ಹೊಸಕೋಟೆ: ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಸ್ಲಂ ಬೋರ್ಡ್ ವತಿಯಿಂದ 2000 ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಮಾತಂಗ ಫೌಂಡೇಷನ್ ಉಪಾಧ್ಯಕ್ಷ ಡಾ.ಎಚ್.ಎಂ.ಸುಬ್ಬರಾಜು ಮಾತನಾಡಿ, ಶಾಸಕ ಶರತ್ ಬಚ್ಚೇಗೌಡರು ವೈಯಕ್ತಿಕ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಅಳವಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಗ್ರಾಮದಲ್ಲಿ ಅಗತ್ಯ ಸಿಸಿ ರಸ್ತೆ ನಿರ್ಮಾಣ ಹಾಗೂ ಹೈಮಾಸ್ಟ್ ದೀಪ ಅಳವಡಿಸಲಾಗುವುದು ಎಂದರು.
ಬಮೂಲ್ ನಿರ್ದೇಶಕ ಎಲ್‌ಎನ್‌ಟಿ ಮಂಜುನಾಥ್, ನಗರಸಭೆ ಸದಸ್ಯ ಕೇಶವಮೂರ್ತಿ, ಮುಖಂಡರಾದ ಗುಟ್ಟಳ್ಳಿ ನಾಗರಾಜ್, ಗೋಪಿ, ಬಚ್ಚಣ್ಣ, ವಾಗಟ ನರೇಂದ್ರಪ್ಪ, ದಂಡುಪಾಳ್ಯ ಗೋವಿಂದಪ್ಪ, ಅರುಣ್, ವೆಂಕಟೇಶ್, ಮೂರ್ತಿ ಹಾಜರಿದ್ದರು.ಫೋಟೋ: 27 ಹೆಚ್‌ಎಸ್‌ಕೆ 3ಹೊಸಕೋಟೆಯ ದಂಡುಪಾಳ್ಯ ವಾರ್ಡ್ನಲ್ಲಿ ಶಾಸಕ ಶರತ್ ಬಚ್ಚೇಗೌಡ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಗ್ರಾಮಸ್ಥರಿಗೆ ನೀರಿನ ಕ್ಯಾನ್‌ಗಳನ್ನು ವಿತರಿಸಿದರು.