ಸಂವಿಧಾನ ದಿನಾಚರಣೆ: ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

KannadaprabhaNewsNetwork |  
Published : Nov 27, 2026, 02:45 AM IST
ಪಪಂಯಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಕಾರ್ಯಕ್ರಮ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆಪಪಂಯಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಕಾರ್ಯಕ್ರಮ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ | Kannada Prabha

ಸಾರಾಂಶ

ಇಲ್ಲಿನ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸೋಮವಾರಪೇಟೆ : ಇಲ್ಲಿನ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಪಿ. ಮಹೇಶ್ ಕುಮಾರ್ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂವಿಧಾನ ಪೀಠಿಕೆಯನ್ನು ಓದಿದರು. ಇದೇ ಸಂದರ್ಭ ದಿನದ ಮಹತ್ವ ಕುರಿತು ಮಾತನಾಡಿ, ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನಾಚರಣೆ (ಸಂವಿಧಾನ ದಿವಸ) ಆಚರಿಸಲಾಗುತ್ತಿದೆ. ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ಸಂವಿಧಾನದ ಮೌಲ್ಯಗಳು ಮತ್ತು ಮೂಲಭೂತ ಹಕ್ಕು-ಕರ್ತವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈ ದಿನವನ್ನು ಸಂವಿಧಾನ ದಿವಸವಾಗಿ ಆಚರಿಸಲಾಗುತ್ತಿದೆ ಎಂದರು.

ಎಲ್ಲ ಸಿಬ್ಬಂದಿ ಸಂವಿಧಾನ ಪೀಠಿಕೆ ವಾಚಿಸಿ ಪ್ರತಿಜ್ಞೆ ವಿಧಿ ಸ್ವೀಕರಿಸಿದರು. ಈ ಸಂದರ್ಭ ಕಂದಾಯ ನಿರೀಕ್ಷಕ ಎಚ್.ಎ. ಜೀವನ್‌ಕುಮಾರ್, ಸಿಬ್ಬಂದಿ ಅರುಣ್ ಕುಮಾರ್, ವನಿತಾ, ರೈನಾ, ಹರ್ಷಿತಾ, ಆದಿಲ್ ಮತ್ತು ಇತರರು ಭಾಗವಹಿಸಿದ್ದರು.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ: ಪಟ್ಟಣದ ಬಾಣವಾರ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಾಧಿಕಾರಿ ಮಹೇಶ್ ಕುಮಾರ್ ಪುಷ್ಪಹಾರ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನಸಾಮಾನ್ಯರ ಕಲ್ಯಾಣಕ್ಕಾಗಿ ವಿವಿಧ ಜನಪರ ಕಾರ್ಯಕ್ರಮ: ರಿಜ್ವಾನ್ ಅರ್ಷದ್
ಬ್ಯಾಂಕುಗಳು ಆಹಾರ ಸಂಸ್ಕರಣೆಗೆ ಪ್ರೋತ್ಸಾಹ ನೀಡಿ: ಪ್ರತೀಕ್ ಬಾಯಲ್‌