ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಭಕ್ತಕನಕದಾಸ ಕ್ರೀಡಾಂಗಣದಲ್ಲಿ ನಡೆದ ಗಣರಾಜೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಭಾರತದ ಸಂವಿಧಾನ ಜಾರಿಗೆ ಬಂದು ದೇಶವನ್ನು ಸಂಪೂರ್ಣ ಗಣರಾಜ್ಯ ರಾಷ್ಟ್ರವಾನ್ನಾಗಿ ಹೊರಹೊಮ್ಮಿದ ದಿನವನ್ನು ಗಣರಾಜೋತ್ಸವವನ್ನಾಗಿ ಆಚರಿಸಲಾಗತ್ತಿದೆ. ಪ್ರತಿಯೊಬ್ಬರು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕೆಂದು ಕರೆ ನೀಡಿದರು.
ತಾಲೂಕಿನ ಮಹತ್ವಕಾಂಕ್ಷೆ ಯೋಜನೆ ಪೂರಿಗಾಲಿ ಹನಿ ಮತ್ತು ತುಂತುರು ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಉದ್ಘಾಟಿಸಲಾಗುವುದು. ವಿಶ್ವವಿಖ್ಯಾತ ಗಗನಚುಕ್ಕಿ ಜಲಪಾತದ ಬಳಿ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಟನಲ್ ಅಕ್ವೇರಿಯಂ ಸ್ಥಾಪಿಸಿ ಉದ್ಯೋಗ ಕಲ್ಪಿಸುವ ಜೊತೆಗೆ ಪ್ರವಾಸೋದ್ಯಮದ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಸದ್ಯದಲ್ಲಿಯೇ ಯೋಜನೆಗೆ ಅನುಮೋದನೆ ಸಿಗಲಿದೆ ಎಂದರು.ತಾಲೂಕಿನ ಕಾನೂನು ಸುವ್ಯವಸ್ಥೆಗಾಗಿ ಗುಣ ಮಟ್ಟದ ಸಿಸಿ ಕ್ಯಾಮೆರಾಗಳನ್ನು ಪಟ್ಟಣದ ಸೇರಿದಂತೆ ಹೋಬಳಿ ಕೇಂದ್ರಗಳಲ್ಲಿ ಹಾಕಿಸಲಾಗಿದೆ. ಸರ್ಕಾರಿ ಶಾಲೆಗೆ ಗುಣಮಟ್ಟದ ಶಿಕ್ಷಣ ನೀಡಲು ಸ್ಮಾರ್ಟ್ ಕ್ಲಾಸ್ ಹಾಗೂ ಮಲ್ಟಿಮೀಡಿಯಾ ಸ್ಥಾಪಿಸಿ ಮೂಲ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಆಸ್ಪತ್ರೆಗೆ ಆಂಬ್ಯೂಲೆನ್ಸ್, ಡಾ.ಅಂಬೇಡ್ಕರ್ ಭವನದ ಒಳಾಂಗಣದ ಅಭಿವೃದ್ಧಿ, ಕನಕದಾಸ ಕ್ರೀಡಾಂಗಣದ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳಿಂದ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದರು.ತಹಸೀಲ್ದಾರ್ ಎಸ್.ವಿ.ಲೋಕೇಶ್ ಮಾತನಾಡಿ, ಭಾರತ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠತೆ ಪಡೆದುಕೊಂಡಿದ್ದು, ಸಂವಿಧಾನದ ಮೌಲ್ಯ ಗೌರವಿಸಬೇಕು. ಸಂವಿಧಾನದಿಂದಾಗಿ ಪ್ರತಿಯೊಬ್ಬರು ನೆಮ್ಮದಿ ಜೀವನ ಸಾಗಿಸಲು ಸಹಾಯಕವಾಗಿದೆ ಎಂದರು.
ಇದೇ ವೇಳೆ ವಿವಿಧ ಕ್ರೀಡಾ ವಿಜೇತರು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ತಾಪಂ ಇಒ ಶ್ರೀನಿವಾಸ್, ಡಿವೈಎಸ್‌ಪಿ ಯಶ್ವಂತ್‌ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಂಜಮಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಿ.ಮಾದೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಲಿಂಗರಾಜು ಸೇರಿದಂತೆ ಇತರರು ಇದ್ದರು.