ಬಾಬಾ ಸಾಹೇಬರ ಹೊಸ ಪುತ್ಥಳಿ, ಮಂಟಪ ನಿರ್ಮಾಣಕ್ಕೆ ಶೀಘ್ರ ಚಾಲನೆ

KannadaprabhaNewsNetwork | Published : Dec 7, 2024 12:34 AM

ಸಾರಾಂಶ

ಪಟ್ಟಣದ ಪ್ರವಾಸಿ ಮಂದಿರ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಕ್ಯಾಂಡಲ್ ಬೆಳಗಿಸಿ ಗೌರವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮಧ್ಯೆ ಬಾಬಾ ಸಾಹೇಬರ ಹೊಸ ಪುತ್ಥಳಿ ಮತ್ತು ಮಂಟಪ ನಿರ್ಮಾಣ ಕಾರ್ಯವನ್ನು ಶೀಘ್ರ ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭರವಸೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಕ್ಯಾಂಡಲ್ ಬೆಳಗಿಸಿ ಗೌರವ ಸಲ್ಲಿಸಿದರು.

ನಂತರ ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಮುಖಂಡರು ಪ್ರವಾಸಿ ಮಂದಿರ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮಧ್ಯೆ ಅಂಬೇಡ್ಕರ್ ಅವರ ಪುತ್ಥಳಿ ಹಾಗೂ ಮಂಟಪ ನಿರ್ಮಿಸುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮಧ್ಯೆ ಆಕರ್ಷಕ ಮಂಟಪದಲ್ಲಿ ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಿಸಬೇಕು ಎಂಬ ಮುಖಂಡರ ಆಶಯಗಳಿಗೆ ಬದ್ಧರಾಗಿ ಹೊಸದಾಗಿ ಭವ್ಯ ಮಂಟಪ ನಿರ್ಮಿಸಿ, ಬಾಬಾ ಸಾಹೇಬರ ಪುತ್ಥಳಿ ನಿರ್ಮಾಣ ಮಾಡಲಾಗುವುದು. ಈಗಾಗಲೇ ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು. ಇನ್ನೂ ಒಂದೂವರೆ ವರ್ಷದೊಳಗೆ ಕಾರ್ಯ ನಡೆಯಲಿದೆ ಎಂದು ಹೇಳಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕನಸು ಹಾಗೂ ಸಂವಿಧಾನದ ಆಶಯಗಳು ಇನ್ನೂ ಈಡೇರದಿರುವುದು ದುರದೃಷ್ಟಕರ ಸಂಗತಿ. ಇಡೀ ವಿಶ್ವಕ್ಕೆ ಮಾದರಿಯಾದ ದೇಶದ ಎಲ್ಲರಿಗೂ ಸಮಾನತೆಯ ಜೊತೆಗೆ ಸ್ವಾಭಿಮಾನದ ಬದುಕು ಕಟ್ಟಿ ಕೊಡುವ ಶ್ರೇಷ್ಠ ಸಂವಿಧಾನವನ್ನು ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ವಿಶ್ವದ ಆರಾಧ್ಯ ದೈವರಾಗಿದ್ದಾರೆ ಎಂದರು.

ಡಿ.6 ಅವರ ಕೋಟ್ಯಾಂತರ ಅಭಿಮಾನಿಗಳ ಪಾಲಿಗೆ ಅತ್ಯಂತ ನೋವಿನ ದಿನವಾಗಿದೆ. ಬಾಬಾ ಸಾಹೇಬರ ಕನಸು ಇನ್ನೂ ಈಡೇರದಿರುವುದು ದುರದೃಷ್ಟಕರ ಸಂಗತಿ ಎಂದು ಗದ್ಗದಿತರಾದರು.

ಈ ವೇಳೆ ತಹಸೀಲ್ದಾರ್ ಎಸ್.ವಿ.ಲೋಕೇಶ್, ಡಿವೈಎಸ್ಪಿ ವಿ.ಕೃಷ್ಣಪ್ಪ, ತಾಪಂ ಇಒ ಎಚ್.ಜಿ.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೊಡ್ಡಯ್ಯ, ಸಿ.ಪಿ.ರಾಜು, ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್, ಪುರಸಭೆ ಸದಸ್ಯರಾದ ಪ್ರಮೀಳಾ, ಎಂ.ಬಸವರಾಜು, ಆನಂದ್ ಕುಮಾರ್, ಐಯೂಬ್ ಪಾಷ, ಮಾರೇಹಳ್ಳಿ ಬಸವರಾಜು, ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ತಾಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ್ ಕುಮಾರ್, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸಂಜಯ್, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಸೋಮಶೇಖರ್, ಹಿಂದುಳಿದ ವರ್ಗಗಳ ಇಲಾಖೆ ನಾಗರಾಜು, ಮುಖಂಡರಾದ ಸಿ.ಎಂ.ವೇದಮೂರ್ತಿ, ಕಿರಣ್ಶಂಕರ್, ಆನಂದ್, ಮಹದೇವಯ್ಯ, ಕೃಷ್ಣ, ವೆಂಕಟೇಶ್, ಎಂ.ಎನ್.ಜಯರಾಜು, ರೋಹಿತ್ ಗೌಡ, ಚೇತನ್ ನಾಯಕ್, ಪ್ರಸಾದ್, ಚಿಕ್ಕಸ್ವಾಮಿ ಇದ್ದರು.

Share this article