ಭಾರತೀಯರಿಗೆ ಸಂವಿಧಾನವೇ ಪ್ರೇರಕ ಶಕ್ತಿ: ದಲಿತ ಸಂಘರ್ಷ ಸಮಿತಿಯ ಬಿ.ಎಲ್.ಲಕ್ಷ್ಮಣ್ ಬೇಲೂರು

KannadaprabhaNewsNetwork | Published : Jan 28, 2024 1:20 AM

ಸಾರಾಂಶ

ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ರಚಿಸಿದ ಶ್ರೇಷ್ಠ ಸಂವಿಧಾನವು ದೇಶದ ಜನರಿಗೆ ಪ್ರೇರಕ ಶಕ್ತಿಯಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹಾಸನ ಜಿಲ್ಲಾ ಪ್ರಧಾನ ಸಂಚಾಲಕ ಬಿ.ಎಲ್.ಲಕ್ಷ್ಮಣ್ ಬೇಲೂರು ಹೇಳಿದರು. ಬೇಲೂರಲ್ಲಿ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೇಲೂರಲ್ಲಿ ಸಂವಿಧಾನ ದಿನ ಕಾರ್ಯಕ್ರಮ ಕನ್ನಡಪ್ರಭ ವಾರ್ತೆ ಬೇಲೂರು

ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ರಚಿಸಿದ ಶ್ರೇಷ್ಠ ಸಂವಿಧಾನವು ದೇಶದ ಜನರಿಗೆ ಪ್ರೇರಕ ಶಕ್ತಿಯಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹಾಸನ ಜಿಲ್ಲಾ ಪ್ರಧಾನ ಸಂಚಾಲಕ ಬಿ.ಎಲ್.ಲಕ್ಷ್ಮಣ್ ಬೇಲೂರು ಹೇಳಿದರು.

ಸಂವಿಧಾನ ದಿನಾಚರಣೆ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಮಿತಿಯಿಂದ ಪಟ್ಟಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಶುಕ್ರವಾರ ಮಾಲಾರ್ಪಣೆ ಸಲ್ಲಿಸಿ ಮಾತನಾಡಿ, ಆಧುನಿಕ ಭಾರತದಲ್ಲಿ ಸಮಾನತೆಯನ್ನು ಸಾರುವ ನಿಟ್ಟಿನಲ್ಲಿ ಭಾರತದ ಸಂವಿಧಾನವು ಮಹತ್ತರವಾದ ಮೈಲುಗಲ್ಲಾಗಿದೆ. ವಿಶ್ವದ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಸಂವಿದಾನ ಸರ್ವರಿಗೂ ಸಮಾನತೆ ನೀಡಿದೆ. ಈ ಹಿನ್ನೆಲೆಯಲ್ಲಿ ದೇಶದ ಪ್ರತಿಯೊಬ್ಬರು ಸಂವಿಧಾನ ಆಶಯಗಳು, ಹಕ್ಕು ಮತ್ತು ಮೌಲ್ಯಗಳನ್ನು ಎತ್ತಿ ಹಿಡಿಯುವ ಮೂಲಕ ಭಾರತೀಯ ಸಂವಿಧಾನದ ವ್ಯವಸ್ಥೆಯಲ್ಲಿ ಬದುಕಬೇಕಿದೆ. ಇಂದು ಬದುಕಿದ್ದೇವೆ, ವಿದ್ಯಾವಂತ್ತರಾಗಿದ್ದೇವೆ ಎಂದರೆ ಅದಕ್ಕೆ ಪ್ರಮುಖ ಕಾರಣ ಡಾ.ಬಿ.ಆರ್.ಅಂಬೇಡ್ಕರ್‌ ಬರೆದು ಕೊಟ್ಟ ಸಂವಿಧಾನದಿಂದ ಮಾತ್ರ ಸಾಧ್ಯ. ಆದ್ದರಿಂದ ಸಂವಿಧಾನದ ಸಂಪೂರ್ಣ ಜಾರಿಗೆ ಸರ್ಕಾರಗಳು ಮುಂದಾಗಬೇಕು ಎಂದರು.

ಸಮಿತಿಯ ಜಿಲ್ಲಾ ಸಂಚಾಲಕ ಹೊಯ್ಸಳ, ತಾಲೂಕು ಪ್ರಧಾನ ಮಹಿಳಾ ಸಂಚಾಲಕಿ ವನಜಾಕ್ಷಿ, ಸಂಘಟನಾ ಸಂಚಾಲಕಿ ಮೀನಾಕ್ಷಿ, ಸಂಘಟನಾ ಸಂಚಾಲಕರಾದ ನಿಂಗರಾಜು, ಧರ್ಮಯ್ಯ, ಸತೀಶ್, ರುದ್ರೇಶ್, ಆಟೋ ಲಕ್ಷ್ಮಣ್, ಪ್ರದೀಪ್, ಚಂದ್ರು, ಭದ್ರಯ್ಯ, ತೀರ್ಥಕುಮಾರ್, ಹರೀಶ್, ಸ್ವಾಮಿ, ದೇವರಾಜು, ಎಎಸ್‌ಐ ವಿರೂಪಾಕ್ಷ ಇದ್ದರು.ಸಂವಿದಾನ ದಿನಾಚರಣೆ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಮಿತಿ ಪದಾಧಿಕಾರಿಗಳು ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸುತ್ತಿರುವುದು.

Share this article