ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಎಂ.ಹೊಸೂರು ಗೇಟ್ ಬಳಿಯಿರುವ ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಅನುಸಂಧಾನ ಪರಿಷತ್ ಮುಂಭಾಗದ ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದ ಸಿಎಸ್‌ಆರ್ ನಿಧಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿದರು.
ತಾಲೂಕಿನಲ್ಲಿ ಸ್ಥಾಪಿತಗೊಂಡಿರುವ ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗೆ ಪ್ರತಿನಿತ್ಯ ದೂರದ ಊರುಗಳಿಂದ ನೂರಾರು ಮಂದಿ ಜನರು ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಬಂದು ಹೋಗುವ ಮತ್ತು ಈ ಭಾಗದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಿಎಸ್‌ಆರ್ ನಿಧಿಯಲ್ಲಿ ಸುಸಜ್ಜಿತ ಪ್ರಯಾಣಿಕರ ತಂಗುದಾಣ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಆಸ್ಪತ್ರೆ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.ಸಾರಿಗೆ ಬಸ್ ನಿಲುಗಡೆಗೆ ಮನವಿ ಸಲ್ಲಿಕೆ:
ಆಸ್ಪತ್ರೆಗೆ ಬರುವ ಜನರ ಅನುಕೂಲಕ್ಕಾಗಿ ಈ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಬಗೆಯ ಸಾರಿಗೆ ಬಸ್‌ಗಳ ನಿಲುಗಡೆ ಮಾಡಿಸಿಕೊಡುವಂತೆ ಆಸ್ಪತ್ರೆ ಸಹಾಯಕ ನಿರ್ದೇಶಕ ಹಾಗೂ ನೋಡಲ್ ಅಧಿಕಾರಿ ಡಾ.ಎಚ್.ಎಸ್.ವಾದಿರಾಜ್ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಬಗ್ಗೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದು ಕೇಂದ್ರ ಸಚಿವರು ಭರವಸೆ ನೀಡಿದರು.