ಜಿಲ್ಲಾ ಬಿಜೆಪಿಯಿಂದ ಸಂವಿಧಾನ ದಿನಾಚರಣೆ: ಡಾ.ಅಂಬೇಡ್ಕರ್ ಪುತ್ಥಳಿಗೆ ಗೌರವಾರ್ಪಣೆ

KannadaprabhaNewsNetwork |  
Published : Nov 28, 2024, 12:33 AM IST
26ಅಂಬೇಡ್ಕರ್ | Kannada Prabha

ಸಾರಾಂಶ

ಸಂವಿಧಾನ ದಿನಾಚರಣೆ ಅಂಗವಾಗಿ ಮಂಗಳವಾರ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಜಿ ಸಚಿವ ಎನ್.ಮಹೇಶ್ ಮಾಲಾರ್ಪಣೆಗೈದು ಗೌರವ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಸಂವಿಧಾನ ದಿನಾಚರಣೆ ಅಂಗವಾಗಿ ಮಂಗಳವಾರ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಜಿ ಸಚಿವ ಎನ್.ಮಹೇಶ್ ಮಾಲಾರ್ಪಣೆಗೈದು ಗೌರವ ಸಲ್ಲಿಸಿದರು.ಈ ಕಾರ್ಯಕ್ರಮದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಪ್ರಮುಖರಾದ ವಿಕಾಸ್ ಪುತ್ತೂರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಜಿಲ್ಲಾ ವಕ್ತಾರ ವಿಜಯಕುಮಾರ್ ಉದ್ಯಾವರ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಗುರುಪ್ರಸಾದ್, ಕಿಶೋರ್ ಕರಂಬಳ್ಳಿ ಮತ್ತಿತರರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ‘ಸಂವಿಧಾನ ದಿನಾಚರಣೆ’ ನಡೆಸಲಾಯಿತು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾಮತ್, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಪ್ರಮುಖರಾದ ಚಂದ್ರಶೇಖರ ಪ್ರಭು, ಗುರುಪ್ರಸಾದ್, ಕಿಶೋರ್ ಕರಂಬಳ್ಳಿ, ದಯಾಶಿನಿ, ಮಾಯಾ ಕಾಮತ್, ಶಾಂತಿ ಮನೋಜ್, ಪ್ರಜ್ಞಾ ಶೆಟ್ಟಿ, ಚಂದ್ರಿಕಾ, ದೀಪಾ ಪೈ, ಸುಮಾ ಶೆಟ್ಟಿ, ವಿದ್ಯಾ ಮತ್ತಿತರರು ಉಪಸ್ಥಿತರಿದ್ದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ