ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್. ಎಂ.ಮಂಜುನಾಥ ಗೌಡ, ಶಾಸಕ ಹಾಗೂ ಬ್ಯಾಂಕಿನ ನಿರ್ದೇಶಕರೂ ಆದ ಗೋಪಾಲಕೃಷ್ಣ ಬೇಳೂರು, ಬ್ಯಾಂಕಿನ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ, ನಿರ್ದೇಶಕರಾದ ಎಂ. ಶ್ರೀಕಾಂತ್, ಸಿ.ಹನುಮಂತು, ಕೆ.ಪಿ.ರುದ್ರೇಗೌಡ, ಬಸವರಾಜ್, ದುಗ್ಗಪ್ಪ ಗೌಡ, ಎನ್.ಜಿ. ಸುಧೀರ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಆ ಬಳಿಕ ನಡೆದ ಸರಳ ಸಮಾರಂಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್. ಎಂ.ಮಂಜುನಾಥ ಗೌಡ ಮಾತನಾಡಿ, ಬರುವ 2028ಕ್ಕೆ ಡಿಸಿಸಿ ಬ್ಯಾಂಕ್ ಅಮೃತ ಮಹೋತ್ಸವ ಆಚರಿಸುತ್ತಿದ್ದು, ಅದರ ಸವಿನೆನಪಿಗೆ ಅಮೃತ ಭವನ ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 5 ಕೋಟಿ ರು. ವೆಚ್ವದ ಈ ಭವನ ಸಂಪೂರ್ಣವಾಗಿ ಕಾರ್ಪೊರೇಟ್ ಮಾದರಿಯಲ್ಲಿ ನಿರ್ಮಾಣವಾಗಲಿದೆ. ಅಮೃತ ಮಹೋತ್ಸವದ ಹೊತ್ತಿಗೆ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆ ಆಗಬೇಕೆನ್ನುವ ಗುರಿ ಹೊಂದಲಾಗಿದೆ ಎಂದರು.ಡಿಸಿಸಿ ಬ್ಯಾಂಕ್‌ಗೆ ಪ್ರಸ್ತುತ ಸುಮಾರು 3.5 ಲಕ್ಷ ಗ್ರಾಹಕರಿದ್ದು, ಮುಂದಿನ ದಿನಗಳಲ್ಲಿ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸುವುದರ ಜೊತೆಗೆ ಹೊಸ ಶಾಖೆಗಳನ್ನು ತೆರೆಯುವ ಯೋಜನೆ ರೂಪಿಸಲಾಗಿದೆ. ಅಮೃತ ಮಹೋತ್ಸವದ ವೇಳೆಗೆ ಬ್ಯಾಂಕ್‌ನ ಶಾಖೆಗಳ ಸಂಖ್ಯೆಯನ್ನು 50ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಆ ನಿಟ್ಟಿನಲ್ಲಿ ಈಗಾಗಲೇ ಹೊಸ ಶಾಖೆಗಳನ್ನು ಆರಂಭಿಸುವ ಕಾರ್ಯ ನಡೆದಿದೆ ಎಂದು ಹೇಳಿದರು.
ಸಹಕಾರ ಕ್ಷೇತ್ರ ತಮಗೆ ಹೊಸದಾಗಿದ್ದರೂ, ಡಿಸಿಸಿ ಬ್ಯಾಂಕ್‌ನೊಂದಿಗೆ ಮಂಜುನಾಥ್ ಗೌಡ ಅವರು ಈ ಕ್ಷೇತ್ರದಲ್ಲಿ ಸುಮಾರು ನಾಲ್ಕು ದಶಕ ಗಳ ಅನುಭವ ಹೊಂದಿದ್ದಾರೆ. ಬ್ಯಾಂಕ್ ಇದೇ ರೀತಿ ನಿರಂತರ ಚಟುವಟಿಕೆಯಿಂದ ಕಾರ್ಯನಿರ್ವ ಹಿಸಿ, ಶೀಘ್ರದ ಅಮೃತ ಭವನದ ಉದ್ಘಾಟನೆ ನಡೆಯುವಂತಾಗಲಿ ಎಂದು ಆಶಿಸಿದರು.
------------------
ಸಹಕಾರಿ ಕ್ಷೇತ್ರವನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಮತ್ತಷ್ಟು ಬಲ ಪಡಿಸುವ ಉದ್ದೇಶ ಹೊಂದಲಾಗಿದೆ. ರೈತರಿಗೆ ಫೋನ್‌ಪೇ ಸೇರಿದಂತೆ ಆಧುನಿಕ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ, ಕೃಷಿಯೇತರ ವ್ಯವಹಾರ ನಡೆಸುವವರಿಗೂ ಅಗತ್ಯ ಬ್ಯಾಂಕಿಂಗ್ ಸೇವೆಗಳನ್ನು ತಲುಪಿಸಲು ಕ್ರಮ ಕೈಗೊಳ್ಳಲಾಗುವುದು. ಬ್ಯಾಂಕಿಂಗ್ ಸೌಲಭ್ಯವಿಲ್ಲದ ಗ್ರಾಮಗಳಿಗೂ ಡಿಸಿಸಿ ಬ್ಯಾಂಕ್ ಸೇವೆ ತಲುಪಿಸುವುದು ಪ್ರಮುಖ ಗುರಿಯಾಗಿದೆ.
-------------------
ಶಿವಮೊಗ್ಗ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ (ಡಿಸಿಸಿ ಬ್ಯಾಂಕ್) ಅಮೃತ ಭವನದ ನಿರ್ಮಾಣಕ್ಕೆ ಶುಕ್ರವಾರ ಬ್ಯಾಂಕಿನ ಕೇಂದ್ರ ಕಚೇರಿ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಯಿತು.