ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಹಮ್ಮಿಕೊಂಡಿದ್ದ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಪ್ರಕಾಶ ಗುಡಿಮನಿ ನೇತೃತ್ವದಲ್ಲಿ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು. ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಕುರಿತು ಮಾಹಿತಿ ನೀಡಿದರು. ನಂತರ ಪಟ್ಟಣದಲ್ಲಿ ಸುಮಾರು ₹ 2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಡಿವೈಎಸ್ಪಿ ಟಿ.ಎಸ್.ಸುಲ್ಫಿ ಸೇರಿದಂತೆ ತಾಲೂಕು ವಿವಿಧ ಇಲಾಖೆಗಳ ಮಟ್ಟದ ಅಧಿಕಾರಿಗಳ ಜೊತೆ ಚಾಲನೆ ನೀಡಿದರು.ನಂತರ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ನಿಂಗಣ್ಣ ಬಿರಾದಾರ, ತಾಪಂ ಇಒ ಭಾರತಿ ಚಲುವಯ್ಯ, ಡಿವೈಎಸ್ಪಿ ಟಿ.ಎಸ್.ಸುಲ್ಪಿ, ಪಿಎಸ್ಐ ಸಚಿನ್ ಆಲಮೇಲಕರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಭವಾನಿ ಪಾಟೀಲ, ಮುಖಂಡರಾದ ರಮೇಶ ಆಸಂಗಿ, ವಿನಾಯಕ ಗುಣಸಾಗರ, ಅಶೋಕ ಚಲವಾದಿ, ಶರಣು ಶಿಂದೆ, ಲಕ್ಕಪ್ಪ ಬಡಿಗೇರ, ಮಲ್ಕಪ್ಪ ಬಾಗೇವಾಡಿ, ನಜೀರ ಬೀಳಗಿ, ರಾಜಕುಮಾರ ಸಿಂದಗೇರಿ, ಬಸವರಾಜ ಇಂಗಳಗಿ, ಯಮನಪ್ಪ ಭೂತಾಳಿ, ಪರಸು ಬಡಿಗೇರ, ಅಶೋಕ ಗುಡಿಸಲಮನಿ, ಪ್ರಶಾಂತ ದೊಡ್ಡಮನಿ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘಟನೆಗಳ ಮುಖಂಡರು ಹಾಗೂ ಪಟ್ಟಣದ ಪ್ರಮುಖರು ಇದ್ದರು.----ಬಾಕ್ಸ್ಇದು ಕನ್ನಡಪ್ರಭ ವರದಿಯ ಫಲಶ್ರುತಿ
--------
ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಾಕಷ್ಟು ಜಾಗ ಲಭ್ಯವಿದೆ. ಸರ್ಕಾರದ ನಿಯಮದ ಪ್ರಕಾರ ಭವನ ನಿರ್ಮಾಣ ಮಾಡಬೇಕಾಗಿದೆ. ಜಿಲ್ಲಾ ಎಡಿಸಿ ಡಾ.ಔದ್ರಾಮ್ ಅವರು ಹೋರಾಟಗಾರರ ಮನವೊಲಿಸಿದ್ದಾರೆ. ಸ್ಥಳೀಯ ಮುಖಂಡರ ಒತ್ತಾಯದ ಮೇರೆಗೆ ಸರ್ಕಾರ ಹೆಚ್ಚಿನ ಅನುದಾನ ನೀಡಿದರೆ. ಇನ್ನು ಹೆಚ್ಚಿನ ಸೌಲಭ್ಯ ದೊರಕಿಸಿಕೊಡಲಾಗುವುದು. ಪಟ್ಟಣ ಸೇರಿದಂತೆ ಬಮ್ಮನಜೋಗಿ ಗ್ರಾಮದ ಅಂಬೇಡ್ಕರ್ ಭವನಕ್ಕೆ ಇಂದು ಚಾಲನೆ ನೀಡಲಾಯಿತು.-ಮಹೇಶ ಪೋತದಾರ, ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ