ದೇಶದ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಸಂವಿಧಾನವೇ ಮೂಲ

KannadaprabhaNewsNetwork |  
Published : Nov 27, 2023, 01:15 AM IST
26ಡಿಡಬ್ಲೂಡಿ5ಕರ್ನಾಟಕ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ವಿಭಾಗದಲ್ಲಿ ಭಾನುವಾರ ಸಂವಿಧಾನ ದಿನಾಚರಣೆಯನ್ನು 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಉದ್ಘಾಟಿಸಿದರು.  | Kannada Prabha

ಸಾರಾಂಶ

ಭಾರತೀಯರಿಗೆ ಸಂವಿಧಾನ ಅಮೂಲ್ಯವಾದುದು. ದೇಶದ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಸಂವಿಧಾನವೇ ಮೂಲ ಎಂದು ಧಾರವಾಡ ಜಿಲ್ಲಾ ನ್ಯಾಯಾಲಯದ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಧಾರವಾಡ

ಭಾರತೀಯರಿಗೆ ಸಂವಿಧಾನ ಅಮೂಲ್ಯವಾದುದು. ದೇಶದ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಸಂವಿಧಾನವೇ ಮೂಲ ಎಂದು ಧಾರವಾಡ ಜಿಲ್ಲಾ ನ್ಯಾಯಾಲಯದ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಹೇಳಿದರು.

ಇಲ್ಲಿಯ ಕರ್ನಾಟಕ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ವಿಭಾಗದ ಫುಲೆ ಸಭಾಭವನದಲ್ಲಿ ಭಾನುವಾರ ಸಂವಿಧಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಹಾಗೂ ಸಂವಿಧಾನ ಪ್ರಸ್ತಾವನೆಯ ಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಮಾತನಾಡಿದರು.

ಯಾವದೇ ಜಾತಿ, ಧರ್ಮದಿಂದ ದೇಶ ಕಟ್ಟಲು ಸಾಧ್ಯವಿಲ್ಲ. ಸಂವಿಧಾನದಿಂದ ಮಾತ್ರ ದೇಶ ಕಟ್ಟಲು ಸಾಧ್ಯ. ಭಾರತ ಸಂವಿಧಾನವನ್ನು ಓದಿ ಅರ್ಥ ಮಾಡಿಕೊಂಡಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದಲಾವಣೆ ತರಹಬಹುದು. ಭಾರತ ದೇಶದಲ್ಲಿ ಪ್ರತಿಯೊಬ್ಬ ಪ್ರಜೆಗೂ ಒಂದೇ ಕಾನೂನು ವ್ಯವಸ್ಥೆಯಿದೆ. ಹೀಗಾಗಿ, ಜಗತ್ತಿನ ಶ್ರೇಷ್ಠ ಸಂವಿಧಾನದಲ್ಲಿ ಭಾರತದ ಸಂವಿಧಾನವೇ ಮೊದಲಿನ ಸಾಲಿನಲ್ಲಿದೆ. ಸಂವಿಧಾನವನ್ನು ಆಯಾ ಕಾಲ ಘಟ್ಟಕ್ಕೆ ಮಾತ್ರ ತಿದ್ದುಪಡಿ ಮಾಡಬಹುದೇ ವಿನಃ ತೆಗೆದುಹಾಕಲು ಸಾಧ್ಯವೇ ಇಲ್ಲ ಎಂದರು.

ಡಾ. ಬಿ.ಆರ್‌. ಅಂಬೇಡ್ಕರ್ ಕೇವಲ ದಲಿತ, ಶೋಷಿತರಿಗೆ ಮಾತ್ರ ಸಂವಿಧಾನವನ್ನು ರಚನೆ ಮಾಡಿಲ್ಲ. ದೇಶದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರೆಯುವಂತೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ್ದಾರೆ. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನವೆಂಬರ್ 26ನ್ನು ಮಹತ್ವದ ದಿನವನ್ನಾಗಿ ಆಚರಿಸಲಾಗುತ್ತಿದೆ. 1949ರ ನವೆಂಬರ್ 26ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಇದರ ಅಂಗವಾಗಿಯೇ ನಾವಿಂದು ಸಂವಿಧಾನ ದಿನವನ್ನಾಗಿ ಆಚರಣೆ ಮಾಡುತ್ತಿದ್ದೇವೆ ಎಂದು ಸಂವಿಧಾನದ ಮಹತ್ವ ತಿಳಿಸಿದರು.

ಕರ್ನಾಟಕ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ. ನಿಜಲಿಂಗಪ್ಪ ವೈ. ಮಟ್ಟಿಹಾಳ ಅಧ್ಯಕ್ಷತೆ ವಹಿಸಿದ್ದರು. ಕವಿವಿ ಹಣಕಾಸು ಅಧಿಕಾರಿ ಡಾ. ಸಿ. ಕೃಷ್ಣಮೂರ್ತಿ, ಆಹಾರ ಮತ್ತು ಸರಬರಾಜು ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಡಾ. ಸದಾಶಿವ ಮರ್ಜಿ ಹಾಗೂ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಇದ್ದರು.ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ವಿಭಾಗದ ಸಂಯೋಜಕ ಡಾ. ಸುಭಾಷಚಂದ್ರ ನಾಟೀಕ ಸ್ವಾಗತಿಸಿದರು. ಮಹೇಂದ್ರ ದೊಡ್ಡಮನಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ನ್ಯಾಯಾಲಯದ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಅವರು ಸಂವಿಧಾನ ಪೀಠಿಕೆಯನ್ನು ವಾಚನ ಮಾಡಿದರು.

ಸಂವಿಧಾನ ಪೀಠಿಕೆ ವಾಚನ

ಇಲ್ಲಿಯ ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭಾನುವಾರ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಹಾಗೂ ಸಂವಿಧಾನ ಪ್ರಸ್ತಾವನೆಯ ಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ನವೆಂಬರ್ 26ರ ಸಂವಿಧಾನ ದಿನ ಆಚರಿಸಿದರು. ಜಿಲ್ಲಾಧಿಕಾರಿಗಳು ಸಂವಿಧಾನ ಪಿಠೀಕೆಯನ್ನು ವಾಚನ ಮಾಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹಾಗೂ ಡಿಡಿಪಿಐ ಎಸ್.ಎಸ್. ಕೆಳದಿಮಠ, ಡಿಡಿಪಿಯು ಪಿ. ಸುರೇಶ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕರು ಸಣ್ಣನೇರ ಇದ್ದರು. ಹಾಗೆಯೇ, ಜಿಲ್ಲಾ ಪಂಚಾಯ್ತಿಯಲ್ಲಿ ಸಿಇಒ ಸ್ವರೂಪಾ .ಟಿ.ಕೆ. ಸಂವಿಧಾನ ದಿನಾಚರಣೆ ಆಚರಿಸಿದರು. ಜಿಪಂ ಪ್ರಧಾನ ಕಛೇರಿಯ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂವಿಧಾನದ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಭೋಧಿಸಿ ಸಂವಿಧಾನದ ಮಹತ್ವವನ್ನು ತಿಳಿಸಿದರು. ಇನ್ನು ಸರ್ಕಾರದ ನಿರ್ಧಾರದ ಸರ್ಕಾರಿ ಸಂಸ್ಥೆಗಳಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ