ಗಣ್ಯರ ಅನುಕೂಲಕ್ಕಾಗಿ ನೂತನ ಪ್ರವಾಸಿ ಮಂದಿರ ನಿರ್ಮಾಣ: ಕೆ.ಎಂ.ಉದಯ್

KannadaprabhaNewsNetwork |  
Published : Oct 23, 2026, 01:30 AM IST
22ಕೆಎಂಎನ್ ಡಿ22 | Kannada Prabha

ಸಾರಾಂಶ

ಬೆಂಗಳೂರಿನಿಂದ ಮೈಸೂರು, ಮಳವಳ್ಳಿ ಸೇರಿದಂತೆ ಇತರ ಪ್ರದೇಶಗಳಿಗೆ ರಾಜ್ಯಪಾಲರು, ಮುಖ್ಯಮಂತ್ರಿ, ಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಪ್ರಯಾಣಿಸುವಾಗ ನಗರದ ಮೂಲಕವೇ ಸಂಚರಿಸುತ್ತಾರೆ. ಕೆಲವೊಮ್ಮೆ ಪ್ರವಾಸಿ ಮಂದಿರದಲ್ಲಿ ಸ್ವಲ್ಪ ಹೊತ್ತು ವಿಶ್ರಾಂತಿಗಾಗಿ ಪಡೆದು ತೆರಳುತ್ತಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ನಗರದ ಪ್ರವಾಸಿ ಮಂದಿರವನ್ನು 10 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಕ್ರಮ ವಹಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದ ಆವರಣದಲ್ಲಿ 3 ಕೋಟಿ ರು. ವೆಚ್ಚದಲ್ಲಿ ಸರ್ಕ್ಯೂಟ್ ಹೌಸ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಮೊದಲ ಹಂತವಾಗಿ ಸರ್ಕಾರದಿಂದ 3 ಕೋಟಿ ಅನುದಾನ ಬಿಡುಗಡೆಯಾಗಿದೆ. ಇನ್ನುಳಿದ ಅಭಿವೃದ್ಧಿ ಕಾಮಗಾರಿಗೆ 7 ಕೋಟಿ ರು.ಗಳ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದರು.

ಬೆಂಗಳೂರಿನಿಂದ ಮೈಸೂರು, ಮಳವಳ್ಳಿ ಸೇರಿದಂತೆ ಇತರ ಪ್ರದೇಶಗಳಿಗೆ ರಾಜ್ಯಪಾಲರು, ಮುಖ್ಯಮಂತ್ರಿ, ಮಂತ್ರಿಗಳು

ಸೇರಿದಂತೆ ಹಲವು ಗಣ್ಯರು ಪ್ರಯಾಣಿಸುವಾಗ ನಗರದ ಮೂಲಕವೇ ಸಂಚರಿಸುತ್ತಾರೆ. ಕೆಲವೊಮ್ಮೆ ಪ್ರವಾಸಿ ಮಂದಿರದಲ್ಲಿ ಸ್ವಲ್ಪ ಹೊತ್ತು ವಿಶ್ರಾಂತಿಗಾಗಿ ಪಡೆದು ತೆರಳುತ್ತಾರೆ. ಹೀಗಾಗಿ ಗಣ್ಯರಿಗೆ ಅನುಕೂಲವಾಗಲು ಲೋಕೋಪಯೋಗಿ ಇಲಾಖೆಯಿಂದ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಮದ್ದೂರು ನಗರವನ್ನು ಸ್ವಚ್ಛ, ಸುಂದರ ತಾಣವಾಗಿ ರೂಪಿಸಲು ಈಗಾಗಲೇ ತಾಪಂ ಕಚೇರಿ ನೂತನ ಕಟ್ಟಡ, ತಾಪಂ ವಾಣಿಜ್ಯ ಮಳಿಗೆಗಳು, ನೀರಾವರಿ ಇಲಾಖೆ ಕಚೇರಿ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಕೋಟ್ಯಂತರ ರು. ವೆಚ್ಚದಲ್ಲಿ ಭೂಮಿ ಪೂಜೆ ಮಾಡಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ನೂತನ ನ್ಯಾಯಾಲಯದ ಕಟ್ಟಡ, ನಗರಸಭೆ ಕಟ್ಟಡ, ತಾಲೂಕು ಕಚೇರಿ ಕಟ್ಟಡ ಸೇರಿದಂತೆ ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗಿದೆ. ನೂತನ ತಾಲೂಕು ಕಚೇರಿ ನಿರ್ಮಾಣಕ್ಕೆ ಸೂಕ್ತ ಸ್ಥಳ ಗುರುತಿಸಲಾಗುತ್ತಿದೆ. ಜಾಗ ದೊರೆತ ತಕ್ಷಣ ಆಧುನಿಕ ಸೌಲಭ್ಯಗಳೊಂದಿಗೆ ತಾಲೂಕು ಆಡಳಿತ ಭವನ ನಿರ್ಮಿಸಲಾಗುವುದು ಎಂದರು.

ನಗರದಲ್ಲಿ ಪೊಲೀಸ್ ಉಪ ವಿಭಾಗದ ಕಚೇರಿ ತೆರೆಯುವ ಸಂಬಂಧ ಕಳೆದ ವರ್ಷವೇ ಅಂತಿಮ ಹಂತದಲ್ಲಿತ್ತು. ಆದರೆ, ಕಾರಣಾಂತರಗಳಿಂದ ತಡೆಯಾಗಿದೆ. ಶೀಘ್ರ ಗೃಹ ಸಚಿವರ‌ ಜೊತೆ ಚರ್ಚಿಸಿ ಡಿವೈಎಸ್ಪಿ ಕಚೇರಿ ತೆರೆಯಲು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಪಿಎಂಗೆ ಪತ್ರ, ರೈತರ ಬೇಡಿಕೆ ಈಡೇರಿಕೆಗೆ ಕ್ರಮ:

ರೈತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗೆ ಪತ್ರ ಬರೆದಿದ್ದು, ಪ್ರಧಾನಿಗಳ ಭೇಟಿಗೆ ನಿಯೋಗ ತೆರಳಿ ಶೀಘ್ರ ಬೇಡಿಕೆಗಳ ಈಡೇರಿಗೆ ಕ್ರಮ ವಹಿಸಲಾಗುವುದು. ತಾಲೂಕಿನ ಕೊನೇ ಭಾಗದ ರೈತರ ಜಮೀನುಗಳಿಗೆ ಸರಾಗವಾಗಿ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಈ ವೇಳೆ ಕಸಾಪ ತಾಲೂಕು ಅಧ್ಯಕ್ಷ ಸುನಿಲ್ ಕುಮಾರ್, ಎಂ.ಎಚ್.ಚನ್ನೇಗೌಡ ವಿದ್ಯಾನಿಲಯದ ಕಾರ್ಯದರ್ಶಿ ಅಪೂರ್ವಚಂದ್ರು, ನಗರಸಭೆ ಮಾಜಿ ಸದಸ್ಯರಾದ ವನಿತಾ ಸಿದ್ದರಾಜು, ಸಚ್ಚಿನ್, ಮನ್ಸೂರ್ ಖಾನ್, ಕೆಡಿಪಿ ಸದಸ್ಯ ಅರುವನಹಳ್ಳಿ ಸಿದ್ದರಾಜು, ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ರಾಜೇಂದ್ರ, ಮುಖಂಡರಾದ ಅರುಣ್, ರವಿ, ಆರಿಫ್, ಶಿವಪುರ ಕೀರ್ತಿ, ಕುಶ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರು ದೃಢ ಮನಸ್ಸಿನಿಂದ ಹೆಜ್ಜೆ ಇಟ್ಟರೆ ಅಸಾಧ್ಯವಾದದ್ದು ಯಾವುದೂ ಇಲ್ಲ
ಟನ್ ಕಬ್ಬಿನ ದರ ಹೆಚ್ಚಿಸುವಂತೆ ಸಕ್ಕರೆ ಸಚಿವ ರುದ್ರಪ್ಪ ಲಮಾಣಿಗೆ ಮನವಿ ಸಲ್ಲಿಕೆ