ಸಂವಿಧಾನ ಪವಿತ್ರ ಗ್ರಂಥ-ಕುಲಪತಿ ಪ್ರೊ. ಭಾಸ್ಕರ್‌

KannadaprabhaNewsNetwork |  
Published : Nov 27, 2024, 01:01 AM IST
 ಪೊಟೋ ಪೈಲ್ ನೇಮ್ ೨೬ಎಸ್‌ಜಿವಿ೨  ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಲ್ಲಿಗೆದಂಡೆ ಸಭಾಂಗಣದಲ್ಲಿ ಆಯೋಜಿಸಲಾದ ಸಂವಿಧಾನ ದಿನದ ಕಾರ್ಯಕ್ರಮದ ಅಂಗವಾಗಿ ಕುಲಪತಿಗಳಾದ ಪ್ರೊ.ಟಿ ಎಂ ಭಾಸ್ಕರ್ ಅಧ್ಯಕ್ಷತೆ ವಹಿಸಿ ಸಂವಿಧಾನ ಪ್ರತಿಜ್ಞಾ ವಿಧಿ ಬೋಧಿಸಿ, ಮಾತನಾಡಿದರು. | Kannada Prabha

ಸಾರಾಂಶ

ದೇಶದ ದಮನಿತರು, ಮಹಿಳೆಯರು ಅಕ್ಷರ ಲೋಕದಿಂದ ದೂರ ಇದ್ದರು. ಮೌಢ್ಯತೆಯ ಲೋಕದಿಂದ ಅಕ್ಷರ ಲೋಕವನ್ನು ಪ್ರವೇಶ ಮಾಡಿ ಎಂದು ತತ್ವಾದರ್ಶದ, ಪವಿತ್ರವಾದ ಗ್ರಂಥ ಭಾರತ ಸಂವಿಧಾನ ಹೇಳುತ್ತದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.

ಶಿಗ್ಗಾಂವಿ: ದೇಶದ ದಮನಿತರು, ಮಹಿಳೆಯರು ಅಕ್ಷರ ಲೋಕದಿಂದ ದೂರ ಇದ್ದರು. ಮೌಢ್ಯತೆಯ ಲೋಕದಿಂದ ಅಕ್ಷರ ಲೋಕವನ್ನು ಪ್ರವೇಶ ಮಾಡಿ ಎಂದು ತತ್ವಾದರ್ಶದ, ಪವಿತ್ರವಾದ ಗ್ರಂಥ ಭಾರತ ಸಂವಿಧಾನ ಹೇಳುತ್ತದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಲ್ಲಿಗೆದಂಡೆ ಸಭಾಂಗಣದಲ್ಲಿ ಆಯೋಜಿಸಲಾದ ಸಂವಿಧಾನ ದಿನದ ಕಾರ್ಯಕ್ರಮದ ಅಂಗವಾಗಿ ಸಂವಿಧಾನ ಪ್ರತಿಜ್ಞಾ ವಿಧಿ ಬೋಧಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಿಶ್ವದ ವಿವಿಧ ದೇಶದ ಗ್ರಂಥಾಲಯ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳು ರಾರಾಜಿಸುತ್ತವೆ. ಅದಕ್ಕೆ ಅವರನ್ನು ವಿಶ್ವರತ್ನ ಎಂದು ಕರೆಯಲಾಗಿದೆ ಎಂದರು. ಕುಲಸಚಿವರಾದ ಪ್ರೊ ಸಿ.ಟಿ. ಗುರುಪ್ರಸಾದ್ ಅವರು ಮಾತನಾಡಿ, ಈ ದೇಶ ಕಂಡ ಮಹಾನ್ ವ್ಯಕ್ತಿ, ಸಂವಿಧಾನ ಶಿಲ್ಪಿ, ಮಹಾನ್ ಚೇತನ ಡಾ.ಬಿ.ಆರ್. ಅಂಬೇಡ್ಕರ್ ಅವರಾಗಿದ್ದಾರೆ. ಎಲ್ಲರಿಗೂ ಮುಕ್ತ ಸ್ವಾತಂತ್ರ‍್ಯ ನೀಡಿದ್ದಾರೆ. ನಾವೆಲ್ಲರೂ ಒಂದಾಗಿರಬೇಕು, ಎಲ್ಲರನ್ನು ಸಮಾನವಾಗಿ ಕಾಣಬೇಕು ಎಂದು ಸಂವಿಧಾನದ ಮೂಲಕ ತಿಳಿ ಹೇಳಿದ್ದಾರೆ. ಅಂಬೇಡ್ಕರ್ ಅವರನ್ನು ಪೂಜಿಸುವುದರ ಜೊತೆಗೆ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು.ಹಿರಿಯ ಸಂಶೋಧನಾಧಿಕಾರಿ ಡಾ.ಕೆ. ಪ್ರೇಮ್ ಕುಮಾರ್ ಅವರು ಮಾತನಾಡಿ, ಎಲ್ಲ ಜನರಿಗೂ ಸಹ ಭಾರತ ಸಂವಿಧಾನದಿಂದ ಅನುಕೂಲ ಆಗಿದೆ. ಅದನ್ನು ರಚಿಸಿದ ಡಾ. ಬಿ.ಆರ್. ಅಂಬೇಡ್ಕರ್ ಕೊಡುಗೆ ಅಪಾರವಾದದ್ದು, ಮಕ್ಕಳಲ್ಲಿ ಸಂವಿಧಾನದ ಅರಿವನ್ನು ಮೂಡಿಸಲು ಸಂವಿಧಾನ ದಿನ ಆಚರಣೆ ಮಾಡುತ್ತಿರುವುದು ಖುಷಿಯ ವಿಚಾರವಾಗಿದೆ ಎಂದರು.ಸಹಾಯಕ ಸಂಶೋಧನಾಧಿಕಾರಿ ಡಾ. ಮಲ್ಲಿಕಾರ್ಜುನ ಮಾನ್ಪಡೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಸಂಶೋಧನಾಧಿಕಾರಿ ಡಾ. ಹುಲಗಪ್ಪ ನಾಯಕ ಅವರು ವಂದಿಸಿದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ