ಇಲವಾಲದಲ್ಲಿ ಅಂಬೇಡ್ಕರ್ ಥೀಮ್ ಪಾರ್ಕ್‌ ನಿರ್ಮಾಣ: ಸಚಿವ ಡಾ.ಎಚ್.ಸಿ.ಮಹದೇವಪ್ಪ

KannadaprabhaNewsNetwork |  
Published : Apr 16, 2026, 01:15 AM IST
41 | Kannada Prabha

ಸಾರಾಂಶ

ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ದೇಶದ ಆರ್ಥಿಕತೆ, ನಿರುದ್ಯೋಗ, ನೀರಿನ ಸಮಸ್ಯೆ ಸೇರಿದಂತೆ ಹಲವಾರು ಜ್ವಲಂತ ಸಮಸ್ಯೆಗೆ ಪರಿಹಾರವಿದೆ. ಅವುಗಳನ್ನು ಸಮಾನ್ಯ ಜನರಿಗೆ ಅರ್ಥವಾಗುವ ರೀತಿ ವಿಷಯ ‌ತಿಳಿಸಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ತಾಲೂಕಿನ ಇಲವಾಲ ಹೋಬಳಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟ, ಸಾಧನೆ, ರಾಜತಾಂತ್ರಿಕತೆ‌ ಮತ್ತು ತತ್ವ ತಿಳಿಸಲು ಥೀಮ್ ಪಾರ್ಕ್‌ ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಸಭಾಂಗದಲ್ಲಿ ಬುಧವಾರ ಡಾ.ಬಿ.ಆರ್.ಅಂಬೇಡ್ಕರ್ ಥೀಮ್ ಪಾರ್ಕ್‌ ನಿರ್ಮಾಣ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಡನೆ ಸಭೆ ನಡೆಸಿ ಮಾತನಾಡಿದ ಅವರು, ಥೀಮ್ ಪಾರ್ಕ್‌ ಅಥವಾ ಮ್ಯೂಸಿಯಂ ನಿರ್ಮಾಣ ಮಾಡಲು 10 ಎಕರೆ ಭೂಮಿಯನ್ನು ಕಾಯ್ದಿರಿಸಲಾಗಿದೆ. ಡಿ.ಪಿ.ಆರ್ ತಯಾರಿಸಿ ನೀಲಿ‌ ನಕ್ಷೆಯೊಂದಿಗೆ ಮ್ಯೂಸಿಯಂ ನಿರ್ಮಾಣಕ್ಕೆ ಬೇಕಿರುವ ಅನುದಾನದೊಂದಿಗೆ ಯೋಜನೆ ಸಿದ್ಧವಾಗಬೇಕು ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ದೇಶದ ಆರ್ಥಿಕತೆ, ನಿರುದ್ಯೋಗ, ನೀರಿನ ಸಮಸ್ಯೆ ಸೇರಿದಂತೆ ಹಲವಾರು ಜ್ವಲಂತ ಸಮಸ್ಯೆಗೆ ಪರಿಹಾರವಿದೆ. ಅವುಗಳನ್ನು ಸಮಾನ್ಯ ಜನರಿಗೆ ಅರ್ಥವಾಗುವ ರೀತಿ ವಿಷಯ ‌ತಿಳಿಸಬೇಕು ಎಂದರು.

ಬಾಬಾಸಾಹೇಬರ ಹುಟ್ಟಿನಿಂದ ಪರಿನಿರ್ವಾಣದವರೆಗೆ ಅವರ ಕಾಲಘಟ್ಟದ ಮುಖ್ಯ ಸಂಗತಿಗಳು ಸೇರಿದಂತೆ ಸಾಹು ಮಹಾರಾಜರು ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರುಗಳ ಚಿಂತನೆಗಳನ್ನು‌ ಇಲ್ಲಿ ಅನಾವರಣವಾಗಬೇಕು ಎಂದು ಸೂಚಿಸಿದರು.

ಮೈಸೂರು ಐತಿಹಾಸಿಕ ಪ್ರವಾಸಿ ತಾಣವಾಗಿದ್ದು, ಥೀಮ್ ಪಾರ್ಕ್‌ ಹೆಚ್ಚಿನ‌ ಜನರನ್ನು ಆಕರ್ಷಿಸುವುದರ ಜೊತೆಗೆ ಹೊಸತನದಿಂದ ಕೂಡಿರಲಿ. ಪ್ರತಿಯೊಬ್ಬ ನಾಗರಿಕರು ಮೂಲಭೂತ ಹಕ್ಕು ಚಲಾಯಿಸುವ ಮೊದಲು ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ನೆನೆಯಬೇಕು. ಅವರು ನೀಡಿರುವ ಸಂವಿಧಾನದಿಂದ ನಾವು ಇಂದು ಉತ್ತಮ ಜೀವನ‌ ಜೀವಿಸುತ್ತಿದ್ದೇವೆ. ಮೈಸೂರಿನಲ್ಲಿ ನಿರ್ಮಾಣವಾಗುವ ಥೀಮ್ ಪಾಕ್೯ನ ನೀಲಿ‌ನಕ್ಷೆ ಮಾಡುವ ಮೊದಲು ನಿರ್ಮಾಣದ ಬಗ್ಗೆ ಮುಖ್ಯ ವ್ಯಕ್ತಿಗಳಿಂದ ಮಾಹಿತಿಗಳನ್ನು ಕ್ರೊಢೀಕರಿಸಿ ಉತ್ತಮವಾಗಿ ಮ್ಯೂಸಿಯಂ ಮೂಡಿ ಬರಲಿ ಎಂದರು.

ಪ್ರತಿಯೊಬ್ಬರಿಗೂ ಸಮಾಜಿಕ ನ್ಯಾಯ ನೀಡಲು ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ಬಗ್ಗೆ ಹಲವಾರು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವುಗಳು ಕೂಡ ಮ್ಯೂಸಿಯಂನಲ್ಲಿ ಅನಾವರಣವಾಗಲಿ. ಸಾಮಾನ್ಯ ಜನರಿಗೂ ಕೂಡ ಪ್ರತಿಯೊಂದು ವಿಷಯ ಸುಲಭವಾಗಿ ತಲುಪುವ ರೀತಿ ಇರಲಿ ಎಂದು ಅವರು ಕಿವಿಮಾತು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ.ಆರ್. ರಕ್ಷಿತ್ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿರುದ್ಯೋಗಿಗಳಿಗೆ ಉದ್ಯೋಗ ಮೇಳ ವರದಾನ
ಗ್ರಾಮದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಕೆರೆಗಳ ಪಾತ್ರ ಅತಿಮುಖ್ಯ