ಬೆಂಗಳೂರು ಗ್ರಾ. ಜಿಲ್ಲೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಕೋಟಿ ವೆಚ್ಚದಲ್ಲಿ 5 ಚೆಕ್ ಡ್ಯಾಂಗಳ ನಿರ್ಮಾಣ

KannadaprabhaNewsNetwork |  
Published : Dec 03, 2024, 12:33 AM ISTUpdated : Dec 03, 2024, 01:10 PM IST
ಬೆಂ.ಗ್ರಾ ಜಿಲ್ಲೆಯಲ್ಲಿ 2 ಕೋಟಿ ವೆಚ್ಚದ 5 ಚೆಕ್‌ ಡ್ಯಾಂಗಳ ನಿರ್ಮಾಣಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ಗುದ್ದಲಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಳ್ಳಿಗಳಲ್ಲಿ ನೀರಿನ ಉಳಿತಾಯ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ಸಲುವಾಗಿ 5 ಚೆಕ್ ಡ್ಯಾಂಗಳ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸೋಮವಾರ ಕೆ.ಎಚ್.ಮುನಿಯಪ್ಪ ಗುದ್ದಲಿಪೂಜೆ ನೆರವೇರಿಸಿದರು.

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಳ್ಳಿಗಳಲ್ಲಿ ನೀರಿನ ಉಳಿತಾಯ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ಸಲುವಾಗಿ 5 ಚೆಕ್ ಡ್ಯಾಂಗಳ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸೋಮವಾರ ಕೆ.ಎಚ್.ಮುನಿಯಪ್ಪ ಗುದ್ದಲಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಸಣ್ಣ ನೀರಾವರಿ ಇಲಾಖೆ ವತಿಯಿಂದ ಮಾಳಿಗೆಹಳ್ಳಿ - ಅತ್ತಿಬೆಲೆ ಬಳಿ ನಿರ್ಮಿಸಲಾಗುತ್ತಿರುವ ಚೆಕ್ ಡ್ಯಾಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಅವರು, ಒಟ್ಟು 5 ಚೆಕ್ ಡ್ಯಾಂಗಳನ್ನು ಮಾಳಿಗೆಹಳ್ಳಿ, ಮಾಯಸಂದ್ರ, ವೆಂಕಟನಹಳ್ಳಿ, ಬೆಟ್ಟಕೋಟೆ, ವಿಜಯಪುರ ಗ್ರಾಮಗಳ ಬಳಿ ನಿರ್ಮಾಣ ಮಾಡಲಾಗುತ್ತಿದೆ. ಸುತ್ತ-ಮುತ್ತಲಿನ ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

₹2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಚೆಕ್ ಡ್ಯಾಂಗಳ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳುವುದರೊಂದಿಗೆ ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಬಿದಲೂರು ಗ್ರಾಪಂ ಅಧ್ಯಕ್ಷ ನಾಗರಾಜ್, ಮಾಜಿ ಅಧ್ಯಕ್ಷ ಮುನಿರಾಜು, ಆವತಿ ಗ್ರಾಪಂ ಅಧ್ಯಕ್ಷೆ ಮುನಿರತ್ನಮ್ಮ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

2ಕೆಡಿಬಿಪಿ2- ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2 ಕೋಟಿ ವೆಚ್ಚದ 5 ಚೆಕ್‌ ಡ್ಯಾಂಗಳ ನಿರ್ಮಾಣಕ್ಕೆ ಸಚಿವ ಕೆ.ಎಚ್. ಮುನಿಯಪ್ಪ ಗುದ್ದಲಿಪೂಜೆ ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ