ಫೆಬ್ರವರಿ 22ರಂದು ಕಾಂಗ್ರೆಸ್‌ನಿಂದ ಸಂವಿಧಾನ ರಕ್ಷಕ್ ಅಭಿಯಾನ: ಆರ್.ಪ್ರಸನ್ನಕುಮಾರ್

KannadaprabhaNewsNetwork |  
Published : Feb 21, 2025, 11:46 PM IST
ಪೊಟೋ: 21ಎಸ್‌ಎಂಜಿಕೆಪಿ02ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲಾ ಕಾಂಗ್ರೆಸ್ ಸಮಿತಿ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ, ಪರಿಶಿಷ್ಟ ಜಾತಿ ವಿಭಾಗ, ಪರಿಶಿಷ್ಟ ಪಂಗಡ ವಿಭಾಗ, ಅಲ್ಪಸಂಖ್ಯಾತರ ವಿಭಾಗದ ವತಿಯಿಂದ ಫೆ.22 ರಂದು ಬೆಳಿಗ್ಗೆ 11ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ರಕ್ಷಕ್ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ತಿಳಿಸಿದರು.

ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಆಯೋಜನೆ । ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಾಹಿತಿಕನ್ನಡಪ್ರಭ ವಾರ್ತೆ ಶಿವಮೊಗ್ಗ

ಜಿಲ್ಲಾ ಕಾಂಗ್ರೆಸ್ ಸಮಿತಿ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ, ಪರಿಶಿಷ್ಟ ಜಾತಿ ವಿಭಾಗ, ಪರಿಶಿಷ್ಟ ಪಂಗಡ ವಿಭಾಗ, ಅಲ್ಪಸಂಖ್ಯಾತರ ವಿಭಾಗದ ವತಿಯಿಂದ ಫೆ.22 ರಂದು ಬೆಳಿಗ್ಗೆ 11ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ರಕ್ಷಕ್ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬೆಳಗಾವಿ ಅಧಿವೇಶನದಲ್ಲಿ ಜೈ ಬಾಪೂ, ಜೈ ಭೀಮ್, ಜೈ ಸಂವಿಧಾನ್ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದು ಯಶಸ್ವಿಯಾಗಿದ್ದು, ಇದರ ನಂತರ ಈಗ ಜಿಲ್ಲಾ ಮಟ್ಟದಲ್ಲಿ ಸಂವಿಧಾನ ರಕ್ಷಕ್ ಅಭಿಯಾನ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.ಕೇಂದ್ರ ಗೃಹಮಂತ್ರಿ ಸೇರಿದಂತೆ ಬಿಜೆಪಿ ನಾಯಕರು ಸಂವಿಧಾನವನ್ನು ಮತ್ತು ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನ ಮಾಡತೊಡಗಿದ್ದಾರೆ. ಸಂವಿಧಾನದ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಇದರ ರಕ್ಷಣೆ ಇಂದು ಅನಿವಾರ್ಯ ಮತ್ತು ಅಗತ್ಯವಾಗಿದೆ. ರಾಷ್ಟ್ರೀಯ ಮತ್ತು ರಾಜ್ಯ ಮುಖಂಡರ ನಿರ್ದೇಶನದಂತೆ ಶಿವಮೊಗ್ಗದಲ್ಲಿಯೂ ಕೂಡ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಫೆ.22ರಂದು ಬೆಳಗ್ಗೆ 9.30ಕ್ಕೆ ಗಾಂಧಿ ಪಾರ್ಕ್‍ನಲ್ಲಿರುವ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಈ ಮೆರವಣಿಗೆ ಅಲ್ಲಿಂದ ಮಹಾನಗರ ಪಾಲಿಕೆಗೆ ತೆರಳಿ ಅಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಶಿವಪ್ಪನಾಯಕ ವೃತ್ತದ ಮೂಲಕ ಎಎ ಸರ್ಕಲ್, ನೆಹರೂ ರಸ್ತೆ, ಶೀನಪ್ಪ ಶೆಟ್ಟಿ ವೃತ್ತ ನಂತರ ಅಂಬೇಡ್ಕರ್ ಭವನದವರೆಗೂ ಸಾಗುತ್ತದೆ. ಅಲ್ಲಿ ವೇದಿಕೆ ಕಾರ್ಯಕ್ರಮ 11 ಗಂಟೆಗೆ ಜರುಗಲಿದೆ ಎಂದರು.ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದು. ಕಾರ್ಯಕ್ರಮದಲ್ಲಿ ಶಾಸಕರಾದ ಬಿ.ಕೆ.ಸಂಗಮೇಶ್, ಗೋಪಾಲಕೃಷ್ಣ ಬೇಳೂರು, ಬಲ್ಕೀಶ್ ಬಾನು ಹಾಗೂ ವಿವಿಧ ಅಭಿವೃದ್ಧಿ ನಿಗಮಗಳ ಅಧ್ಯಕ್ಷರಾದ ಆರ್.ಎಂ.ಮಂಜುನಾಥಗೌಡ, ಎಸ್.ರವಿಕುಮಾರ್, ಜಿ.ಪಲ್ಲವಿ, ಎಚ್.ಎಸ್.ಸುಂದರೇಶ್, ಸಿ.ಎಸ್. ಚಂದ್ರಭೂಪಾಲ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭಾಗವಹಿಸುವರು. ನಿವೃತ್ತ ಉಪನ್ಯಾಸಕ ಡಾ.ಕೆ.ಜಿ.ವೆಂಕಟೇಶ್ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಶಿವಣ್ಣ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಮುಜಾಮಿಲ್ ಪಾಷಾ, ಎಸ್ಟಿ ಘಟಕದ ಅಧ್ಯಕ್ಷ ಕೆ.ಆರ್.ಶ್ರೀಧರ್, ಒಬಿಸಿ ಘಟಕದ ಜಿಲ್ಲಾಧ್ಯಕ್ಷ ಇಕ್ಕೇರಿ ರಮೇಶ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಮುಖಂಡರಾದ ಕಲಗೋಡು ರತ್ನಾಕರ್, ಡಾ.ಶ್ರೀನಿವಾಸ ಕರಿಯಣ್ಣ, ಶರತ್ ಮರಿಯಪ್ಪ, ಎಸ್.ಟಿ.ಹಾಲಪ್ಪ, ಜಿ.ಡಿ.ಮಂಜುನಾಥ್, ಶಿ.ಜು.ಪಾಶಾ, ಉಮಾಪತಿ, ಗಣಪತಿ, ರಮೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ