ಸರ್ವರಿಗೂ ರಕ್ಷಣೆ ನೀಡಿದ ಸಂವಿಧಾನ: ಅಪರ ಜಿಲ್ಲಾಧಿಕಾರಿ

KannadaprabhaNewsNetwork |  
Published : Mar 07, 2025, 12:49 AM IST
ಸಾಜಿದ್ ಮುಲ್ಲಾ ಉದ್ಘಾಟಿಸಿದರು  | Kannada Prabha

ಸಾರಾಂಶ

ಲಿಂಗ ತಾರತಮ್ಯ ಮತ್ತಿತರ ದೌರ್ಜನ್ಯಗಳಿಂದ ಪ್ರತಿಯೊಬ್ಬರಿಗೂ ರಕ್ಷಣೆ ದೊರೆತಿದೆ

ಕಾರವಾರ: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಡಾ.ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಜಾತಿ, ಧರ್ಮ, ಲಿಂಗ ತಾರತಮ್ಯ ಮತ್ತಿತರ ದೌರ್ಜನ್ಯಗಳಿಂದ ಪ್ರತಿಯೊಬ್ಬರಿಗೂ ರಕ್ಷಣೆ ದೊರೆತಿದೆ ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಯೋಜಿಸಲಾದ ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ನಾಗರಿಕ ಹಕ್ಕು ರಕ್ಷಣಾ ಕಾಯ್ದೆ 1955 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಹಾಗೂ ಯೋಜನೆಗಳ ಬಗ್ಗೆ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಡಾ. ಬಿ. ಆರ್ ಅಂಬೇಡ್ಕರ್ ರವರು ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ರಚಿಸಿದ ಸಂವಿಧಾನದಿಂದ ನಾವೆಲ್ಲರೂ ಸ್ವತಂತ್ರವಾಗಿ ಬದುಕಲು ಸಾಧ್ಯವಾಗಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಪ.ಜಾತಿ, ಪಂಗಡದವರಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಅನೇಕ ಯೋಜನೆಗಳ ಮೂಲಕ ಸವಲತ್ತುಗಳನ್ನು ಕಲ್ಪಿಸಲಾಗಿದೆ ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ ಎಂದರು.ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಗಾಗಿ ಸಮಾಜ ಕಲ್ಯಾಣ ಇಲಾಖೆವತಿಯಿಂದ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ, ವಸತಿ ಶಾಲೆ, ಊಟ ಮತ್ತು ವಿದ್ಯಾಭ್ಯಾಸಕ್ಕೆ ಅಗತ್ಯ ಪೂರಕ ಪರಿಕರಗಳು ಕಲ್ಪಿಸಲಾಗಿದೆ. ಈ ಎಲ್ಲಾ ಯೋಜನೆಗಳು ವಿದ್ಯಾರ್ಥಿಗಳಿಗೆ ಪರಿಪೂರ್ಣ ವ್ಯಕ್ತಿತ್ವದ ಜೊತೆಯಲ್ಲಿ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಲಿವೆ. ಸಂವಿಧಾನದ ಒಳ ಆಶಯಗಳನ್ನು ಮುಂದುವರಿಸಿಕೊಂಡು ದೇಶದ ಸುಭದ್ರ ಬುನಾದಿ ನಿರ್ಮಿಸಲು ನಾವೆಲ್ಲರೂ ಶ್ರಮಿಸೋಣ ಎಂದರು.

ಶಿರಸಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೇಶವ ಮೂರ್ತಿ ಇಮ್ಮಡಿ, ಪರಿಶಿಷ್ಟ ಜಾತಿ, ಪಂಗಡ ವರ್ಗದ ಜನಾಂಗದ ಸರ್ವಾಂಗೀಣ ಅಭಿವೃದ್ಧಿಗೆ, ಜನನದಿಂದ ಮರಣದವರಿಗೆ ಅನೇಕ ನಿಗಮಗಳ ಮೂಲಕ ಅರ್ಥಿಕ, ಸಾಮಾಜಿಕ, ಶೈಕ್ಷಣಿಕ, ಮೂಲಭೂತ ಅಭಿವೃದ್ಧಿಗೆ ಸಮಾಜ ಕಲ್ಯಾಣ ಇಲಾಖೆಯು ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಪೊಲೀಸ್ ಅಧಿಕಾರಿ ಪ್ರಕಾಶ ದೇವಾಡಿಗ, ದೌರ್ಜನ್ಯ ಕಾಯ್ದೆ ಬಗ್ಗೆ, ಹಳಿಯಾಳದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ ಪವಾರ್, ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಹಾಗೂ ಪ್ರೊತ್ಸಾಹಧನಗಳ ಕುರಿತು ಹಾಗೂ ಅನೀಲ್ ಬಿರದಾರ ಸ್ವಯಂ ಉದ್ಯೋಗದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ವೈ.ಕೆ. ಉಮೇಶ್, ಜಿಲ್ಲಾ ಪಂಚಾಯತ್ಉಪಕಾರ್ಯದರ್ಶಿ (ಆಡಳಿತ) ನಾಗೇಶ್ ರಾಯ್ಕರ್ , ಸಮಾಜ ಕಲ್ಯಾಣ ಇಲಾಖೆಯ ರಮೇಶ್ ಎನ್ ನಾಯ್ಕ ಮತ್ತಿತರರು ಇದ್ದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ