ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಭಕ್ತ ಕನಕದಾಸ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಗಣರಾಜೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನದಡಿಯಲ್ಲಿ ಆಡಳಿತ ನಡೆಸುಂವತಾಗಲು ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಕೊಡುಗೆ 75 ವರ್ಷ ತುಂಬಿದ ಸಂಭ್ರಮದಲ್ಲಿ ತೊಡಗಿರುವ ಪ್ರತಿಯೊಬ್ಬರೂ ಸಂವಿಧಾನದ ಆಶಯ ತಿಳಿದುಕೊಳ್ಳಬೇಕು ಎಂದರು.
ಸ್ವಾತಂತ್ರ್ಯ ಬಂದ ನಂತರ ಯಾವ ರೀತಿಯಲ್ಲಿ ದೇಶದ ಆಳ್ವಿಕೆ ನಡೆಯಬೇಕೆಂದು ತಿಳಿಸಿಕೊಡುವುದೇ ಸಂವಿಧಾನವಾಗಿದೆ. ಬಾಬಾ ಸಾಹೇಬರ ಅದರ್ಶಗಳು ಇಂದಿಗೂ ಪ್ರಸ್ತುತವಾಗಿದೆ ಎಂದರು.ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಲಾಯಿತು. ಉತ್ತಮ ಪಥ ಸಂಚಲನ ಮಾಡಿದ ಶಾಲೆ ವಿದ್ಯಾರ್ಥಿಗಳಿಗೆ ಶಾಸಕ ಪಿ.ಎಂ ನರೇಂದ್ರಸ್ವಾಮಿ ಪ್ರಶಸ್ತಿ ನೀಡಿ ಅಭಿನಂದಿಸಿದರು.
ತೊರೆಕಾಡನಹಳ್ಳಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ
ಎಸ್ ಡಿಎಂಸಿ ಅಧ್ಯಕ್ಷ ಮಹೇಶ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಶಿಕ್ಷಕಿ ಎನ್.ರೂಪ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಹಲವು ನಾಯಕರು ಹಾಗೂ ಅಂಬೇಡ್ಕರ್ ಅವರ ಪ್ರಯತ್ನದ ಫಲವಾಗಿ ಸಂವಿಧಾನ ರಚನೆಗೊಂಡು ದೇಶದ ಜನರು ನೆಮ್ಮದಿಯಿಂದ ಬದುಕುವಂತಾಗಿದೆ ಎಂದರು.
ಆಂಜನೇಯಸ್ವಾಮಿಗೆ ತ್ರಿವರ್ಣ ಧ್ವಜದ ಅಲಂಕಾರಹಲಗೂರು:ಮುತ್ತತ್ತಿ ಗ್ರಾಮದಲ್ಲಿ ನೆಲೆಸಿರುವ ಆರಾಧ್ಯ ದೇವ ಆಂಜನೇಯಸ್ವಾಮಿಗೆ 75ನೇ ಗಣರಾಜ್ಯೋತ್ಸವದ ಅಂಗವಾಗಿ ದೇವರ ಮೂರ್ತಿಗೆ ತ್ರಿವರ್ಣ ಧ್ವಜದ ರೀತಿ ಹೂವಿನಿಂದ ಅಲಂಕಾರ ಮಾಡಿರುವುದು ಗಮನ ಸೆಳೆಯಿತು.ಅರ್ಚಕರಾದ ಶ್ರೀಕಾಂತ್ ಮಾತನಾಡಿ, ಗಣರಾಜ್ಯೋತ್ಸವದ ದಿನದಂದು ಸಾಮಾನ್ಯವಾಗಿ ಎಲ್ಲರೂ ಧ್ವಜಾರೋಹಣ ನೆರವೇರಿಸುತ್ತಾರೆ. ಆದರೆ, ಪ್ರಸಿದ್ಧ ಪ್ರವಾಸಿಗರ ಹಾಗೂ ಜಿಲ್ಲೆಯ ಭಕ್ತರ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಜೊತೆಗೆ ತ್ರಿವರ್ಣ ಧ್ವಜದ ರೀತಿಯ ಬಣ್ಣದಲ್ಲೇ ಹೂವಿನಿಂದ ದೇವರ ಮೂರ್ತಿಗೆ ಅಲಂಕರಿಸಿದ್ದೇವೆ. ಮೂರು ದಿನಗಳ ಕಾಲ ರಜೆ ಇರುವುದರಿಂದ ಭಕ್ತರ ಸಂಖ್ಯೆ ಹೆಚ್ಚಾಗಿದ್ದು ಇಂದಿನ ಅಲಂಕಾರವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.