ಎಲ್ಲರಿಗೂ ಸಮಾನತೆ ತರುವುದು ಸಂವಿಧಾನ, ಪ್ರಜಾಪ್ರಭುತ್ವ: ಲಾಡ್‌

KannadaprabhaNewsNetwork |  
Published : Sep 16, 2025, 01:00 AM IST
15ಡಿಡಬ್ಲೂಡಿ3ಕರ್ನಾಟಕ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಸೋಮವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟನೆ.  | Kannada Prabha

ಸಾರಾಂಶ

ಮೀಸಲಾತಿ ಪರಿಕಲ್ಪನೆ ಬಂದಿದ್ದು, ಎಲ್ಲರಲ್ಲೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ಮತ್ತು ಸಮಾನ ಅವಕಾಶ ತರುವುದಾಗಿದೆ. ಮೀಸಲಾತಿ ಪರಿಕಲ್ಪನೆ ಸರ್ವರ ಅಭಿವೃದ್ಧಿಯನ್ನು ಸಮಾನವಾಗಿ ಸಾಧಿಸುವುದಾಗಿದೆ. ಮಹಿಳೆಯರಿಗೆ ಆಸ್ತಿ ಹಕ್ಕು ಬಂದಿದ್ದು, ಇತರ ಹಕ್ಕುಗಳನ್ನು ನೀಡಿದ್ದು ಲಿಂಗ ಸಮಾನತೆಯಾಗಿದೆ.

ಧಾರವಾಡ: ಸಮಾಜದ ಎಲ್ಲರಿಗೂ ಎಲ್ಲ ಕ್ಷೇತ್ರಗಳಲ್ಲೂ ಸಮಾನತೆ ತರುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯ. ಪ್ರಜೆಗಳೆ ಪ್ರಜಾಪ್ರಭುತ್ವದ ಜೀವಾಳ ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಕರ್ನಾಟಕ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಸೋಮವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಮೀಸಲಾತಿ ಪರಿಕಲ್ಪನೆ ಬಂದಿದ್ದು, ಎಲ್ಲರಲ್ಲೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ಮತ್ತು ಸಮಾನ ಅವಕಾಶ ತರುವುದಾಗಿದೆ. ಮೀಸಲಾತಿ ಪರಿಕಲ್ಪನೆ ಸರ್ವರ ಅಭಿವೃದ್ಧಿಯನ್ನು ಸಮಾನವಾಗಿ ಸಾಧಿಸುವುದಾಗಿದೆ. ಮಹಿಳೆಯರಿಗೆ ಆಸ್ತಿ ಹಕ್ಕು ಬಂದಿದ್ದು, ಇತರ ಹಕ್ಕುಗಳನ್ನು ನೀಡಿದ್ದು ಲಿಂಗ ಸಮಾನತೆಯಾಗಿದೆ ಎಂದರು.

ಇವತ್ತು ಡ್ರಗ್ಸ್ ಒಂದು ಶಾಪವಾಗಿ, ಅಭಿವೃದ್ಧಿ ವಿರೋಧಿಯಾಗಿ ಬೆಳೆಯುತ್ತಿದೆ. ಇದನ್ನು ತಡೆಗಟ್ಟುವ ಜವಾಬ್ದಾರಿ ಎಲ್ಲರ ಮೇಲಿದೆ. ಸಂಪೂರ್ಣವಾಗಿ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಗುರಿಯಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಕಳೆದ 2008 ರಿಂದ ದೇಶದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಜೆಗಳೇ ಪ್ರಜಾಪ್ರಭುತ್ವದ ಜೀವಾಳ. ಇಂದಿನ ಲಿಂಗ ಸಮಾನತೆ, ಅವಕಾಶಗಳ ಸಮಾನತೆ, ಎಲ್ಲರಿಗೂ ಆಸ್ತಿ ಹಕ್ಕು ಲಭಿಸಿದ್ದು ಸಂವಿಧಾನ ನೀಡಿರುವ ಅವಕಾಶ. ಮಹಿಳೆಯರು ಸಂವಿಧಾನ ನೀಡಿರುವ ಅವಕಾಶಗಳನ್ನು ಬಳಸಿಕೊಂಡು, ಅಭಿವೃದ್ಧಿ ಹೊಂದಬೇಕು ಎಂದರು.

ಐಎಎಸ್ ಪ್ರೊಬೇಷನರಿ ಅಧಿಕಾರಿ ರಿತೀಕಾ ವರ್ಮಾ ಮಾತನಾಡಿದರು. ಹುಡಾ ಅಧ್ಯಕ್ಷ ಶಾಕೀರ ಸನದಿ, ಜಿಪಂ ಸಿಇಓ ಭುವನೇಶ ಪಾಟೀಲ, ಎಸ್ಪಿ ಗುಂಜನ್ ಆರ್ಯ ಇದ್ದರು. ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ವಾಚನ ಮಾಡಲಾಯಿತು. ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ಕುರಿತು ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಶುಭ ಪಿ. ಅವರು ಸ್ವಾಗತಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ಸೈಕಲ್ ಜಾಥಾದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಬಿತ್ತಿ ಪತ್ರ, ಘೋಷಣೆಗಳ ಮೂಲಕ ಭಾಗವಹಿಸಿ ಜನರಲ್ಲಿ ಜಾಗೃತಿ ಮೂಡಿಸಿದರು.

PREV

Recommended Stories

ದ.ಕ.ದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಚಾಲನೆ
ಕದ್ರಿ ದೇವಸ್ಥಾನ ಪ್ರಾಂಗಣದಲ್ಲಿ ‘ಮುದ್ದು ಕೃಷ್ಣ’ ವೇಷ ಸ್ಪರ್ಧೆ