ರಾಣಿಬೆನ್ನೂರು: ಸಮಾನತೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಸಂವಿಧಾನ ಒಂದು ಮಹತ್ವದ ಮೈಲುಗಲ್ಲಾಗಿದೆ

KannadaprabhaNewsNetwork |  
Published : Sep 07, 2024, 01:44 AM ISTUpdated : Sep 07, 2024, 10:45 AM IST
ಫೋಟೊ ಶೀರ್ಷಿಕೆ: 6ಆರ್‌ಎನ್‌ಆರ್2ರಾಣಿಬೆನ್ನೂರು ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ಶ್ರೀ ಸದ್ಗುರು ಶಿವಾನಂದ ಸಂಯುಕ್ತ ಪ. ಪೂ. ಕಾಲೇಜಿನಲ್ಲಿ ಹಮ್ಮಿಕೊಂಡ ಸಂವಿಧಾನದ ಮೌಲ್ಯಗಳು ಕಾರ್ಯಕ್ರಮವನ್ನು ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ನಾಗರಾಜ್.ಎಸ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಇಂದಿನ ಮಕ್ಕಳು ಹಾಗೂ ಯುವ ಜನತೆ ದೇಶದ ಸಂವಿಧಾನ ಅರಿತು, ಸ್ವಾತಂತ್ರ ಹೋರಾಟಗಾರರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ದೇಶಪ್ರೇಮ ಮೈಕೂಡಿಸಿಕೊಳ್ಳಬೇಕೆಂದು ಎಂದು ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ನಾಗರಾಜ್ ಎಸ್. ಹೇಳಿದರು.

ರಾಣಿಬೆನ್ನೂರು: ಇಂದಿನ ಮಕ್ಕಳು ಹಾಗೂ ಯುವ ಜನತೆ ದೇಶದ ಸಂವಿಧಾನ ಅರಿತು, ಸ್ವಾತಂತ್ರ ಹೋರಾಟಗಾರರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ದೇಶಪ್ರೇಮ ಮೈಕೂಡಿಸಿಕೊಳ್ಳಬೇಕೆಂದು ಎಂದು ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ನಾಗರಾಜ್ ಎಸ್. ಹೇಳಿದರು

.ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಶ್ರೀ ಸದ್ಗುರು ಶಿವಾನಂದ ಸಂಯುಕ್ತ ಪ. ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಸಂವಿಧಾನದ ಮೌಲ್ಯಗಳು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಇಂದಿನ ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಮುಖ್ಯವಾಗಿದ್ದು ವಿಶ್ವ ಮಾನ್ಯತೆಯನ್ನು ಪಡೆದ ನಮ್ಮ ಸಂವಿಧಾನವು ಆಧುನಿಕ ಭಾರತದಲ್ಲಿ ಸಮಾನತೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ಮೈಲುಗಲ್ಲಾಗಿದೆ. ಈ ನೆಲದಲ್ಲಿ ಮೊದಲ ಬಾರಿಗೆ ಒಂದು ಕಾನೂನನ್ನು ಎಲ್ಲರಿಗೆ ಸಮಾನತೆಗಾಗಿ ಅಧಿಕೃತಗೊಳಿಸಿದ್ದು ನಮ್ಮ ಸಂವಿಧಾನ. 

ಆದ್ದರಿಂದ ನಮ್ಮ ದೇಶದ ಸಂವಿಧಾನದ ಮೌಲ್ಯಗಳನ್ನು ತಿಳಿದುಕೊಂಡು ಅದರ ಆಶಯದಂತೆ ಸಮ ಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರು ಬದ್ಧರಾಗಬೇಕು. ಸಂವಿಧಾನದ ಮೌಲ್ಯಗಳು ನಾಗರಿಕರ ಜೀವನದ ಮೌಲ್ಯಗಳಾಗಿ ಅಂತರ್ಗತವಾದಾಗ ಮಾತ್ರ ಪ್ರತಿಯೊಬ್ಬರಿಗೂ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದರು.ಜಿಲ್ಲಾ ನೋಡಲ್ ಅಧಿಕಾರಿ ಹೆಚ್.ಶಿವಾನಂದ ಮಾತನಾಡಿದರು. ಪ್ರಾ. ಪಿ. ಮುನಿಯಪ್ಪ ಅಧ್ಯಕ್ಷತೆ ವಹಿಸಿದ್ದರು ಉಪನ್ಯಾಸಕರಾದ ಸಂತೋಷ್ ಅಂಗಡಿ, ಎಂ.ಎಫ್. ಮುರನಾಳ, ಪೂರ್ಣಿಮಾ ಮಾಗನೂರ, ಭರ್ಮಪ್ಪ ಕೊಡದ, ಪ್ರವೀಣಕುಮಾರ ಕೆ, ಜಗದೀಶಕುಮಾರ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!