ಹುಬ್ಬಳ್ಳಿ:
ಇಲ್ಲಿನ ಗೋಕುಲ ಗಾರ್ಡನ್‌ನಲ್ಲಿ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾಡಳಿತ ಶನಿವಾರ ಆಯೋಜಿಸಿದ್ದ ಜಿಲ್ಲೆಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್ಸ್ ಕಿಟ್ ವಿತರಣೆ, ಧನ ಸಹಾಯದ ಚೆಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಮಿಕರ ಮನೆ ನಿರ್ಮಾಣಕ್ಕೆ ಭೂಮಿ ಗುರುತಿಸಲಾಗಿದೆ. 7 ಎಕರೆ ಪ್ರದೇಶದಲ್ಲಿ 2500ಕ್ಕೂ ಹೆಚ್ಚು ಮನೆ ನಿರ್ಮಿಸಿ, ಕಟ್ಟಡ ಕಾರ್ಮಿಕರಿಗೆ ಹಸ್ತಾಂತರ ಮಾಡಲಾಗುವುದು. ಮೊದಲಿಗೆ ಹುಬ್ಬಳ್ಳಿಯಲ್ಲೇ ಮಾಡಲಾಗುವುದು ನಂತರ ಬೇರೆ ಜಿಲ್ಲೆಗಳಲ್ಲೂ ಮಾಡಲಾಗುವುದು ಎಂದರು.ದೇಶದಲ್ಲಿ ಶೇ. 92ರಷ್ಟು ಅಸಂಘಟಿತ ಕಾರ್ಮಿಕರಿದ್ದಾರೆ. ರಾಜ್ಯದಲ್ಲಿ 82ರಿಂದ 85ರಷ್ಟು ಅಸಂಘಟಿತ ಕಾರ್ಮಿಕರಿದ್ದಾರೆ. ಅದರಲ್ಲಿ 25 ವರ್ಗಗಳ ಅಸಂಘಟಿತ ವಲಯ ಗುರುತಿಸಲಾಗಿದೆ. ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲಾಗುತ್ತಿದೆ. 35 ಲಕ್ಷ ಅಸಂಘಟಿತ ಕಾರ್ಮಿಕರನ್ನು ಗುರುತಿಸಲಾಗಿದೆ. ಗಿಗ್ ಕಾರ್ಮಿಕರಿಗೆ ಸರ್ಕಾರದ ಸವಲತ್ತು ಒದಗಿಸಲಾಗುವುದು. ಕಟ್ಟಡ ನಿರ್ಮಾಣ ಕಾರ್ಮಿಕರ ಮಂಡಳಿ ₹10 ಸಾವಿರ ಕೋಟಿ ತೆರಿಗೆ ಮೂಲಕ ಸಂಗ್ರಹಿಸುತ್ತಿದೆ. ತೆರಿಗೆ ಸಂಗ್ರಹವನ್ನು ಹೆಚ್ಚಳ ಮಾಡಲು ಕ್ರಮ ವಹಿಸಲಾಗುತ್ತದೆ ಎಂದರು.
ರಾಜ್ಯದಲ್ಲಿರುವ 56 ಲಕ್ಷ ಕಾರ್ಮಿಕ ಕಾರ್ಡ್‌ಗಳಲ್ಲಿ 20 ಲಕ್ಷ ನಕಲಿ ಕಾರ್ಡ್‌ಗಳಿವೆ. ಹೀಗಾಗಿ 20 ಲಕ್ಷ ಕಾರ್ಡ್ ರದ್ದುಪಡಿಸಲಾಗಿದೆ. ಒಂದು ವೇಳೆ ಅರ್ಹರ ಕಾರ್ಡ್ ರದ್ದಾಗಿದ್ದರೆ ಮರಳಿ ಕಾರ್ಡ್ ನೀಡಲಾಗುವುದು. 43 ವಲಯಗಳಲ್ಲಿ ಕಾರ್ಮಿಕರ ವಾಹನ ತೆರಳಿ ಪರಿಶೀಲನೆ ನಡೆಸಿ, ಅರ್ಹರಿಗೆ ಕಾರ್ಡ್ ವಿತರಿಸಲಾಗುವುದು. ಕಾರ್ಮಿಕರನ್ನು ಜಿಐಎಸ್ ಮೂಲಕ ಮ್ಯಾಪಿಂಗ್ ಮಾಡಲಾಗುವುದು ಎಂದು ಲಾಡ್ ತಿಳಿಸಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಜಂಟಿ ನಿರ್ದೇಶಕ ಸಂಗಪ್ಪ ಉಪಾಸೆ ಪ್ರಾಸ್ತಾವಿಕ ಮಾತನಾಡಿದರು.
ಯಾವ ಥರ್ಟಿ ಬಗ್ಗೆ ಮಾತಾಡಕತ್ತಿ?:
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ್ದೇವೆ. ಏನಪ್ಪಾ ನಿನ್ನ ಹೆಂಡತಿಗೆ ಬಸ್ ಫ್ರೀ ಇದೆಯಲ್ವಾ?. ನೀವು ಏನಾದರೂ ತೊಂದರೆ ಕೊಟ್ಟರೆ, ನಿಮ್ಮ ಹೆಂಡತಿ ಬಸ್ ಹತ್ತಿ ತವರು ಮನೆಗೆ ಹೋಗಿ ಬಿಡುತ್ತಾಳೆ ಹುಷಾರು?. ನೀನು ನಡೆದುಕೊಂಡು ಹೋಗುವ ಪರಿಸ್ಥಿತಿ ಬರುತ್ತದೆ ನೋಡು ಎಂದು ನಗೆಚಟಾಕಿ ಸಿಡಿಸಿದರು. ಈ ವೇಳೆ ಗಂಡಸರಿಗೂ ಉಚಿತ ಬಸ್ ಪ್ರಯಾಣ ಕೊಡುವಂತೆ ಕಾರ್ಯಕ್ರಮದಲ್ಲಿದ್ದ ಕಾರ್ಮಿಕರು ಕೇಳುತ್ತಿದ್ದಂತೆ. ಈಗ ಅದೆಲ್ಲ ಬೇಡ ಬರುವ ವರ್ಷ ಪುರುಷರಿಗೂ ಉಚಿತ ಪ್ರಯಾಣದ ವಿಚಾರ ಮಾಡೋಣ ಸುಮ್ನಿರು ಎಂದರು.