ಮಂಗಳೂರು: ತಣ್ಣೀರುಬಾವಿ ಸೇತುವೆ ನಿರ್ಮಾಣ ಕಾಮಗಾರಿ ವೇಳೆ ಶುಕ್ರವಾರ ಬೆಳಗ್ಗೆ ಭಾರಿ ಅವಘಡ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಬೆಳಗ್ಗೆ ಸುಮಾರು 9.20ರ ವೇಳೆಗೆ ಈ ಘಟನೆ ಸಂಭವಿಸಿದೆ. ಎರಡು ಕ್ರೇನ್‌ಗಳ ಸಹಾಯದಿಂದ ಸೇತುವೆಯ ಫ್ಲ್ಯಾಬ್ ಅಳವಡಿಸುವ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಅವಘಡ ನಡೆದಿದೆ.ಸೇತುವೆಯ ಸ್ಲ್ಯಾಬ್ ಅಳವಡಿಸುವ ಕಾರ್ಯ ನಡೆಯುತ್ತಿದ್ದಾಗ ಎರಡು ಕ್ರೇನ್‌ಗಳ ಪೈಕಿ ಒಂದು ಕ್ರೇನ್ ಏಕಾಏಕಿ ನೀರಿಗೆ ಉರುಳಿ ಬಿದ್ದಿದೆ. ಇದೇ ವೇಳೆ ಅಳವಡಿಸಲಾಗುತ್ತಿದ್ದ ಸ್ಲ್ಯಾಬ್ ಬೋಟ್ ಮೇಲೆ ಬಿದ್ದ ಪರಿಣಾಮ ಬೋಟ್ ಕೂಡ ನೀರಿನಲ್ಲಿ ಮುಳುಗಡೆಯಾಗಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಗಳೂರು ನಗರದಿಂದ ಕೇವಲ ಒಂದೂವರೆ ಕಿ.ಮೀ. ದೂರದಲ್ಲಿರುವ ತಣ್ಣೀರುಬಾವಿ ಬೀಚ್‌ಗೆ ರಸ್ತೆ ಮೂಲಕ ತೆರಳಲು ಸುಮಾರು 15ರಿಂದ 20 ಕಿ.ಮೀ. ಸುತ್ತುವರಿದು ಪ್ರಯಾಣಿಸಬೇಕಾಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸೇತುವೆ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ.
ಸೇತುವೆ ಪೂರ್ಣಗೊಂಡರೆ ಮಂಗಳೂರು ನಗರದಿಂದ ತಣ್ಣೀರುಬಾವಿ ಬೀಚ್‌ಗೆ ನೇರ ಸಂಪರ್ಕ ಕಲ್ಪಿಸುವ ನಿರೀಕ್ಷೆಯಿದೆ. ಆದರೆ ಕಾಮಗಾರಿ ವೇಳೆ ಸಂಭವಿಸಿದ ಈ ಅವಘಡ ಆತಂಕ ಮೂಡಿಸಿದೆ.