ಸಂವಿಧಾನ ಇರುವುದರಿಂದ ದೇಶದಲ್ಲಿ ಸರ್ವರಿಗೂ ಸಮಪಾಲು ದೊರೆಯುತ್ತಿದೆ. ಭಾರತೀಯರು ಒಟ್ಟಿಗೆ ಬಾಳಲು ಸಹಕಾರಿಯಾಗಿದೆ. ಭಾರತದಲ್ಲಿ ಸಂವಿಧಾನ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರಪಂಚದ ಎಲ್ಲಾ ಸಂವಿಧಾನಗಳಿಗಿಂತ ಭಾರತದ ಸಂವಿಧಾನವೇ ಶ್ರೇಷ್ಠ ಮಟ್ಟದಲ್ಲಿದೆ.
ದಾಬಸ್‍ಪೇಟೆ: ಸಂವಿಧಾನ ದೇಶದಲ್ಲಿ ಗಟ್ಟಿಯಾಗಿರುವುದರಿಂದಲೇ ಸಮಾಜದಲ್ಲಿ ಶಾಂತಿ ನೆಮ್ಮದಿ ಇದೆ ಎಂದು ವಿಕೇರ್ ಇಂಟರ್ ನ್ಯಾಷನಲ್ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಅಂಚೆಮನೆ ರಾಜಶೇಖರ್ ಹೇಳಿದರು.
ಪಟ್ಟಣದ ವಿ ಕೇರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಸಂವಿಧಾನವೆಂಬುದು ನಾಗರಿಕರ ನಾಡಿಮಿಡಿತವಾಗಿದೆ. ಸಂವಿಧಾನ ಇರುವುದರಿಂದ ದೇಶದಲ್ಲಿ ಸರ್ವರಿಗೂ ಸಮಪಾಲು ದೊರೆಯುತ್ತಿದೆ. ಭಾರತೀಯರು ಒಟ್ಟಿಗೆ ಬಾಳಲು ಸಹಕಾರಿಯಾಗಿದೆ. ಭಾರತದಲ್ಲಿ ಸಂವಿಧಾನ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರಪಂಚದ ಎಲ್ಲಾ ಸಂವಿಧಾನಗಳಿಗಿಂತ ಭಾರತದ ಸಂವಿಧಾನವೇ ಶ್ರೇಷ್ಠ ಮಟ್ಟದಲ್ಲಿದೆ ಎಂದರು.
ಮುಖ್ಯಶಿಕ್ಷಕಿ ಶಿಲ್ಪಾ ಮಾತನಾಡಿ, ಇಂದು ಸಂವಿಧಾನವನ್ನು ದೇಶಕ್ಕೆ ಸಮರ್ಪಣೆ ಮಾಡಿಕೊಂಡ ವಿಶೇಷ ದಿನವಾಗಿದೆ. ಇಡೀ ಜಗತ್ತಿನಲ್ಲೇ ಅತ್ಯುತ್ತಮವಾದ ಸಂವಿಧಾನ ನೀಡಿದ ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆ ಅವಿಸ್ಮರಣೀಯ. ಭವಿಷ್ಯ ಭಾರತದ ನಿರ್ಮಾತೃಗಳಾದ ವಿದ್ಯಾರ್ಥಿಗಳು ಸಂವಿಧಾನ ಓದಿ ಅದರಲ್ಲಿರುವ ಹಕ್ಕು, ಕರ್ತವ್ಯ ಮತದಾನ, ಚುನಾವಣಾ ವ್ಯವಸ್ಥೆ ಹಾಗು ಪ್ರಜಾಪ್ರಭುತ್ವದ ಮಹತ್ವ ಅರಿತುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.