ಜಿಲ್ಲಾ ಬಿಜೆಪಿಯಿಂದ ಸಂವಿಧಾನ ಸನ್ಮಾನ್ ಅಭಿಯಾನ

KannadaprabhaNewsNetwork |  
Published : Nov 28, 2024, 12:34 AM IST
ಪೋಟೋ: 27ಎಸ್‌ಎಂಜಿಕೆಪಿ03ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂವಿಧಾನ ಸನ್ಮಾನ್ ಅಭಿಯಾನದ ರಾಜ್ಯ ಸಂಚಾಲಕ ಎಸ್.ದತ್ತಾತ್ರಿ ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗ: ಜಿಲ್ಲಾ ಬಿಜೆಪಿಯಿಂದ ಜಿಲ್ಲಾದ್ಯಂತ ನ.26ರಿಂದ ಜ.26ರವರೆಗೆ ಸಂವಿಧಾನ ಸನ್ಮಾನ್ ಅಭಿಯಾನ ಆಯೋ ಜಿಸಲಾಗಿದೆ ಎಂದು ಅಭಿಯಾನದ ರಾಜ್ಯ ಸಂಚಾಲಕ ಎಸ್.ದತ್ತಾತ್ರಿ ಹೇಳಿದರು.

ಶಿವಮೊಗ್ಗ: ಜಿಲ್ಲಾ ಬಿಜೆಪಿಯಿಂದ ಜಿಲ್ಲಾದ್ಯಂತ ನ.26ರಿಂದ ಜ.26ರವರೆಗೆ ಸಂವಿಧಾನ ಸನ್ಮಾನ್ ಅಭಿಯಾನ ಆಯೋ ಜಿಸಲಾಗಿದೆ ಎಂದು ಅಭಿಯಾನದ ರಾಜ್ಯ ಸಂಚಾಲಕ ಎಸ್.ದತ್ತಾತ್ರಿ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಬಿಜೆಪಿಯ ಮಾರ್ಗದರ್ಶನದಲ್ಲಿ ಇಡೀ ರಾಜ್ಯದಾದ್ಯಂತ ಜಿಲ್ಲಾ ಕೇಂದ ಮತ್ತು ತಾಲೂಕು ಕೇಂದ್ರಗಳಲ್ಲಿ ಸಂವಿಧಾನ ಸನ್ಮಾನ್ ಅಭಿಯಾನವನ್ನು ಆಯೋಜಿಸಲಾಗಿದೆ. ಇದರ ಅಂಗವಾಗಿ ಜಿಲ್ಲಾ ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ನಂತರ ತಾಲೂಕು ಕೇಂದ್ರಗಳಲ್ಲಿಯೂ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಕುರಿತಂತೆ ರಸಪಶ್ನೆ, ಭಾಷಣ, ಚರ್ಚಾ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು ಎಂದರು.ಈ ಎರಡು ತಿಂಗಳು ಕಾಲ ನಡೆಯುವ ಈ ವಿಶೇಷ ಕಾರ್ಯಕ್ರಮದಲ್ಲಿ ಚಿಂತಕರು, ಸ್ಥಳೀಯ ಮಟ್ಟದ ಗಣ್ಯರು, ಸಹಕಾರ ಸಂಘಗಳು, ಸಂಘ ಸಂಸ್ಥೆಗಳು ನಮ್ಮ ಜೊತೆ ಕೈ ಜೋಡಿಸಲಿವೆ. ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು ಎಂಬ ಧ್ಯೇಯ ವಾಕ್ಯದ ಅಡಿಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಭಾರತದ ಸಂವಿಧಾನ ಜಗತ್ತಿನಲ್ಲಿಯೇ ವಿಶೇಷವಾಗಿದ್ದು, ಅಂಬೇಡ್ಕರ್ ಇದರ ರುವಾರಿಯಾಗಿದ್ದಾರೆ. ಅಂಬೇಡ್ಕರ್‌ಗೆ ಗೌರವ ಕೊಡುವಂತಹ ಕೆಲಸವನ್ನು ಬಿಜೆಪಿ ಮಾಡುತ್ತಲೆ ಬಂದಿದೆ. ಆದ್ದರಿಂದ ಕಾಂಗ್ರೆಸ್‌ನವರು ಬಿಜೆಪಿ ಸಂವಿಧಾನ ತಿದ್ದುಪಡಿ ಮಾಡುತ್ತದೆ ಎಂದು ವಿಷಬೀಜ ಬಿತ್ತುವುದನ್ನು ಕೂಡಲೇ ನಿಲ್ಲಿಸಬೇಕೆಂದು ಈ ಅಭಿಯಾನದ ಮೂಲಕ ಸಾರ್ವಜನಿಕರಿಗೆ ತಿಳಿಸುತ್ತೇವೆ ಎಂದರು.ಸುದ್ದಿಗೊಷ್ಠಿಯಲ್ಲಿ ಜಿಲ್ಲಾ ಸಂಚಾಲಕ ಮಾಲತೇಶ್, ಪಮುಖರಾದ ಶಿವರಾಜ್, ವಿನ್ಸೆಂಟ್ ರೊಡ್ರಿಗಸ್, ಮಂಗಳ, ಮೂರ್ತಿ, ಅಣ್ಣಪ್ಪ, ರಾಮು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ