ಬಸವಣ್ಣರಿಂದ ಜಾತಿ, ವರ್ಗ, ವರ್ಣರಹಿತ ಸಮಾಜ ನಿರ್ಮಾಣ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ

KannadaprabhaNewsNetwork |  
Published : Feb 18, 2024, 01:30 AM IST
ಕ್ಯಾಪ್ಷನಃ17ಕೆಡಿವಿಜಿ41ಃದಾವಣಗೆರೆಯಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕರಾದ ಶ್ರೀ ಜಗಜ್ಯೋತಿ ಬಸವಣ್ಣ ಅವರ ಭಾವಚಿತ್ರ ಅನಾವರಣದ ಸಮಾರಂಭವನ್ನು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಉದ್ಘಾಟಿಸಿದರು. ..........ಕ್ಯಾಪ್ಷನಃ17ಕೆಡಿವಿಜಿ42ಃದಾವಣಗೆರೆಯಲ್ಲಿ ನಡೆದ ಶ್ರೀ ಜಗಜ್ಯೋತಿ ಬಸವಣ್ಣ ಅವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಶ್ರೀ ಬಸವಪ್ರಭು ಸ್ವಾಮೀಜಿ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಗಣ್ಯರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ನಡೆದ ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನದಲ್ಲಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಲಾಗಿತ್ತು. ನಮ್ಮ ಮನವಿ ಸ್ವೀಕರಿಸಿ ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಸಂತಸ ತಂದಿದೆ. ರಾಜ್ಯಮಟ್ಟದ ಸಮಾರಂಭ ಬಸವಕಲ್ಯಾಣದಲ್ಲಿ ನಡೆಯಲಿದೆ ಎಂದ ಅವರು ಅಂಬೇಡ್ಕರ್ ಭವನ ಪ್ರತಿ ಜಿಲ್ಲೆಯಲ್ಲಿ ಮಾಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ದಾವಣಗೆರೆ

ವೀರಶೈವ ಧರ್ಮವನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.

ಇಲ್ಲಿನ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಿದ್ದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣ ಭಾವಚಿತ್ರ ಅನಾವರಣದ ಸಮಾರಂಭ ಉದ್ಘಾಟಿಸಿ ಮಾತನಾಡಿ ಬಸವಣ್ಣ ಕಟ್ಟುನಿಟ್ಟಿನ ಭಾವನೆ ತೊರೆದು ವೀರಶೈವ ಧರ್ಮ ಅಪ್ಪಿ ವೀರಶೈವರ ಉದ್ಧಾರಕ್ಕೆ ಶ್ರಮಿಸಿದರು. ಬಸವಣ್ಣನವರು ಹೆಣ್ಣು ಮಕ್ಕಳಿಗೆ ಸ್ವಾತಂತ್ರ್ಯ ಕೊಡಿಸಿದರು. ಹೆಣ್ಣು ಮಕ್ಕಳು ಅಷ್ಟೇ ಅಲ್ಲದೇ ಜಾತಿ, ವರ್ಗ, ವರ್ಣರಹಿತ ಸಮಾಜ ನಿರ್ಮಾಣಕ್ಕೆ ಪ್ರಾತಿನಿಧ್ಯ ನೀಡಿ ಆಡಳಿತ ನಡೆಸಿದವರು ಬಸವಣ್ಣ.

ಜಿಲ್ಲೆಯಲ್ಲಿ ನಡೆದ ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನದಲ್ಲಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಲಾಗಿತ್ತು. ನಮ್ಮ ಮನವಿ ಸ್ವೀಕರಿಸಿ ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಸಂತಸ ತಂದಿದೆ. ರಾಜ್ಯಮಟ್ಟದ ಸಮಾರಂಭ ಬಸವಕಲ್ಯಾಣದಲ್ಲಿ ನಡೆಯಲಿದೆ ಎಂದ ಅವರು ಅಂಬೇಡ್ಕರ್ ಭವನ ಪ್ರತಿ ಜಿಲ್ಲೆಯಲ್ಲಿ ಮಾಡಲಾಗುತ್ತಿದೆ, ಅದೇ ರೀತಿ ಬಸವ ಭವನ ನಿರ್ಮಾಣ ಮಾಡಬೇಕೆಂದು ಮನವಿ ಮಾಡಿದ್ದೇವೆ ಎಂದರು.

ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಮಹಾಸಭಾದ ನಿರ್ಣಯದಂತೆ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಿಸಿದೆ. ಬಸವಣ್ಣನವರ ಹಾದಿಯಲ್ಲಿ ನಡೆದರೆ, ಈ ನಾಡು ಶಾಂತಿಯುತ ಸರ್ವಜನಾಂಗದ ನಾಡಾಗುತ್ತದೆ. ಬಸವಣ್ಣನ ಅನುಯಾಯಿಗಳಾದರೆ ಶಾಂತಿ ನೆಲೆಸಿ, ನೆಮ್ಮದಿ ಸಿಗಲಿದೆ. ಬಸವಣ್ಣನವರ ತತ್ವ ಸಿದ್ದಾಂತ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಮಾತ್ರ ಶಾಂತಿ, ಸಮಾನತೆ ನ್ಯಾಯ ಪಡೆಯಲು ಸಾಧ್ಯವಾಗುತ್ತದೆ. ಬಸವಣ್ಣನವರ ತತ್ವ ಜೀವನದಲ್ಲಿ ಅಳವಡಿಸಿದಾಗ ಮಾತ್ರ ಅವರಿಗೆ ಕೃತಜ್ಞತೆ ಸಲ್ಲಿಸಿದಂತಾಗುತ್ತದೆ. ಬಸವಣ್ಣ ಎಂದರೆ ಅದು ಕಾಯಕಯೋಗಿ ಬಸವಣ್ಣ, ಇವರ ಹೆಸರು ನಾಮಕರಣ ಮಾಡುವ ಮೂಲಕ ಅನುಯಾಯಿಗಳಾಗಬೇಕು ಎಂದರು.

ದಾವಣಗೆರೆ ವಿಶ್ವವಿದ್ಯಾನಿಲಯ ಪ್ರಾಧ್ಯಾಪಕ ಎಚ್.ವಿಶ್ವನಾಥ್ ಉಪನ್ಯಾಸ ನೀಡಿದರು. ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಪಂ ಸಿಇಒ ಸುರೇಶ್.ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಪಂ ಉಪ ಕಾರ್ಯದರ್ಶಿ ಕೃಷ್ಣನಾಯ್ಕ, ಅಪರ ಜಿಲ್ಲಾಧಿಕಾರಿ ಸೈಯದಾ ಆಫ್ರಿನ್‌ಬಾನು ಎಸ್.ಬಳ್ಳಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಿಕಿ ವಾಸಂತಿ ಉಪ್ಪಾರ್, ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನಿ ಶಿವಕುಮಾರ, ಬಸವ ಬಳಗದ ಮಹಾಂತೇಶ ಅಗಡಿ, ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ, ರುದ್ರಮುನಿ ಆವರಗೆರೆ, ರಮೇಶ್ ಇತರರಿದ್ದರು. ಕಾರ್ಯಕ್ರಮದಲ್ಲಿ ಪುಟ್ಟಪುಟ್ಟಮಕ್ಕಳು ಬಸವಾದಿ ಶರಣದ ವೇಶಭೂಷಣದಲ್ಲಿ ಎಲ್ಲರ ಕಣ್ಮನ ಸೆಳೆದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ