ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸಿದ ಸಂವಿಧಾನ: ಶಾಸಕ ಸಿ. ಪುಟ್ಟರಂಗಶೆಟ್ಟಿ

KannadaprabhaNewsNetwork |  
Published : Nov 27, 2024, 01:00 AM IST
ದೇಶದ ಪ್ರತಿ ನಾಗರೀಕರಿಗೂ ಸಮಾನ ಅವಕಾಶ ಕಲ್ಪಿಸಿದ ಭಾರತದ ಸಂವಿಧಾನ’- ಸಿ. ಪುಟ್ಟರಂಗಶೆಟ್ಟಿ | Kannada Prabha

ಸಾರಾಂಶ

ಅಂಬೇಡ್ಕರ್ ಅವರು ಸಂವಿಧಾನ ಮೂಲಕ ದೇಶದ ಪ್ರತಿ ನಾಗರಿಕರು ಬದುಕುವ ಸಮಾನ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಶಾಸಕರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿಕೊಟ್ಟಿರುವ ಸಂವಿಧಾನದ ಮಹತ್ವವನ್ನು ದೇಶ ಪ್ರತಿಯೊಬ್ಬ ಪ್ರಜೆಯೂ ತಿಳಿದುಕೊಳ್ಳಬೇಕು ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು.ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಂಗಳವಾರ ನಡೆದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದು, ಸಂವಿಧಾನದ ಕರಡು ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಂಬೇಡ್ಕರ್ ಅವರು ಸಂವಿಧಾನ ಮೂಲಕ ದೇಶದ ಪ್ರತಿ ನಾಗರಿಕರು ಬದುಕುವ ಸಮಾನ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದರು.ಸಂವಿಧಾನ ಪೀಠಿಕೆ ಪ್ರತಿಜ್ಞಾವಿಧಿ ಬೋಧಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಮಾತನಾಡಿ, ಅವರು ಅಂಬೇಡ್ಕರ್ ಅವರು ಭಾರತದ ಅಭಿವೃದ್ಧಿಗೆ ಪೂರಕವಾದ ಸುಭದ್ರ ಸಂವಿಧಾನ ರಚನೆಮಾಡಿ, ದೇಶಕ್ಕೆ ಅರ್ಪಣೆ ಮಾಡಿದ್ದಾರೆ. ಸಂವಿಧಾನದಲ್ಲಿ ಅಡಕವಾಗಿರುವ ವಿಧಿಗಳು ಸೇರಿದಂತೆ ಪ್ರಮುಖ ಅಂಶಗಳ ಮಹತ್ವವನ್ನು ನಾಗರಿಕರು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಕೆಪಿಸಿಸಿ ಸದಸ್ಯ ಸೈಯದ್ ರಫಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಮಹದೇವ್, ನಗರಸಭೆ ಸದಸ್ಯರಾದ ಚಿನ್ನಮ್ಮ, ಕಲಾವತಿ, ಎಪಿಎಂಸಿ ಅಧ್ಯಕ್ಷ ಸೋಮೇಶ್ ಜಿಪಂ ಮಾಜಿ ಸದಸ್ಯರಾದ ರಮೇಶ್, ಕಾವೇರಿ ಶಿವಕುಮಾರ್, ತಾಪಂ ಮಾಜಿ ಸದಸ್ಯರಾದ ಪಿ,ಕುಮಾರನಾಯಕ್, ಪುಟ್ಟಸ್ವಾಮಿ, ನಸ್ರುಲ್ಲಾಖಾನ್, ಕರಿನಂಜನಪುರ ಸ್ವಾಮಿ, ಅಯೂಬ್ ಖಾನ್, ನಗರಸಭೆ ಮಾಜಿ ಸದಸ್ಯ ಪುಟ್ಟಸ್ವಾಮಿ, ಚಂಗುಮಣಿ, ಗ್ರಾಪಂ ಸದಸ್ಯರಾದ ಗೀತಾ ಸಿದ್ದರಾಜು, ಶೇಖರಪ್ಪ, ಅಪ್ಸರ್ ಅಹಮದ್, ಅಬ್ಬಾಸ್, ಎಸ್ಸಿವಿಭಾಗದ ಅಧ್ಯಕ್ಷ ಸೋಮಣ್ಣ, ಮರಿಯಾಲಹುಂಡಿ ಕುಮಾರ್, ಮಹದೇವಸ್ವಾಮಿ, ಅರುಣ್‌ಕುಮಾರ್, ಪ್ರಕಾಶ್, ಮೋಹನ್‌ನಗು, ಶಿವಕುಮಾರ್‌ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.-----------

26ಸಿಎಚ್ಎನ್‌13

ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂವಿಧಾನ ಸಮರ್ಪಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಬೋಧಿಸಲಾಯಿತು.

----

PREV

Recommended Stories

ಮರಳು ದಂಧೆ ತಡೆದ ಎಎಸ್‌ಐಗೆ ಹಲ್ಲೆ: ರಾಜೂಗೌಡ
ನಟ ದರ್ಶನ್‌ ಸೆಲ್‌ ಪರಿಶೀಲನೆ ನಡೆಸಿದ ಕಾನೂನು ಪ್ರಾಧಿಕಾರ