ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯಲು ಸಂವಿಧಾನ ಕಾರಣ:ಶಶಿಧರ.ಎಂ. ಗೌಡ

KannadaprabhaNewsNetwork |  
Published : Jan 28, 2025, 12:47 AM IST
ಸವದತ್ತಿಯ ತಾ.ಪಂ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಪ್ರಧಾನ ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶರಾದ ಶಶಿಧರ.ಎಮ್.ಗೌಡ ಉದ್ಘಾಟಿಸಿದರು. | Kannada Prabha

ಸಾರಾಂಶ

ಜಗತ್ತಿನಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯಲು ಸಂವಿಧಾನ ಪ್ರಮುಖ ಕಾರಣವಾಗಿದ್ದು, ಸಂವಿಧಾನ ಯಾವುದೆ ಜಾತಿಭೇದ, ಲಿಂಗ ತಾರತಮ್ಯ ಮಾಡದೆ ಎಲ್ಲರಿಗೂ ಸಮಾನ ಹಕ್ಕು ಕೊಟ್ಟಿದೆ ಎಂದು ಪ್ರಧಾನ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರಾದ ಶಶಿಧರ.ಎಂ. ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಸವದತ್ತಿ

ಜಗತ್ತಿನಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯಲು ಸಂವಿಧಾನ ಪ್ರಮುಖ ಕಾರಣವಾಗಿದ್ದು, ಸಂವಿಧಾನ ಯಾವುದೆ ಜಾತಿಭೇದ, ಲಿಂಗ ತಾರತಮ್ಯ ಮಾಡದೆ ಎಲ್ಲರಿಗೂ ಸಮಾನ ಹಕ್ಕು ಕೊಟ್ಟಿದೆ ಎಂದು ಪ್ರಧಾನ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರಾದ ಶಶಿಧರ.ಎಂ. ಗೌಡ ಹೇಳಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ಭಾರತದ ಚುನಾವಣೆ ಆಯೋಗದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಹಸೀಲ್ದಾರ ಮಲ್ಲಿಕಾರ್ಜುನ ಹೆಗ್ಗಣ್ಣವರ ಅಧ್ಯಕ್ಷತೆ ವಹಿಸಿ ಪ್ರತಿಜ್ಞಾವಿಧಿ ಬೋಧಿಸಿದರು.

ಶಾಲೆ ಕಾಲೇಜುಗಳಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಮತದಾರರ ಪಟ್ಟಿ ಪರಿಷ್ಕರಣೆ: ೨೦೨೫ರ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡುವ ಕಾರ್ಯದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಮತಗಟ್ಟೆ ಮಟ್ಟದ ಅಧಿಕಾರಿ ಬಿ.ಎಲ್.ಒಗಳಿಗೆ ಹಾಗೂ ಅಂಗನವಾಡಿ ಶಿಕ್ಷಕಿಯರಿಗೆ ಪ್ರಸಂಶನಾ ಪತ್ರ ನೀಡಲಾಯಿತು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಬಡಕುಂದ್ರಿ, ಗ್ರೇಡ್ ೨ ತಹಸೀಲ್ದಾರ್ ಎಂ.ಎನ್. ಮಠದ, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ, ಪಿಎಸ್‌ಐ ಕೆ.ಎಂ. ಬನ್ನೂರ, ಟಿ.ಎಚ್.ಓ ಡಾ.ಶ್ರೀಪಾದ ಸಬನೀಸ್‌, ಶಶಿರಾಜ ವನಕಿ, ತಾಲೂಕು ಹಿಂದುಳಿದ ವರ್ಗಗಳ ಅಧಿಕಾರಿ ರತ್ನಾ ಕದಂ, ಸಿ.ಡಿ.ಪಿ.ಓ ಸುನಿತಾ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆರ್.ಆರ್. ಕುಲಕರ್ಣಿ, ಕೃಷಿ ಇಲಾಖೆ ಅಧಿಕಾರಿ ಶಿವಪ್ರಕಾಶ ಪಾಟೀಲ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು. ಎಂ.ಸಿ.ಕಂಬಿ ನಿರೂಪಿಸಿದರು. ಎಂ.ಪಿ. ಪಾಟೀಲ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!