿದರು.

ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಗಾಯಿತ್ರಿ ದೇವಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಇ.ತಿಪ್ಪೇಸ್ವಾಮಿ, ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಂ.ಪಿ.ಕೃಷ್ಣ, ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಮಹದೇವಯ್ಯ, ಹಿಂದಿ ವಿಭಾಗದ ಮುಖ್ಯಸ್ಥ ಬಿ.ಎಚ್.ತಳವಾರ್, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಎಂ.ಎನ್.ರವಿಶಂಕರ್, ರಾಜ್ಯಶಾಸ್ತ್ರ ಉಪನ್ಯಾಸಕ ನಿವ್ಯ, ಡೀನ ಮತ್ತಿತರರು ಹಾಜರಿದ್ದರು.

ರಾಜ್ಯಶಾಸ್ತ್ರ ಉಪನ್ಯಾಸಕ ಡಾ. ಕೆ.ಎಸ್.ಶೃಂಗಾರ್ ನಿರೂಪಿಸಿ, ಸಂವಿಧಾನದ ಪ್ರತಿಜ್ಞಾವಿಧಿ ಕಾರ್ಯಕ್ರಮ ನಡೆಸಿಕೊಟ್ಟರು.

ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದ ಕುರಿತು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ, ಸಂವಿಧಾನದ ಅರಿವು ಮೂಡಿಸಲಾಯಿತು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ