ಕನ್ನಡಪ್ರಭ ವಾರ್ತೆ ಜಗಳೂರು
ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಕಟ್ಟಡ ನಿರ್ಮಾಣ ಮಾಡಿಕೊಡುತ್ತೇನೆ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಭರವಸೆ ನೀಡಿದರು.ಪಟ್ಟಣದ ಗುರು ಭವನದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದಿಂದ 2024-25ನೇ ಸಾಲಿನ ವಾರ್ಷಿಕ ಸಭೆ ಹಾಗೂ ಶಾಸಕರು, ಕುಟುಂಬ ಪಿಂಚಣಿದಾರರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಗಳೂರು ಸಂಘದ ಹಿರಿಯರಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ನಾನು ಸಹ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸಾಮಾನ್ಯ ಸದಸ್ಯನಾಗಿದ್ದೇನೆ ಎಂದು ಹೇಳಲು ಹೆಮ್ಮೆಯಾಗುತ್ತಿದೆ. ಈಜಬೇಕು, ಈಜಿ ಜಯಿಸಬೇಕು. ಮನುಷ್ಯನಿಗೆ ಕಷ್ಟ ಬರುತ್ತೆ. ಮರಕ್ಕೆ ಬರುತ್ತಾ ಅಂತ ಹಿರಿಯರು ಹೇಳುತ್ತಾರೆ. ಹಾಗೆಯೇ ಹಿರಿಯರಾದ ನಾವು ಬದುಕಿಗೆ ದಾರಿದೀಪವಾಗುವ ಪುಸ್ತಕಗಳು, ಆಧ್ಯಾತ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಂಡರೆ ಬದುಕು ಸಾರ್ಥಕವಾಗುತ್ತದೆ ಎಂದರು.ಸಂಘದ ತಾಲೂಕು ಅಧ್ಯಕ್ಷ ಎ.ಪಾಲಯ್ಯ ಮಾತನಾಡಿ, ನಿವೃತ್ತ ನೌಕರರಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸಂಘ ಮಾಡಿಕೊಡಲು ಪ್ರಯತ್ನಿಸುತ್ತದೆ. ಸಹಕಾರ ನೀಡುತ್ತಿರುವ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಪ್ಪ ಅವರು ಕಳೆದ ಒಂದು ವರ್ಷದಿಂದ ನಿವೃತ್ತ ಸಂಘದಲ್ಲಾದ ಚಟುವಟಿಕೆಗಳ ಬಗ್ಗೆ ವಾರ್ಷಿಕ ಸಭೆಯಲ್ಲಿ ಹಿಂದಿನ ಸಭೆ ನಡಾವಳಿಕೆ ಮಂಡನೆ ಮಾಡಿದರು. ನಂತರ ಸಭೆ ಅನುಮೋದನೆ ನೀಡಿತು. ಗೌರವಾಧ್ಯಕ್ಷ ಕೆ.ಶೇಖರಪ್ಪ ಅಧ್ಯಕ್ಷತೆ ವಹಿಸಿದ್ದರು.75ನೇ ವರ್ಷಕ್ಕೆ ಪಾದಾರ್ಪಣೆಗೊಂಡ ನಿವೃತ್ತ ನೌಕರರಿಗೆ, ಕುಟುಂಬ ಪಿಂಚಣಿದಾರರಿಗೆ ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
ಸರ್ಕಾರಿ ನೌಕರರ ಸಂಘದ ಹಿರಿಯ ನಾಗರೀಕರ ಸಂಘದ ಅಧ್ಯಕ್ಷ ಸಿ.ತಿಪ್ಪೇಸ್ವಾಮಿ, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷರಾದ ಜಿ.ಎಸ್. ವೀಣಾ, ಪಟ್ಟಣ ಪಂಚಾಯಿತಿ ಸದಸ್ಯರಾದ ಲಲಿತಮ್ಮ ಶಿವಣ್ಣ, ಸಹ ಕಾರ್ಯದರ್ಶಿ ಎಂ.ಎಸ್. ಪಾಟೀಲ್, ಉಪಾಧ್ಯಕ್ಷ ಗುರುಮೂರ್ತಿ, ಪಪಂ ಮುಖ್ಯಾಧಿಕಾರಿ ಲೋಕ್ಯಾ ನಾಯ್ಕ್ , ಜನಾಬ್ ನಜೀರ್ ಅಹಮ್ಮದ್, ಸುಂಕಪ್ಪ, ಬಿ.ಕೆ. ಮಂಜುನಾಥ್, ಜಿ.ಮಲ್ಲಿಕಾರ್ಜುನ ಎಂ. ಹುಚ್ಚಲಿಂಗಯ್ಯ, ಎಸ್.ಬಿ. ರುದ್ರಪ್ಪ, ಎ.ಕೆ.ದೇವೇಂದ್ರಪ್ಪ, ಬಿ.ಮಹೇಶ್ವರಪ್ಪ, ಎಂ.ಡಿ. ಆಂಜಿನೇಯಾ, ಎಸ್. ಚಂದ್ರಪ್ಪ, ಯಶೋದಮ್ಮ, ರಾಜಪ್ಪ, ಇತರರು ಇದ್ದರು.